![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 24, 2021, 11:37 AM IST
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 68 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದು ಭಾರಿ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಹಿನ್ನಲೆಯಲ್ಲಿ ರಾಜ್ಯದಾಧ್ಯಂತ ಏಕ ಕಾಲದಲ್ಲಿ ಎಸಿಬಿಯ 408 ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
7 ಕೆಜಿ ಚಿನ್ನ !!
ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ. ಎಸ್. ರುದ್ರೇಶಪ್ಪ ಅವರ ಶಿವಮೊಗ್ಗದ ಮನೆಯಲ್ಲಿ 7 ಕೆಜಿ ಗೂ ಅಧಿಕ ಚಿನ್ನಾಭರಣ ಪತ್ತೆಯಾಗದ್ದು, ಪರಿಶೀಲನೆ ಮುಂದು ವರೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವ ತಂಡ ದಾಳಿ ನಡೆಸಿದೆ. ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಲ ಬಡಾವಣೆಯ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಪಿಬಡ್ಲ್ಯೂಡಿ ಜೆಇ ಮನೆ ಮೇಲೆ ದಾಳಿ
ಕಲಬುರಗಿ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ ಮನೆ ಮೇಲೆ ದಾಳಿ ಮಾಡಲಾಗಿದೆ.
ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿರುವ ಮನೆ ಮತ್ತು ಯಡ್ರಾಮಿ ತಾಲೂಕಿನಲ್ಲಿರುವ ತೋಟದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಲ್ಲದೇ, ಇವರು ಬಾಡಿಗೆ ನೀಡಿರುವ ಮನೆಗಳ ಮೇಲೂ ದಾಳಿ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಶಾಂತಗೌಡ ಜೇವರ್ಗಿ ಪಟ್ಟಣದ ಲೋಕೋಪಯೋಗಿ ಇಲಾಖೆಯಲ್ಲಿ ಜೆಇ ಆಗಿದ್ದು, ಮೂವರು ಡಿಎಸ್ ಪಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.