ಎಸೆಸೆಲ್ಸಿ ಪರೀಕ್ಷಾರ್ಥಿಗಳಿಗೆ 65 ಸಾವಿರ ಮಾಸ್ಕ್
ಹಾಲ್ ಟಿಕೆಟ್ ನೀಡುವಾಗ ತಲಾ ಎರಡು ಮಾಸ್ಕ್ ವಿತರಣೆ
Team Udayavani, Jun 12, 2020, 6:12 AM IST
ಮಹಾನಗರ: ಕೋವಿಡ್ -19 ಭೀತಿ ನಡುವೆಯೂ ಎಸೆಸೆಲ್ಸಿ ಪರೀಕ್ಷೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಸರಕಾರದಿಂದ ಜಿಲ್ಲಾ ಇಲಾಖೆಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕಳುಹಿಸಿ ಕೊಡುವ ಪ್ರಕ್ರಿಯೆ ನಡೆಯುತ್ತಿದೆ. ದ.ಕ. ಜಿಲ್ಲೆಗೆ ರಾಜ್ಯದಿಂದ 65 ಸಾವಿರ ಮಾಸ್ಕ್ ಗಳನ್ನು ಕಳುಹಿಸಿ ಕೊಡಲಾಗಿದ್ದು, ವಿದ್ಯಾರ್ಥಿಗಳಿಗೆ ವಿತರಿಸುವ ದೃಷ್ಟಿಯಿಂದ ಎಲ್ಲ ಶಾಲೆಗಳಿಗೆ ತಲುಪಿಸಲಾಗಿದೆ.
ರಾಜ್ಯದಲ್ಲಿ ಮಾ. 27ರಿಂದ ನಡೆಯಬೇಕಿದ್ದ ಎಸೆಸೆಲ್ಸಿ ಪರೀಕ್ಷೆ ಕೋವಿಡ್ -19 ಭೀತಿಯಿಂದಾಗಿ ಮುಂದೂಡಲ್ಪಟ್ಟಿತ್ತು. ಇದೀಗ ಪರಿಷ್ಕೃತ ಆದೇಶದಂತೆ ಜೂ. 25ರಿಂದ ಜು. 4ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ -19 ಆತಂಕವಿರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಎಲ್ಲ ಮಕ್ಕಳಿಗೆ ತಲಾ ಎರಡು ಮಾಸ್ಕ್ ಗಳನ್ನು ಸರಕಾರ ನೀಡುತ್ತಿದೆ.
ಪಾಸ್ ತೋರಿಸಿ ಗಡಿಭಾಗದವರ ಸಂಚಾರ
ದ.ಕ. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ 345 ಮಂದಿ ಕಾಸರಗೋಡಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗಡಿ ಭಾಗದ ವಿದ್ಯಾರ್ಥಿಗಳ ಸಂಚಾರ ವಿಚಾರವಾಗಿ ಕಾಸರಗೋಡು ಜಿಲ್ಲಾಧಿಕಾರಿ ಮತ್ತು ದ.ಕ. ಜಿಲ್ಲಾಧಿಕಾರಿ ನಡುವೆ ಪತ್ರ ವ್ಯವಹಾರಗಳು ನಡೆದಿದ್ದು, ಪಾಸ್ ಮುಖಾಂತರ ಅವರು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲಿದ್ದಾರೆ. ಅವಶ್ಯವಿರುವ ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುದಾನರಹಿತ ಶಾಲೆಗಳ ವಾಹನಗಳನ್ನು ಬಳಕೆ ಮಾಡುವ ಉದ್ದೇಶವಿದೆ. ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳ ಹೆತ್ತವರನ್ನು ಶಾಲೆಗಳ ಶಿಕ್ಷಕರು ಸಂಪರ್ಕಿಸಿ ಸಂಚಾರ ವ್ಯವಸ್ಥೆ, ಇತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಯಾನಿಟೈಸರ್ ಬಳಸಿಯೇ ಪ್ರವೇಶ
ಎಲ್ಲ ಪರೀಕ್ಷಾ ಕೇಂದ್ರಗಳ ಒಳ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸುವುದು ಕಡ್ಡಾಯ. ವಿದ್ಯಾರ್ಥಿಗಳ ತಾಪಮಾನ ತಪಾಸಣೆ ನಡೆಸಿಯೇ ಒಳ ಬಿಡಲಾಗುತ್ತದೆ. ಸರಕಾರದಿಂದ ತಲಾ ಒಂದೊಂದು ಸ್ಯಾನಿಟೈಸರ್, ತಾಪಮಾನ ತಪಾಸಣ ಉಪಕರಣ ನೀಡ ಲಾಗುತ್ತದೆ. ಶಾಲಾ ಹಂತದಲ್ಲಿಯೂ ಖರೀದಿಸಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ನಾಲ್ವರು ಸ್ಕೌಟ್-ಗೈಡ್ ಶಿಕ್ಷಕರು, ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲಾಗುತ್ತದೆ.
