ಕೊಡಗು:ಒಂದೇ ಶಾಲೆಯ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್
Team Udayavani, Oct 28, 2021, 4:18 PM IST
ಮಡಿಕೇರಿ: ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.
ವಿದ್ಯಾರ್ಥಿಗಳು 9 ರಿಂದ 12 ನೇ ತರಗತಿಗೆ ಸೇರಿದವರಾಗಿದ್ದು, ಯಾವುದೇ ಗಂಭೀರ ರೋಗ ಲಕ್ಷಣಗಳು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಗಾಳಿಬೀಡು ಅವರು ಗುರುವಾರ ಶಾಲಾ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲೆಯ ಕೆಲ ವಿದ್ಯಾರ್ಥಿಗಳಿಗೆ ಒಂದು ವಾರದಿಂದ ಶೀತ ಮತ್ತು ಕೆಮ್ಮು ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರಲ್ಲಿ 270 ಮಂದಿಯನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 22 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿತ್ತು, ನಂತರ ನಡೆಸಿದ ಪರೀಕ್ಷೆಯಲ್ಲಿ ಇನ್ನೂ 10 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಬಂದಿದೆ.ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು,ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಜಿಲ್ಲೆಯಲ್ಲಿ 8 ರಿಂದ 10 ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದವು, ಆದರೆ ದೈನಂದಿನ ಎಣಿಕೆ ಈಗ 30 ಕ್ಕೆ ಏರಿದೆ.
Karnataka: Kodagu Deputy Commissioner Dr BC Satish visits a school in Galibeedu where 32 students tested positive for #COVID19. All students are asymptomatic and are being observed. pic.twitter.com/IoSKUkbTIB
— ANI (@ANI) October 28, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.