ರಾಜ್ಯದ ಶೇ. 80 ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರ ಗೆಲುವು : ಕಟೀಲ್ ವಿಶ್ವಾಸ
Team Udayavani, Nov 23, 2020, 8:33 PM IST
ಬೆಂಗಳೂರು: ರಾಜ್ಯದ ಶೇ. 80ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಲಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಗ್ರಾಮ ಪಂಚಾಯ್ತಿ ಚುನಾವಣೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಿರುವ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಪೂರ್ವಭಾವಿಯಾಗಿ ಸೋಮವಾರ ನಡೆದ ಪಕ್ಷದ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಎಲ್ಲ ಜಾತಿಯವರು ಸ್ಪರ್ಧಿಸಲು ಪಕ್ಷದ ಆದ್ಯತೆ ನೀಡಲಿದೆ. ಪಂಚಾಯ್ತಿ ಚುನಾವಣೆ ಸಿದ್ಧತೆಗಾಗಿ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ ಎಂದು ಹೇಳಿದರು.
ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪಂಚಾಯತ್‌ಗಳಿಗೆ ಗರಿಷ್ಠ ಅನುದಾನ ನೀಡುತ್ತಿದ್ದಾರೆ. ಇದು ಪಕ್ಷ ಬೆಂಬಲಿತ ಅಭೂತಪೂರ್ವ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಹಲವು ಸಚಿವರು, ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಮುಖರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ರಾಜ್ಯ ಪದಾಧಿಕಾರಿಗಳು ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಆರ್.ಅಶೋಕ್, ಬಿ.ಶ್ರೀರಾಮುಲು ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಗೋದಾಮಿನಿಂದ 50 ಲಕ್ಷ ಮೌಲ್ಯದ ಪಾನ್ ಮಸಾಲಾ ಕಳ್ಳತನ: 12 ಗಂಟೆಯೊಳಗೆ ಆರೋಪಿ ಬಂಧನ
ಪ್ರವಾಸ ಮಾಡಿ, ಜನರಿಗೆ ಸ್ಪಂದಿಸಿ
ಪ್ರತಿಯೊಬ್ಬರು ಸಂಘಟನೆಗೆ ಒತ್ತು ನೀಡಬೇಕು. ಜನತೆ ಹಾಗೂ ಕಾರ್ಯಕರ್ತರಿಗೆ ಸ್ಪಂದಿಸಬೇಕು. ಜವಾಬ್ದಾರಿ ಪಡೆದು ಮನೆಯಲ್ಲಿರದೆ ಪ್ರವಾಸ ಕೈಗೊಂಡು ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಿವಿಮಾತು ಹೇಳಿದ್ದಾರೆ.
ನಗರದಲ್ಲಿ ಸೋಮವಾರ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲೆಡೆ ಜನ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಆ ಮೂಲಕ ಸ್ಪಷ್ಟ ಬಹುಮತ ನೀಡುತ್ತಿದ್ದಾರೆ. ಇದಕ್ಕೆ ಕಾರಣ ಜನರಿಗೆ ಪಕ್ಷದ ಮೇಲಿರುವ ನಂಬಿಕೆ. ಆ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಇನ್ನಷ್ಟು ಗಟ್ಟಿಗೊಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ ಎಂಬುದಾಗಿ ತಿಳಿಸಿದರು ಎಂದು ಮೂಲಗಳು ಹೇಳಿವೆ.
ಬಿಹಾರ ವಿಧಾನಸಭೆ ಗೆಲುವನ್ನು ಪ್ರಸ್ತಾಪಿಸಿದ ಬಿ.ಎಲ್. ಸಂತೋಷ್ ಅವರು ಕೋವಿಡ್-19 ನಿರ್ವಹಣೆ ನಿರ್ವಹಣೆ ಸೇರಿದಂತೆ ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ಮೆಚ್ಚಿ ಜನ ಬೆಂಬಲ ನೀಡುತ್ತಿದ್ದಾರೆ. ಹಾಗಾಗಿ ಜನರಿಗೆ ಸ್ಪಂದಿಸಬೇಕು. ಸದಾ ಜನ ಸಂಪರ್ಕದಲ್ಲಿದ್ದು, ಅವರೊಂದಿಗೆ ಒಡನಾಟವಿಟ್ಟುಕೊಳ್ಳಬೇಕು. ಜವಾಬ್ದಾರಿ ಪಡೆದು ಮನೆಯಲ್ಲಿ ಕುಳಿತರೆ ಏನೂ ಪ್ರಯೋಜನವಿಲ್ಲ. ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿ ಸಂಘಟನೆಗೆ ಒತ್ತು ನೀಡಿದರಷ್ಟೇ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಚಿಕ್ಕಮಗಳೂರು : ಪತ್ನಿಯಿಂದಲೇ ಪತಿ ಕೊಲೆ : ಪ್ರಿಯಕರನ ಜೊತೆ ಸೇರಿ ಗಂಡನ ಮರ್ಡರ್
ಆರು ಮಂದಿ ನೇತೃತ್ವದ ತಂಡ
ನ. 27ರಿಂದ ಡಿ.3ರವರೆಗೆ ರಾಜ್ಯಾದ್ಯಂತ ಗ್ರಾಮ ಸ್ವರಾಜ್ಯ ಸಮಾವೇಶಗಳು ನಡೆಯಲಿವೆ. ಪ್ರತಿ ಜಿಲ್ಲೆಯಲ್ಲಿ ಮೂರ್‍ನಾಲ್ಕು ತಾಲ್ಲೂಕಿಗೆ ಒಂದರಂತೆ ಜಿಲ್ಲೆಗೆ ತಲಾ ಎರಡು ಗ್ರಾಮ ಸ್ವರಾಜ್ಯ ಸಮಾವೇಶಗಳು ಆಯೋಜನೆಯಾಗಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿರಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್ ನೇತೃತ್ವದ ತಂಡಗಳು ಗ್ರಾಮ ಸ್ವರಾಜ್ಯ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.