ಸೆರಮ್ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಐವರು ದುರ್ಮರಣ, ಘಟನೆ ಬಗ್ಗೆ ತನಿಖೆಗೆ ಆದೇಶ
ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ವರದಿ ತಿಳಿಸಿದೆ.
Team Udayavani, Jan 21, 2021, 6:36 PM IST
ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಸೆರಮ್ ಇನ್ಸ್ ಟಿಟ್ಯೂಟ್ ಆವರಣದ ನಿರ್ಮಾಣದ ಹಂತದ ಕಟ್ಟಡದಲ್ಲಿ ಗುರುವಾರ(ಜನವರಿ 21, 2021) ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ವರದಿ ತಿಳಿಸಿದೆ. ಪ್ರಕಟಣದ ಬಗ್ಗೆ ತನಿಖೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ.
ಸೆರಮ್ ಇನ್ಸ್ ಟ್ಯೂಟ್ ಘಟಕದಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ಮೂಲಗಳು ಹೇಳಿದ್ದು. ಸೀರಂ ಇನ್ಸ್ ಟಿಟ್ಯೂಟ್ ಆವರಣದಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ಪ್ರಾಥಮಿಕ ಹಂತದಲ್ಲಿ ವರದಿಯಾಗಿತ್ತು.
ಸೆರಮ್ ಇನ್ಸ್ ಟಿಟ್ಯೂಟ್ ನ ಟರ್ಮಿನಲ್ ಮೊದಲ ಗೇಟ್ ನಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಹತ್ತು ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ ಎಂದು ವರದಿ ತಿಳಿಸಿತ್ತು.
ಕೋವಿಶೀಲ್ಡ್ ಉತ್ಪಾದನಾ ಘಟಕಕ್ಕೆ ತೊಂದರೆಯಾಗಿದೆಯೇ?
ಎಎನ್ ಐ ವರದಿ ಪ್ರಕಾರ, ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಆವರಣದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಲಸಿಕೆ ಮತ್ತು ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.