7 ಸ್ಥಾನ; 2 ಡಜನ್ ಆಕಾಂಕ್ಷಿ ; ಮೂರೂ ಪಕ್ಷಗಳಲ್ಲಿ ನಾಯಕರಿಗೆ ದುಂಬಾಲು
Team Udayavani, Jun 13, 2020, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಮೂರೂ ಪಕ್ಷಗಳಲ್ಲಿ ಆಕಾಂಕ್ಷಿಗಳು ನಾಯಕರ ಬೆನ್ನು ಬಿದ್ದಿದ್ದಾರೆ.
ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್‌ಗೆ ಎರಡು, ಜೆಡಿಎಸ್‌ಗೆ ಒಂದು ಸ್ಥಾನ ಲಭಿಸಲಿದೆ. ನಾಮ ಪತ್ರ ಸಲ್ಲಿಕೆಗೆ ಜೂ.18 ಅಂತಿಮ ದಿನಾಂಕವಾಗಿದ್ದು, ಮಂಗಳ ವಾರದ ವೇಳೆಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.
ಏಳು ಸ್ಥಾನಗಳಿಗೆ ಮೂರು ಪಕ್ಷಗಳಲ್ಲಿ ಎರಡು ಡಜನ್ ಆಕಾಂಕ್ಷಿಗಳಿದ್ದು, ಸರ್ವಸಮ್ಮತ ಆಯ್ಕೆ ತಲೆನೋವಾಗಿ ಪರಿಣಮಿಸಿದೆ. ಆಡಳಿತಾರೂಢ ಬಿಜೆಪಿಯಲ್ಲಂತೂ ಆಪರೇಷನ್ ಕಮಲ ಕಾರ್ಯಾಚರಣೆಗೆ ಒಳಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತವರು, ಚುನಾವಣೆಗೆ ಸ್ಪರ್ಧಿಸದವರು ಪರಿಷತ್ ಸದಸ್ಯರಾಗಿ ಸಚಿವಗಿರಿ ಪಡೆಯುವ ಕನಸು ಕಾಣುತ್ತಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರು, ಮತ್ತೆ ಅವಕಾಶ ಬಯಸುತ್ತಿರುವ ಹಾಲಿ ಸದಸ್ಯರು, ಪಕ್ಷ ಸಂಘಟನೆಗೆ ದುಡಿದವರು ಕೂಡ ಒತ್ತಡ ಹೇರುತ್ತಿದ್ದಾರೆ.
ಬಿಜೆಪಿ ಪರಿಸ್ಥಿತಿ ಹೇಗಿದೆ?
ಪ್ರತಾಪಗೌಡ ಪಾಟೀಲ್ ಮತ್ತು ಮುನಿರತ್ನ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆ, ಎಚ್. ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿ ಮೂಲ ನಿವಾಸಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಪ್ರಯತ್ನಿಸುತ್ತಿದ್ದಾರೆ.
ರಾಜ್ಯಸಭೆ ಅವಕಾಶ ವಂಚಿತ ಪ್ರಕಾಶ್ ಶೆಟ್ಟಿ, ನಿರ್ಮಲ್ ಕುಮಾರ್ ಸುರಾನಾ, ರಮೇಶ್ ಕತ್ತಿ ಕೂಡ ಪರಿಷತ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಕಾಂಗ್ರೆಸ್‌ನಲ್ಲೇನು?
ಅರಸು ಮೊಮ್ಮಗ ಸೂರಜ್ ಹೆಗ್ಡೆ, ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷ ಸಯೀದ್ ಅಹಮದ್, ಹಾಲಿ ಸದಸ್ಯ ಎಂ.ಸಿ. ವೇಣುಗೋಪಾಲ್ ಆಕಾಂಕ್ಷಿಗಳಾಗಿದ್ದಾರೆ. ಎರಡು ಸ್ಥಾನಗಳಲ್ಲಿ ಒಂದನ್ನು ಅಲ್ಪಸಂಖ್ಯಾಕರಿಗೆ ನೀಡುವ ಒಲವು ಇದ್ದು, ಮುಸ್ಲಿಂ ಮತ್ತು ಕ್ರೆ„ಸ್ತರು ತಮಗೇ ಬೇಕು ಎಂಬ ಒತ್ತಡ ಹೇರುತ್ತಿದ್ದಾರೆ. ಆಕಾಂಕ್ಷಿಗಳಲ್ಲಿ ಕರಾವಳಿಯ ಐವನ್ ಡಿ’ಸೋಜಾ, ಎಚ್.ಎಂ. ರೇವಣ್ಣ, ರಾಮಚಂದ್ರಪ್ಪ, ಮುದ್ದ ಹನುಮಗೌಡ ಸೇರಿದ್ದಾರೆ.
ಜೆಡಿಎಸ್‌ನಲ್ಲಿ ಯಾರ್ಯಾರು?
ಜೆಡಿಎಸ್‌ನಲ್ಲಿ ಒಂದು ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಆದರೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಟಿ.ಎ. ಶರವಣ, ಕುಪೇಂದ್ರರೆಡ್ಡಿ, ಸಿ.ರಾಜಣ್ಣ, ಆರ್.ಪ್ರಕಾಶ್, ಕೋನ ರೆಡ್ಡಿ ಹೆಸರು ಕೇಳಿಬರುತ್ತಿದೆ.
ರಾಜ್ಯಸಭೆಗೆ ಅವಿ ರೋಧ ಆಯ್ಕೆ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನ ಎಚ್.ಡಿ. ದೇವೇಗೌಡ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ನಾಮಪತ್ರ ವಾಪಸಾತಿಗೆ ಕಡೆಯ ದಿನವಾಗಿದ್ದ ಶುಕ್ರವಾರ ಯಾರೂ ವಾಪಸ್ ಪಡೆಯದ ಕಾರಣ ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ನಾಲ್ವರ ಅವಿರೋಧ ಆಯ್ಕೆ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.