4th List; ಅರುಣಾಚಲ ಪ್ರದೇಶದ ಸ್ಥಳಗಳ ಹೆಸರುಗಳನ್ನೇ ಬದಲಿಸಿದ ಚೀನ!
Team Udayavani, Apr 2, 2024, 6:40 AM IST
ಬೀಜಿಂಗ್: ಭಾರತದ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡು ವಾದ ಮಾಡುವ ಚೀನ ರಾಜ್ಯದ ವಿವಿಧ ಭಾಗಗಳಿಗೆ ತನ್ನದೇ ಆಗಿರುವ ಹೊಸ ಹೆಸರುಗಳನ್ನು ಇರಿಸಿಕೊಂಡಿದೆ. ಈ ಬಗ್ಗೆ ಬೀಜಿಂಗ್ನಲ್ಲಿ ಚೀನ ಸರಕಾರ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಂದ ಹಾಗೆ ಚೀನ ದುಸ್ಸಾಹಸ ನಡೆಸುತ್ತಿರುವುದು ಇದು ಮೊದಲ ಬಾರಿ ಏನಲ್ಲ. 2017ರಲ್ಲಿ ಇದೇ ರೀತಿ ಅರುಣಾಚಲದ 6 ಪ್ರದೇಶಗಳಿಗೆ ಹೊಸ ಹೆಸರಿಟ್ಟು, ಆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅನಂತರದಲ್ಲೂ 2021ರಲ್ಲಿ 15 ಸ್ಥಳಗಳ, 2023ರಲ್ಲಿ 11 ಪ್ರದೇಶಗಳ ಹೆಸರುಗಳನ್ನು ಬದಲಾವಣೆ ಮಾಡುವ ಕುತ್ಸಿತ ಪ್ರಯತ್ನ ನಡೆಸಿತ್ತು.
ಹೊಸ ಪಟ್ಟಿಯಲ್ಲಿ ಮೇ 1ರಿಂದ ಅನ್ವಯವಾಗುವಂತೆ ಅರುಣಾಚಲ ಪ್ರದೇಶದ ಪೂರ್ವ ಭಾಗದ 30ಕ್ಕೂ ಹೆಚ್ಚು ಸ್ಥಳಗಳ ಹೆಸರುಗಳನ್ನು ಬದಲಾ ವಣೆ ಮಾಡುವುದಾಗಿ ಹೇಳಿಕೊಂಡಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಯವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಕ್ಷಣಾತ್ಮಕವಾಗಿ ಮತ್ತು ಭೌಗೋಳಿಕ ವಾಗಿ ಮಹತ್ವಪಡೆದಿರುವ ಸೈಲ್ ಬಹುಪಯೋಗಿ ಸುರಂಗ ಮಾರ್ಗ ಉದ್ಘಾಟಿಸಿದ್ದರು. ಆ ಕಾರ್ಯಕ್ರಮಕ್ಕೂ ಚೀನ ಸರಕಾರ ತಕರಾರು ತೆಗೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.