ಕುಸ್ತಿಪಟುಗಳಿಂದ “ಕರಾಳ ದಿನ” ಆಚರಣೆ
Team Udayavani, May 12, 2023, 6:31 AM IST
ಹೊಸದಿಲ್ಲಿ: ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ನಡೆಯತ್ತಿರುವ ಪ್ರತಿಭಟನೆ 18ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಿರತ ಕುಸ್ತಿಪಟುಗಳು ಮತ್ತು ಬೆಂಬಲಿಗರು ಗುರುವಾರ ಕಪ್ಪುಪಟ್ಟಿ ಧರಿಸಿ “ಕರಾಳ ದಿನ’ ಆಚರಿಸಿದರು.
ಅಗ್ರ ಕುಸ್ತಿಪಟುಗಳಾದ ವಿನೇಶ್ ಪೋಗಟ್, ಬಜರಂಗ್ ಪೂನಿಯ, ಸಾಕ್ಷಿ ಮಲಿಕ್, ಸತ್ಯವರ್ತ್ ಕೈದ್ಯನ್ ಮತ್ತು ಜಿತೇಂದರ್ ಕಿನ್ಹಾ ಅವರು ತಮ್ಮ ಹಣೆಯ ಮೇಲೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಅವರ ಕೆಲವು ಬೆಂಬಲಿಗರು ಪ್ರತಿಭಟನೆಯ ಸಂಕೇತವಾಗಿ ತಮ್ಮ ಕೈಗಳಿಗೆ ಕಪ್ಪು ಪಟ್ಟಿ ಧರಿಸಿದ್ದರು.
ಹಲವು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ಮಾಡಿದ ಆರೋಪದ ಮೇಲೆ ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ ದಿಲ್ಲಿ ಪೊಲೀಸರು ಸುಪ್ರೀ ಕೋರ್ಟ್ನ ಸೂಚನೆಯಂತೆ ಬ್ರಿಜ್ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಗಾಗಿ ನಾವು ಗುರುವಾರ ಕರಾಳ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ಹೋರಾಟದಲ್ಲಿ ಇಡೀ ರಾಷ್ಟ್ರವು ನಮ್ಮೊಂದಿಗೆ ಇರುವುದರಿಂದ ನಮಗೆ ಗೆಲುವಿನ ವಿಶ್ವಾಸವಿದೆ’ ಎಂದು ಬಜರಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.