ರಾಜ್ಯಕ್ಕೆ ಸಿಗಲಿದೆ 660 ಹೆಚ್ಚು ವೈದ್ಯಕೀಯ ಸೀಟು : ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರವೇಶ
Team Udayavani, Feb 11, 2021, 6:30 AM IST
ಬೆಂಗಳೂರು: ರಾಜ್ಯದ ಸರಕಾರಿ ಕೋಟಾದ ವೈದ್ಯಕೀಯ ಸೀಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಗಣನೀಯ ಏರಿಕೆಯಾಗಲಿದೆ. 1 ಖಾಸಗಿ ಹಾಗೂ 4 ಸರಕಾರಿ ವೈದ್ಯಕೀಯ ಕಾಲೇಜುಗಳು 2021-22ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆಗೆ ಸಿದ್ಧವಾಗಿವೆ. ಇದರಿಂದ 660 ಸರಕಾರಿ ಸೀಟುಗಳು ಹೆಚ್ಚುವರಿಯಾಗಿ ಸಿಗಲಿವೆ.
2021-22ರಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ 8,895ಕ್ಕೆ ಹಾಗೂ ಸರಕಾರಿ ಕೋಟಾದ ಸೀಟುಗಳ ಸಂಖ್ಯೆ 3,640ಕ್ಕೆ ಏರಿಕೆಯಾಗಿದೆ.
ಸದ್ಯ ರಾಜ್ಯದಲ್ಲಿ 8,145 ಎಂಬಿಬಿಎಸ್ ಸೀಟುಗಳಿವೆ. ಇದರಲ್ಲಿ 2,980 ಸರಕಾರಿ ಕೋಟಾದವು. 2021-22ನೇ ಸಾಲಿಗೆ ಒಟ್ಟು 660 ಸೀಟುಗಳು ಹೆಚ್ಚುವರಿಯಾಗಿ ಸಿಗಲಿವೆ. ಇದರಲ್ಲಿ ಸರಕಾರಿ ಸೀಟುಗಳೇ ಹೆಚ್ಚು. 4 ಸರಕಾರಿ ಕಾಲೇಜುಗಳಿಂದ 600 ಹಾಗೂ ಇನ್ನೊಂದು ಖಾಸಗಿ ಕಾಲೇಜಿನಿಂದ ಶೇ. 40ರಷ್ಟು ಸೀಟುಗಳು ಅಂದರೆ 60 ಸೀಟುಗಳು ಸಿಗಲಿವೆ.
ನೀಟ್ ರ್‍ಯಾಂಕಿಂಗ್ ಆಧಾರದಲ್ಲಿ ವೈದ್ಯಕೀಯ ಸೀಟು ಹಂಚಿಕೆ ನಡೆಯುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ ಸೀಟು ಹಂಚಿಕೆಯಾದರೂ ರಾಜ್ಯದ ಕೋಟದ ಸೀಟುಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಹಂಚಿಕೆಯಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
2021 – 22 ನೇ ಸಾಲಿನಲ್ಲಿ
8,895 : ಒಟ್ಟು ಸೀಟುಗಳು
3,640 : ಸರಕಾರಿ ಕೋಟಾದ ಸೀಟುಗಳು
ಮುಂದಿನ ಶೈಕ್ಷಣಿಕ ವರ್ಷಕ್ಕೆ ನಾಲ್ಕು ಸರಕಾರಿ ಹಾಗೂ ಒಂದು ಖಾಸಗಿ ಸಹಿತ 5 ವೈದ್ಯಕೀಯ ಕಾಲೇಜು ದಾಖಲಾತಿ ಆರಂಭಿಸಲಿವೆ. ಇದರಿಂದ 660 ಸರಕಾರಿ ಸೀಟು ಹೆಚ್ಚುವರಿಯಾಗಿ ಸಿಗಲಿದೆ. ನೀಟ್ ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ.
-ಡಾ| ಎಸ್. ಸಚ್ಚಿದಾನಂದ, ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಕುಲಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.