ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ 5 ಕೋಟಿ ರೂ. ಕಳ್ಳತನ
ಸೆಕ್ಯೂರಿಟಿ ಗಾರ್ಡ್ ಇಲ್ಲದಾಗ ಕೃತ್ಯ ಹಲವು ಅನುಮಾನಗಳಿಗೆ ಕಾರಣ
Team Udayavani, Mar 6, 2022, 3:11 PM IST
ಬೆಳಗಾವಿ: ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಸಂಘದ ಸವದತ್ತಿ ತಾಲೂಕಿನ ಮುರಗೋಡ ಶಾಖೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಕಳ್ಳತನ ಆಗಿರುವ ಘಟನೆ ರವಿವಾರ ಬೆಳಗ್ಗೆ 4:00 ಗಂಟೆ ಸುಮಾರಿಗೆ ನಡೆದಿದೆ.
4.5 ಕೋಟಿ ರೂ. ನಗದು ಹಾಗೂ 76 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿದೆ. ಒಟ್ಟು ಸುಮಾರು 5 ಕೋಟಿ ರೂ. ಮೌಲ್ಯದ ಕಳ್ಳತನ ಆಗಿರುವುದು ಬಿಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಬಿಡಿಸಿಸಿ ಬ್ಯಾಂಕಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳದ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಪ್ರತಿದಿನ ಹಗಲು ರಾತ್ರಿ ಮುರಗೋಡ ಶಾಖೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಇರುತ್ತಿದ್ದನು. ಆದರೆ ರವಿವಾರ ರಾತ್ರಿ ಸೆಕ್ಯೂರಿಟಿ ಗಾರ್ಡ್ ಬಂದಿರಲಿಲ್ಲ. ಇದೇ ಸಮಯಾವಕಾಶವನ್ನು ಬಳಸಿಕೊಂಡು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.