ಪ್ರತಿಭಟನೆ ಕಾನೂನು ಬಾಹಿರ-ಹೈಕೋರ್ಟ್;ಮಧ್ಯಪ್ರದೇಶದಲ್ಲಿ 3ಸಾವಿರ ಕಿರಿಯ ವೈದ್ಯರಿಂದ ರಾಜೀನಾಮೆ
ಉಚಿತ ಚಿಕಿತ್ಸೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿರುವುದಾಗಿ ವರದಿ ತಿಳಿಸಿದೆ.
Team Udayavani, Jun 4, 2021, 11:29 AM IST
ಭೋಪಾಲ್:ಮುಷ್ಕರ ನಡೆಸುವುದನ್ನು ಕೈಬಿಟ್ಟು, 24 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಸುಮಾರು 3000 ಕಿರಿಯ ವೈದ್ಯರು ರಾಜೀನಾಮೆ ನೀಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:ಶೂಟಿಂಗ್ ಇಲ್ಲದೆ ಬೋರು.. ಕರಾವಳಿ ಬೆಡಗಿ ಸೋನಲ್ ಲಾಕ್ ಡೌನ್ ಡೈರಿ
ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ತಿಳಿಸಿರುವ ಕಿರಿಯ ವೈದ್ಯರು, ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಕಾನೂನು ಬಾಹಿರ ಎಂದು ಹೈಕೋರ್ಟ್ ತಿಳಿಸಿತ್ತು.
ರಾಜ್ಯದ ಆರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮಾರು 3ಸಾವಿರ ಕಿರಿಯ ವೈದ್ಯರು ತಮ್ಮ ರಾಜೀನಾಮೆಯನ್ನು ಆಯಾ ಮೆಡಿಕಲ್ ಕಾಲೇಜುಗಳ ಡೀನ್ ಗೆ ಸಲ್ಲಿಸಿದ್ದಾರೆ ಎಂದು ಮಧ್ಯಪ್ರದೇಶದ ಕಿರಿಯ ವೈದ್ಯರ ಸಂಘದ(ಎಂಪಿಜೆಡಿಎ) ಅಧ್ಯಕ್ಷ ಡಾ.ಅರವಿಂದ್ ಮೀನಾ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಸೋಮವಾರದಿಂದ ಪ್ರತಿಭಟನೆ ಆರಂಭವಾಗಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಕಿರಿಯ ವೈದ್ಯರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದರು. ಸ್ಟೈಫಂಡ್ ಹೆಚ್ಚಳ ಹಾಗೂ ಒಂದು ವೇಳೆ ಮಾರಣಾಂತಿಕ ಕೋವಿಡ್ ಸೋಂಕು ತಮ್ಮ ಕುಟುಂಬ ಸದಸ್ಯರಲ್ಲಿ ಪತ್ತೆಯಾದರೆ ಉಚಿತ ಚಿಕಿತ್ಸೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.