ಸಿಂಗಾಪುರದಲ್ಲಿ ಭಾರತ ಮೂಲದ ವ್ಯಕ್ತಿಗೆ ಗಲ್ಲು
Team Udayavani, Apr 27, 2023, 7:51 AM IST
ಸಿಂಗಾಪುರ: ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆಗೆ ಉತ್ತೇಜನ ಮತ್ತು 1 ಕೆಜಿ ಗಾಂಜಾವನ್ನು ಅಕ್ರಮವಾಗಿ ಸಾಗಿಸಿರುವ ಅಪರಾಧದ ಮೇರೆಗೆ ಭಾರತ ಮೂಲದ ತಂಗರಾಜು ಸುಪ್ಪಯ್ಯ (46)ನನ್ನು ಬುಧವಾರ ಗಲ್ಲಿಗೇರಿಸಲಾಗಿದೆ. ತಂಗರಾಜುಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದು ಕೋರಿ ಆತನ ಕುಟುಂಬ, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ವಿಶ್ವಸಂಸ್ಥೆ ವತಿಯಿಂದ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಮಾದಕವಸ್ತು ವಿರುದ್ಧ ಕಠಿಣ ಕ್ರಮ ಜರುಗಿಸುವ ಸಿಂಗಾಪುರ ಸರ್ಕಾರ ಮತ್ತು ಅಲ್ಲಿನ ನ್ಯಾಯಾಲಯ ಈ ಅರ್ಜಿಗಳನ್ನು ಮಂಗಳವಾರ ವಜಾಗೊಳಿಸಿತ್ತು. ಸಿಂಗಾಪುರದ ಚಾಂಗಿ ಕಾರಾಗೃಹದಲ್ಲಿ ಬುಧವಾರ ಮುಂಜಾನೆ ತಂಗರಾಜುನನ್ನು ಗಲ್ಲಿಗೇರಿಸಲಾಯಿತು. 1 ಕೆಜಿ ಗಾಂಜಾ ಅಕ್ರಮ ಸಾಗಾಟ, ಮಾದಕವಸ್ತು ಸೇವನೆ ಮತ್ತು ಮಾದಕವಸ್ತು ಪರೀಕ್ಷೆಗೆ ಹಾಜರಾಗದ ಆರೋಪ ಮೇಲೆ 2014ರಲ್ಲಿ ತಂಗರಾಜುನನ್ನು ಸಿಂಗಾಪುರ ಪೊಲೀಸರು ಬಂಧಿಸಿದ್ದರು.
2018ರ ಅಕ್ಟೋಬರ್ನಲ್ಲಿ ಆತನಿಗೆ ಸ್ಥಳೀಯ ಹೈಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ತೀರ್ಪು ಪ್ರಶ್ನಿಸಿ ಆತ 2022ರ ನವೆಂಬರ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದ. ಆದರೆ ಈ ಮೇಲ್ಮನವಿಯನ್ನು 2023ರ ಫೆಬ್ರವರಿಯಲ್ಲಿ ವಜಾಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.