102 ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 30,835 ವಿದ್ಯಾರ್ಥಿಗಳು 95 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಹೆಚ್ಚುವರಿಯಾಗಿ 19 ಪರೀಕ್ಷೆ ಕೇಂದ್ರಗಳು ಕಾಯ್ದಿರಿಸಲಾಗಿದ್ದು, ಸರಕಾರದ ಮಾರ್ಗಸೂಚಿಯಂತೆ ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಯಾವುದೇ ವಿದ್ಯಾರ್ಥಿಗೆ ರೋಗದ ಯಾವುದೇ ಲಕ್ಷಣ ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತೇಕವಾದ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 102 ವಿಶ್ರಾಂತಿ ಕೊಠಡಿ ಸಿದ್ಧಪಡಿಸಲಾಗುತ್ತಿದೆ. ಪರೀಕ್ಷೆ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತದೆ.
ಸೋಮವಾರದಿಂದ ವಿತರಣೆ
ಪರೀಕ್ಷಾ ಹಾಲ್ ಟಿಕೆಟ್ ನೀಡುವ ಪ್ರಕ್ರಿಯೆ ಸೋಮವಾರದಿಂದ ಆರಂಭವಾಗಲಿದ್ದು, ಈ ವೇಳೆ ಎಲ್ಲ ವಿದ್ಯಾರ್ಥಿಗಳಿಗೆ ತಲಾ ಎರಡು ಮಾಸ್ಕ್ ಗಳನ್ನು ನೀಡಲಾಗುತ್ತದೆ. ಒಮ್ಮೆ ಬಳಕೆ ಮಾಡಿದ ಅನಂತರ ಮಾಸ್ಕ್ ಗಳನ್ನು ಬಿಸಿ ನೀರಿನಲ್ಲಿ ತೊಳೆದು ಮರು ಬಳಕೆ ಮಾಡುವ ಬಗ್ಗೆ ಈ ವೇಳೆ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ತಿಳಿಸಿದ್ದಾರೆ.
ಅಗತ್ಯ ಸಿದ್ಧತೆ
ದ.ಕ. ಜಿಲ್ಲೆಗೆ ಈಗಾಗಲೇ 65 ಸಾವಿರ ಮಾಸ್ಕ್ ಗಳನ್ನು ರಾಜ್ಯದಿಂದ ಕಳುಹಿಸಿ ಕೊಡಲಾಗಿದೆ. ಮಾಸ್ಕ್ ಗಳನ್ನು ಎಲ್ಲ ಶಾಲೆಗಳಿಗೆ ವಿತರಿಸಲಾಗಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆದುಕೊಳ್ಳುವಾಗ ಮಾಸ್ಕ್ ನೀಡಲಾಗುತ್ತದೆ. ಎಲ್ಲ 95 ಪರೀಕ್ಷಾ ಕೇಂದ್ರಗಳಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
-ಮಲ್ಲೇಸ್ವಾಮಿ, ಉಪ ನಿರ್ದೇಶಕರು,
ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.