ಅಂತಾರಾಷ್ಟ್ರೀಯ ಚಿತ್ರೋತ್ಸವ 52 : ಈ ಬಾರಿ ಎಂಟು ಕನ್ನಡ ಚಲನಚಿತ್ರಗಳ ಪ್ರದರ್ಶನ

Team Udayavani, Nov 20, 2021, 12:59 PM IST

1-ff

ಪಣಜಿ : ಇತ್ತೀಚಿನ ಐದು ವರ್ಷಗಳಲ್ಲಿ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ (IFFI) ದಲ್ಲಿ ಅಪರೂಪಕ್ಕೆ ಎಂಬಂತೆ ಈ ಬಾರಿಯ 52 ನೇ ಚಿತ್ರೋತ್ಸವದಲ್ಲಿ ಎಂಟು ಕನ್ನಡ ಚಲನಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ನ. 20 ರಿಂದ ನ. 28 ರವರೆಗೆ ನಡೆಯುವ ಚಿತ್ರೋತ್ಸವ ಇಂದು ಸಂಜೆ 3.30 ಕ್ಕೆ (ನ.20) ಉದ್ಘಾಟನೆಗೊಳ್ಳಲಿದೆ. ಕೇಂದ್ರ ವಾರ್ತಾ ಮತ್ತು ಪ್ರಚಾರ, ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಾಜ್ಯ ಸಚಿವ ಡಾ. ಎಲ್. ಮುರುಗನ್, ರೊಂದಿಗೆ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ರಣವೀರ್ ಸಿಂಗ್ ಮತ್ತಿತರರು ಭಾಗವಹಿಸುವರು.

ಈ ಚಿತ್ರೋತ್ಸವದಲ್ಲಿ ವಿವಿಧ ಭಾಗಗಳಲ್ಲಿ ಎಂಟು ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಈ ಪೈಕಿ ಒಂದು ಚಿತ್ರ ಚೊಚ್ಚಲ ನಿರ್ದೇಶನದ ಚಲನಚಿತ್ರಗಳ ವಿಭಾಗದಲ್ಲಿ ಪ್ರಶಸ್ತಿಗಾಗಿ ಸೆಣಸಲಿದೆ.

ನಟ ಪುನೀತ್ ರಾಜ್ ಕುಮಾರ್ ಅವರ ಎರಡು ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸಂಚಾರಿ ವಿಜಯ್ ಅವರ ಮೂರು ಚಿತ್ರಗಳಿವೆ.

ಭಾರತೀಯ ಪನೋರಮಾದಲ್ಲಿ ನಾಲ್ಕು ಚಿತ್ರಗಳು

ಭಾರತೀಯ ಪನೋರಮಾ ವಿಭಾಗದಲ್ಲಿ ಕನ್ನಡದ ನಾಲ್ಕು ಚಿತ್ರಗಳು ಪ್ರಶಸ್ತಿಗೆ ಸೆಣಸಲಿವೆ. ಸಾಗರ್ ಪುರಾಣಿಕ್ ಅವರ ‘ಡೊಳ್ಳು’, ಮಂಸೋರೆಯವರ ‘ಆ್ಯಕ್ಟ್ 1978’, ಗಣೇಶ್ ಹೆಗಡೆಯವರ ‘ನೀಲಿ ಹಕ್ಕಿ’ ಹಾಗೂ ಪ್ರವೀಣ್ ಕೃಪಾಕರ್ ಅವರ ‘ತಲೆದಂಡ’ ಚಲನಚಿತ್ರಗಳು ಆಯ್ಕೆಯಾಗಿವೆ. ಇವುಗಳಲ್ಲಿ ಡೊಳ್ಳು ಚೊಚ್ಚಲ ನಿರ್ದೇಶನದ ಚಿತ್ರಗಳ ಪ್ರಶಸ್ತಿಗೆ ಸೆಣಸುತ್ತಿದೆ.

ಇವುಗಳಲ್ಲದೇ ಈ ವರ್ಷ ಅಗಲಿದ ಚಲನಚಿತ್ರ ರಂಗದ ಮಹನೀಯರಿಗೆ ಶ್ರದ್ಧಾಂಜಲಿ ಸಲ್ಲಿಸಲಿದೆ. ಈ ವಿಭಾಗದಲ್ಲಿ ಪುನೀತ್ ರಾಜಕುಮಾರ್ ರ ‘ರಾಜಕುಮಾರ’ ಹಾಗೂ ಸಂಚಾರಿ ವಿಜಯ್ ಅವರ ‘ನಾನು ಅವನಲ್ಲ, ಅವಳು’ ಚಿತ್ರಗಳು ಪ್ರದರ್ಶಿತವಾಗಲಿವೆ.

ಆಜಾದಿ ಕಿ ಅಮೃತ ಮಹೋತ್ಸವ ವಿಭಾಗದಡಿ ಹದಿನೆಂಟು ಭಾರತೀಯ ಭಾಷೆಗಳ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ವಿಭಾಗದಲ್ಲಿ ಪುನೀತ್ ರಾಜಕುಮಾರ್ ನಟನೆಯ ‘ಬೆಟ್ಟದ ಹೂವು’ ಹಾಗೂ ಡಾ. ರಾಜಕುಮಾರ್ ಅಭಿನಯದ ‘ಸಂಧ್ಯಾ ರಾಗ’ ಪ್ರದರ್ಶನಗೊಳ್ಳಲಿದೆ.

2019 ರಲ್ಲಿ ನಡೆದ ಉತ್ಸವದಲ್ಲಿ ‘ಪಿಂಕಿ ಎಲ್ಲಿ’ ಪ್ರದರ್ಶನಗೊಂಡಿದ್ದ ಏಕೈಕ ಕನ್ನಡ ಚಲನಚಿತ್ರವಾಗಿತ್ತು.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-tudar

Movie: ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ; ಗಣೇಶ್ ರಾವ್

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.