52 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ: ಗಣ್ಯಾತಿಗಣ್ಯರು ಭಾಗಿ
Team Udayavani, Nov 20, 2021, 7:28 PM IST
ಪಣಜಿ: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಭಾರತ ಸ್ವಾತಂತ್ರಗೊಂಡು 75 ವರ್ಷದ ಸವಿ ನೆನಪಿಗಾಗಿ ಭಾರತದಾದ್ಯಂತ ಯುವ ಮಹತ್ವಾಕಾಂಕ್ಷಿ ಚಲನಚಿತ್ರ ನಿರ್ಮಾಪಕರು ಉದ್ಯಮದೊಂದಿಗೆ ತೊಡಗಿಕೊಳ್ಳಲು ವೇದಿಕೆಯನ್ನು ಕಲ್ಪಿಸುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಮಂತ್ರಿ ಅನುರಾಗ್ ಠಾಕೂರ್ ನುಡಿದರು.
ಗೋವಾದ ಬಾಂಬೋಲಿಂ ಬಳಿಯಿರುವ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ 52 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಗೋವಾ ರಾಜ್ಯ ಸ್ವಾತಂತ್ರ್ಯಗೊಂಡು ಪ್ರಸಕ್ತ ವರ್ಷ 60 ವರ್ಷ ಪೂರ್ಣಗೊಂಡಿದ್ದು, ಗೋವಾಕ್ಕೆ ಇದು ಮಹತ್ವದ ವರ್ಷವಾಗಿದೆ. ಡ್ರೀಮ್ ಗರ್ಲ್ ಹೇಮಾಮಾಲಿನಿ ಯವರಿಗೆ ಇಂಡಿಯನ್ ಪರ್ಸನಾಲಿಟಿ ಅವಾರ್ಡ್ ಲಭಿಸುತ್ತಿದ್ದು ಅವರನ್ನು ಅಭಿನಂದಿಸುತ್ತೇನೆ ಎಂದರು.
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ, ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರೀಕರ್ ರವರು 2004 ರಲ್ಲಿ ಗೋವಾಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸ್ವಾಗತಿಸಿದರು. ಅಂದಿನಿಂದ ವರ್ಷದಿಂದ ವರ್ಷಕ್ಕೆ ಗೋವಾದಲ್ಲಿ ಅತ್ಯುತ್ತಮವಾಗಿ ಚಲನಚಿತ್ರ ಮಹೋತ್ಸವ ಆಯೋಜಿಸಲಾಗುತ್ತಿದೆ. ಗೋವಾ ರಾಜ್ಯ ಒಂದು ಸುಂದರ ಪ್ರವಾಸಿ ತಾಣ, ಫಿಲ್ಮಶೂಟಿಂಗ್ ಡೆಸ್ಟಿನೇಶನ್, ಫಿಲ್ಮ ಶೂಟಿಂಗ್‍ಗಾಗಿ ಹೆಚ್ಚು ಒತ್ತು ನೀಡಲಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಗೋವಾದಲ್ಲಿ ಶೇ 100 ರಷ್ಟು ವ್ಯಾಕ್ಸಿನೇಶನ್ ಪೂರ್ಣಗೊಳ್ಳಲಿದೆ. ನಂತರ ಗೋವಾದಲ್ಲಿ ಹೆಚ್ಚು ಚಲನಚಿತ್ರ ಚಿತ್ರೀಕರಣ ಆರಂಭಗೊಳ್ಳಲಿದೆ. ಗೋವಾದಲ್ಲಿ ಫಿಲ್ಮ್ ಸಿಟಿ ಸ್ಥಾಪನೆಗೆ ಕೇಂದ್ರ ಸರ್ಕಾರ ಸಹಕಾರ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇಂಡಿಯನ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಖ್ಯಾತ ತಾರೆ ಹೇಮಾಮಾಲಿನಿ ಮಾತನಾಡಿ, ‘ಈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಚಲನಚಿತ್ರೋದ್ಯಮಕ್ಕೆ ಮತ್ತು ಯುವ ಕಲಾವಿದರಿಗೆ ಒಂದು ವೇದಿಕೆ ಕಲ್ಪಿಸಿಕೊಟ್ಟಿದೆ. ಈ ಕಾರ್ಯ ಹೀಗೆಯೇ ಮುಂದುವರೆಯಲಿ. ನನಗೆ ಈ ಅವಾರ್ಡ್ ಲಭಿಸಿರುವುದು ಸಂತಸ ತಂದಿದೆ’ ಎಂದರು.
ಇದನ್ನೂ ಓದಿ :ಅಂತಾರಾಷ್ಟ್ರೀಯ ಚಿತ್ರೋತ್ಸವ 52 : ಈ ಬಾರಿ ಎಂಟು ಕನ್ನಡ ಚಲನಚಿತ್ರಗಳ ಪ್ರದರ್ಶನ
ಈ ಸಂದರ್ಭದಲ್ಲಿ ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ಖ್ಯಾತ ನಟ ಸಲ್ಮಾನ್ ಖಾನ್, ಸೇರಿದಂತೆ ವಿವಿಧ ದೇಶಗಳ ಚಲನಚಿತ್ರ ಕ್ಷೇತ್ರದ ನಟ ನಟಿಯರು ಉಪಸ್ಥಿತರಿದ್ದರು.
ಮಾರ್ಟಿನ್ಸ್ ಕೋರ್ಸೇಫಿ ಮತ್ತು ಇಸ್ತಾಬಾನ್ ಜಾಬೊ ರವರಿಗೆ ಸತ್ಯಜಿತ್ ರೈ ಜೀವಮಾನ ಸಾಧಕ ಪ್ರಶಸ್ತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Movie: ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ; ಗಣೇಶ್ ರಾವ್
Chef Chidambara: ಅನಿರುದ್ಧ್ ಅಡುಗೆ ಶುರು
Bollywood: ರಿಮೇಕ್ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್ ಸಿನಿಮಾಗಳು
ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್
ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.