50 ವರ್ಷ ವಿಪಕ್ಷ ಪಟ್ಟ : ಕಾಂಗ್ರೆಸ್ ಪುನಶ್ಚೇತನಕ್ಕೆ ಪಟ್ಟು ಹಿಡಿದ ಹಿರಿಯರು
Team Udayavani, Aug 30, 2020, 7:15 AM IST
ಹೊಸದಿಲ್ಲಿ: ಕಾಂಗ್ರೆಸ್‌ನಲ್ಲಿ ಒಳ ಬೇಗುದಿ ಮುಂದುವರಿದಿದ್ದು, ಆಂತರಿಕ ಚುನಾವಣೆ ಮೂಲಕ ಪೂರ್ಣಾವಧಿ ಅಧ್ಯಕ್ಷರ ಆಯ್ಕೆ ನಡೆಯಬೇಕು ಎಂದು ಪತ್ರ ಬರೆದಿದ್ದ ಪಕ್ಷದ ಹಿರಿಯ ನಾಯಕರು ತಮ್ಮ ಅಭಿಪ್ರಾಯವನ್ನು ಮತ್ತಷ್ಟು ಪ್ರಬಲವಾಗಿ ಸಮರ್ಥಿಸಿಕೊಂಡು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ 23 ಮುಖಂಡರ ಪೈಕಿ ಒಬ್ಬರಾದ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಪಕ್ಷದಲ್ಲಿ ಆಂತರಿಕ ಚುನಾವಣೆ ನಡೆಯದಿದ್ದರೆ ಇನ್ನೂ 50 ವರ್ಷಗಳ ಕಾಲ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೇ ಇರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಲವು ದಶಕಗಳಿಂದ ಪಕ್ಷದಲ್ಲಿ ಆಂತರಿಕ ಚುನಾವಣೆ ಮೂಲಕ ಕಾರ್ಯಕಾರಿ ಮಂಡಳಿ ಆಯ್ಕೆಯಾಗಿಲ್ಲ. ಇದಕ್ಕಾಗಿ 10-12 ವರ್ಷ ಗಳಿಂದ ಒತ್ತಾಯಿಸಲಾಗುತ್ತಿದೆ. ಚುನಾವಣೆ ಗಳಲ್ಲಿ ಕಾಂಗ್ರೆಸ್ ಪದೇ ಪದೆ ಸೋಲು ಅನುಭವಿಸುತ್ತಿದೆ. ಮರಳಿ ಪಕ್ಷವನ್ನು ಸದೃಢ ಗೊಳಿಸಲು ಆಂತರಿಕ ಚುನಾವಣೆ ನಡೆಯಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ಆಂತರಿಕ ಚುನಾವಣೆ ವಿರೋಧಿಸುತ್ತಿ ರುವ ನಾಯಕರ ವಿರುದ್ಧ ಕಿಡಿಕಾರಿರುವ ಅಜಾದ್, ಎಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳಬೇಕಾಗುತ್ತದೋ ಎಂಬ ಭೀತಿಯಿಂದ ಚುನಾವಣೆ ಬೇಡ ಎನ್ನುತ್ತಿದ್ದಾರೆ. ಎಲ್ಲ ಸ್ತರಗಳಲ್ಲೂ ಚುನಾವಣೆ ನಡೆಯಬೇಕು ಎಂದಿದ್ದಾರೆ.
ತಪ್ಪು ಗ್ರಹಿಕೆ
ಇದೇ ವೇಳೆ, ಮತ್ತೋರ್ವ “ಭಿನ್ನ ಮತೀಯ’ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಜಿತಿನ್ ಪ್ರಸಾದ್ ಪ್ರತಿಕ್ರಿಯಿಸಿದ್ದು, ಪತ್ರ ಕುರಿತು ತಪ್ಪಾಗಿ ಅರ್ಥೈಸಲಾಗುತ್ತಿದೆ. ಸೋನಿಯಾ ಮತ್ತು ರಾಹುಲ್ ಗಾಂಧಿ ನಾಯಕತ್ವದಲ್ಲಿ ನಮಗೆ ಸಂಪೂರ್ಣ ನಂಬಿಕೆ ಇದೆ. ಪಕ್ಷವನ್ನು ಪುನಶ್ಚೇತನ ಗೊಳಿಸುವುದು, ಸಂಘಟನೆಯನ್ನು ಪ್ರಬಲ ಗೊಳಿಸಲು ಆತ್ಮಾವಲೋಕನ ಮಾಡಿಕೊಳ್ಳ ಬೇಕು ಎಂಬುದು ನಮ್ಮ ಸಲಹೆ ಎಂದಿದ್ದಾರೆ.
ಈ ಮಧ್ಯೆ ಉತ್ತರ ಪ್ರದೇ ಶದ ಕಾಂಗ್ರೆಸ್ ಮುಖಂಡರೊಬ್ಬರು, ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಪುನಶ್ಚೇತನ ಯೋಜನೆ ಅಗತ್ಯ
ಹಿರಿಯ ನಾಯಕ ಕಪಿಲ್ ಸಿಬಲ್ ಆಂಗ್ಲ ವಾಹಿನಿಯೊಂದರ ಜತೆ ಮಾತನಾಡಿ, ಆಂತರಿಕ ಚುನಾವಣೆಗೆ ನಾವು ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಈಗ ಐತಿ ಹಾಸಿಕವಾಗಿ ನೆಲಕಚ್ಚಿದೆ. ಇಂತಹ ಸಂದರ್ಭ ದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಯೋಜನೆ ಅಗತ್ಯ. ಇದರಲ್ಲಿ ನಾವು ಭಾಗೀದಾರ ರಾಗಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ನಮ್ಮ ಪತ್ರವನ್ನು ಸರಿಯಾಗಿ ಅರ್ಥೈಸಿ ಕೊಂಡರೆ ನಾವು ಗಾಂಧಿ ಕುಟುಂಬವನ್ನು ಕಳೆಗುಂದಿಸುವ ಕೆಲಸವನ್ನು ಮಾಡಿಲ್ಲ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.