6 ವರ್ಷದ ಮಗುವಿನ ಮೇಲೆ ಅತ್ಯಾಚಾರ; ಆರೋಪಿಯನ್ನು ಎನ್ ಕೌಂಟರ್ ಮಾಡ್ತೇವೆ: ತೆಲಂಗಾಣ ಸಚಿವ
ತಲೆಮರೆಯಿಸಿಕೊಂಡಿರುವ ಆರೋಪಿ ಪತ್ತೆಗಾಗಿ 15 ವಿಶೇಷ ಪೊಲೀಸರ ತಂಡವನ್ನು ರಚಿಸಲಾಗಿದೆ.
Team Udayavani, Sep 15, 2021, 1:21 PM IST
ಹೈದರಾಬಾದ್: ಆರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಹಿಡಿದು ನಂತರ ಎನ್ ಕೌಂಟರ್ ಮಾಡಿ ಕೊಲ್ಲುತ್ತೇವೆ. ನಾವು ಖಂಡಿತವಾಗಿಯೂ ಆರೋಪಿಯನ್ನು ಬಂಧಿಸಿ, ನಂತರ ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಭಾರತ:ಕಳೆದ 24 ಗಂಟೆಗಳಲ್ಲಿ 27,176 ಕೋವಿಡ್ ಪ್ರಕರಣ ಪತ್ತೆ, ಕೇರಳದಲ್ಲಿ ಅತೀ ಹೆಚ್ಚು ಪ್ರಕರಣ
ಅತ್ಯಾಚಾರ ಎಸಗಿದ ಆರೋಪಿಯನ್ನು ಎನ್ ಕೌಂಟರ್ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕಾರ್ಮಿಕ ಸಚಿವ ಮಲ್ಲ ರೆಡ್ಡಿ ಕೂಡಾ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ನಾನು ಅತ್ಯಾಚಾರಕ್ಕೆಳಗಾದ ಸಂತ್ರಸ್ತೆ ಬಾಲಕಿಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ್ಯವಸ್ಥೆ ಮಾಡುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ರೆಡ್ಡಿ ತಿಳಿಸಿದ್ದಾರೆ. ಸಂತ್ರಸ್ತೆ ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡದ ವಿಪಕ್ಷ ನಾಯಕರ ಟೀಕೆಗೆ ಉತ್ತರಿಸಿದ ಅವರು, ಎನ್ ಕೌಂಟರ್ ಕುರಿತ ಮಾತುತೆಯಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆರೋಪಿ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ವರದಿ ವಿವರಿಸಿದೆ.
ಪೊಲೀಸ್ ಮೂಲಗಳ ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿಯನ್ನು ಭುವನ್ ಗಿರಿ ಜಿಲ್ಲೆಯ ಯಾದಾದ್ರಿ ಗ್ರಾಮದಲ್ಲಿ ಬಂಧಿಸಲಾಗಗಿತ್ತು ಎಂದು ತಿಳಿಸಿದೆ. ಆದರೆ ಅತ್ಯಾಚಾರಗೈದ ಆರೋಪಿ ನಾಪತ್ತೆಯಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಲೆಮರೆಯಿಸಿಕೊಂಡಿರುವ ಆರೋಪಿ ಪತ್ತೆಗಾಗಿ 15 ವಿಶೇಷ ಪೊಲೀಸರ ತಂಡವನ್ನು ರಚಿಸಲಾಗಿದೆ. ಪೊಲೀಸರು ಪರಿಶೀಲಿಸಿದ ಸಿಸಿಟವಿ ಫೂಟೇಜ್ ಪ್ರಕಾರ, ಆರೋಪಿ ತಲೆಗೆ ಟೋಪಿ ಧರಿಸಿದ್ದು, ಮುಖಕ್ಕೆ ಮಾಸ್ಟ್ ಹಾಕಿಕೊಂಡು ಮತ್ತೊ ವ್ಯಕ್ತಿಯೊಂದಿಗೆ ಹೊರಟು ಹೋಗಿರುವುದು ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.