ಇನ್ನು ಜನನ ಪ್ರಮಾಣ ಪತ್ರವೊಂದೇ ಸಾಕು
Team Udayavani, Jul 27, 2023, 7:50 AM IST
ಹೊಸದಿಲ್ಲಿ: ಶಾಲಾ ಕಾಲೇಜುಗಳಿಗೆ ಸೇರಲು, ವಾಹನ ಚಾಲನೆ ಪರವಾನಿಗೆ ಪಡೆಯಲು ಹಾಗೂ ಸರಕಾರಿ ಹುದ್ದೆಗಳಿಗೆ ಸೇರ್ಪಡೆಯಾಗುವಾಗ ಇನ್ನು ಮುಂದೆ ಕೇವಲ ಜನನ ಪ್ರಮಾಣ ಪತ್ರವೊಂದನ್ನೇ ದಾಖಲೆಯಾಗಿ ಸಲ್ಲಿಸಿದರೆ ಸಾಕು!
ಕೇಂದ್ರ ಸರಕಾರ ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ತರಲು ಮುಂದಾಗಿದ್ದು, ಬುಧವಾರ ಈ ಸಂಬಂಧ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಇದರ ಪ್ರಕಾರ, ಮತದಾರರ ಪಟ್ಟಿಗೆ ಹೆಸರು ಸೇರಿಸಲು, ಆಧಾರ್ ಸಂಖ್ಯೆ ನೋಂದಣಿ, ವಿವಾಹ ನೋಂದಣಿಗೂ ಜನನ ದಾಖಲೆ ಪ್ರಮಾಣ ಪತ್ರವೊಂದೇ ಸಾಕು ಎಂಬ ಪ್ರಸ್ತಾವನೆಗಳನ್ನು ಸೇರಿಸಲಾಗಿದೆ.
ಮಸೂದೆಯನ್ನು ಮಂಡಿಸಿ ಮಾತನಾಡಿದ ಸಚಿವ ನಿತ್ಯಾನಂದ ರಾಯ್, ಸಾಮಾಜಿಕ ಬದಲಾವಣೆ, ಜನಸ್ನೇಹಿ ನಿಯಮ ಮತ್ತು ತಂತ್ರಜ್ಞಾನದ ಅಳವಡಿಕೆಯ ಕಾರಣದಿಂದಾಗಿ ಈ ಬದಲಾವಣೆ ತರಲಾಗುತ್ತಿದೆ. ಈ ಬಗ್ಗೆ ಎಲ್ಲ ರಾಜ್ಯಗಳು ಮತ್ತು ಭಾಗೀದಾರರ ಜತೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಆದರೆ ವಿಪಕ್ಷಗಳು ಇದನ್ನು ವಿರೋಧಿಸಿದ್ದು, ಖಾಸಗಿತನಕ್ಕೆ ಧಕ್ಕೆಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.