Delhi ಆಹಾರ ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ, ಮೂವರು ಮೃತ್ಯು
Team Udayavani, Jun 8, 2024, 12:07 PM IST
ನವದೆಹಲಿ: ಆಹಾರ ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ (ಜೂನ್ 08) ಉತ್ತರ ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ
ಶ್ಯಾಮ್ ಕೃಪಾ ಫುಡ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ನಸುಕಿನ ವೇಳೆ ಅಗ್ನಿ ಅನಾಹುತ ಸಂಭವಿಸಿರುವ ಬಗ್ಗೆ ಮಾಹಿತಿ ಬಂದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಫ್ಯಾಕ್ಟರಿಯೊಳಗೆ 9 ಮಂದಿ ಕಾರ್ಮಿಕರಿದ್ದರು ಎಂದು ವರದಿ ಹೇಳಿದೆ.
ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ತಕ್ಷಣವೇ ಎಸ್ ಎಚ್ ಆರ್ ಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅವರಲ್ಲಿ ಮೂವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಫ್ಯಾಕ್ಟರಿಯಲ್ಲಿ ಒಣ ಹೆಸರುಬೇಳೆಯನ್ನು ಗ್ಯಾಸ್ ನಲ್ಲಿ ಹುರಿಯುತ್ತಿದ್ದಾಗ ಗ್ಯಾಸ್ ಪೈಪ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.