![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 1, 2023, 7:33 AM IST
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಇದುವರೆಗೂ ದಾಖಲೆಯ 5 ಕೋಟಿ ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 61,501 ಕೋಟಿ ರೂ. ಮೊತ್ತದ ಉಚಿತ ಚಿಕಿತ್ಸೆಯನ್ನು ನಾಗರಿಕರು ಪಡೆದಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ತಿಳಿಸಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ.ವರೆಗೆ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತದೆ. ಪ್ರಸ್ತುತ 12 ಕೋಟಿ ಕುಟುಂಬಗಳು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯು 2018ರ ಸೆಪ್ಟೆಂಬರ್‌ನಲ್ಲಿ ಅನುಷ್ಠಾನಕ್ಕೆ ಬಂದಿದ್ದು, ಇದುವರೆಗೂ 23.39 ಕೋಟಿ ಜನರಿಗೆ ಆಯುಷ್ಮಾನ್ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯ ಚಿಕಿತ್ಸೆಗೆ ಇದರಿಂದ ಸದುಪಯೋಗವಾಗಿದೆ. 2022-23 ವರ್ಷದಲ್ಲಿ ಈ ಯೋಜನೆಯಡಿ 1.65 ಕೋಟಿ ರೋಗಿಗಳು ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಎನ್‌ಎಚ್‌ಎ ಮಾಹಿತಿ ನೀಡಿದೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.