Karnataka: ರಾಜ್ಯಕ್ಕೆ 3,647 ಕೋಟಿ ರೂ. ವಿಶೇಷ ಅನುದಾನ
ಬಂಡವಾಳ ಹೂಡಿಕೆಗೆ 16 ರಾಜ್ಯಗಳಿಗೆ ಕೇಂದ್ರ ಮಂಜೂರು
Team Udayavani, Jun 27, 2023, 7:53 AM IST
ಹೊಸದಿಲ್ಲಿ: ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆಯಡಿ ಕೇಂದ್ರ ಸರಕಾರವು 16 ರಾಜ್ಯಗಳಿಗೆ 56,415 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಈ ಪೈಕಿ ಕರ್ನಾಟಕಕ್ಕೆ 3,647 ಕೋಟಿ ರೂ. ದೊರೆಯಲಿದೆ.
ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಪ್ರಸಕ್ತ ಹಣಕಾಸು ವರ್ಷದ ಬಂಡವಾಳ ಹೂಡಿಕೆ ಪ್ರಸ್ತಾವಗಳಿಗೆ ಸೋಮವಾರ ಅನುಮೋದನೆ ನೀಡಿತು. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ, ಸೇತುವೆಗಳು ಮತ್ತು ರೈಲ್ವೇ ಸಹಿತ ವಿವಿಧ ಕ್ಷೇತ್ರಗಳ ಬಂಡವಾಳ ಹೂಡಿಕೆ ಯೋಜನೆಗಳಿಗೆ ಈ ಮೊತ್ತ ಬಳಕೆಯಾಗಲಿದೆ. ಅಲ್ಲದೆ ಜಲಜೀವನ ಮಿಷನ್ ಮತ್ತು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಾಜ್ಯದ ಪಾಲನ್ನು ಭರಿಸಲೂ ಈ ಮೊತ್ತ ನೆರವಾಗಲಿದೆ. ಒಟ್ಟಿನಲ್ಲಿ ಈ ಎಲ್ಲ ವಲಯಗಳ ಯೋಜನೆಗಳಿಗೆ ವೇಗ ನೀಡುವುದು ಸರಕಾರದ ಉದ್ದೇಶವಾಗಿದೆ.
2023-24ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು. ಅದರಂತೆ 50 ವರ್ಷಗಳ ಬಡ್ಡಿರಹಿತ ಸಾಲದ ರೂಪದಲ್ಲಿ ರಾಜ್ಯಗಳಿಗೆ ಈ ವಿಶೇಷ ನೆರವನ್ನು ಕೇಂದ್ರ ಸರಕಾರ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.