![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 31, 2022, 12:16 PM IST
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಉಗ್ರ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ದೆಹಲಿಯ ಎಂಟು ಜನರನ್ನುಬಂಧಿಸಲಾಗಿದ್ದು, ಹೆಚ್ಚಿನ ಬಂಧನಗಳನ್ನು ಮಾಡಲು ತಂಡಗಳನ್ನು ಕಳುಹಿಸಿರುವುದರಿಂದ ಸಂಖ್ಯೆಗಳು ಹೆಚ್ಚಾಗಬಹುದು ಎಂದು ತಿಳಿದು ಬಂದಿದೆ.
ಬುಧವಾರ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕೇಜ್ರಿವಾಲ್ ಅವರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತಾಗಿನ ಹೇಳಿಕೆಗಳ ವಿರುದ್ಧ ಅವರ ನಿವಾಸದ ಹೊರಗೆ ಆಸ್ತಿಯನ್ನು ಧ್ವಂಸಗೊಳಿಸಿದ್ದರು ಎಂದು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ನೌಕರನಿಗೆ ಅಡ್ಡಿಪಡಿಸುವುದು, ಸಾರ್ವಜನಿಕ ಸೇವಕನು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅವಿಧೇಯತೆ, ಸಾರ್ವಜನಿಕ ನೌಕರನು ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಹಲ್ಲೆ ಪ್ರಯತ್ನ, ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆ ಮತ್ತು ಕರ್ತವ್ಯದಿಂದ ಸಾರ್ವಜನಿಕ ಸೇವಕನನ್ನು ಹಿಮ್ಮೆಟ್ಟಿಸಲು ಹಾನಿಯನ್ನು ಉಂಟುಮಾಡಿದ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.
ಘಟನೆ ಬಳಿಕ ಪಂಜಾಬ್ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿ ಕೇಜ್ರಿವಾಲ್ ಅವರನ್ನು “ಕೊಲ್ಲಲು” ಬಯಸಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದರು. ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗಳನ್ನು ಹಾನಿಗೊಳಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.