ಮಕ್ಕಳನ್ನು ಬಾವಿಗೆ ನೂಕಿ ಹತ್ಯೆಗೈದ ಹೆತ್ತ ತಾಯಿ
Team Udayavani, Jan 21, 2022, 1:00 PM IST
ಅಫಜಲಪುರ: ಒಂದೂವರೆ ವರ್ಷ ಹಾಗೂ ಎರಡು ವರ್ಷ ಮೂರು ತಿಂಗಳ ಮಕ್ಕಳನ್ನು ತಾಯಿಯೇ ಬಾವಿಗೆ ತಳ್ಳಿ ನಂತರ ಶವಗಳನ್ನು ಹೂತು ಹಾಕಿದ ಘಟನೆ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.
ಭಾಗಮ್ಮ ಭೂತಾಳಿ ಮಕ್ಕಳನ್ನು ಕೊಲೆ ಮಾಡಿದ ಆರೋಪಿತಳು. ಈ ಸಂಬಂಧ ಈಕೆ ಪತಿ ಭೂತಾಳಿ ದೇವಲಗಾಣಗಾಪುರದಲ್ಲಿ ದೂರು ದಾಖಲಿಸಿದ್ದಾರೆ.
ಕಳೆದ ನಾಲ್ಕು ವರ್ಷದ ಹಿಂದೆ ಭಾಗಮ್ಮನ ಜತೆ ಮದುವೆಯಾಗಿತ್ತು. ಹೊಟ್ಟೆಪಾಡಿಗಾಗಿ ಹುಟ್ಟೂರು ಕೆಕ್ಕರಸಾವಳಗಿ ಬಿಟ್ಟು ಬೆಂಗಳೂರಿಗೆ ಹೋಗಿ ಎರಡು ತಿಂಗಳ ಹಿಂದಷ್ಟೆ ಮರಳಿ ಪತ್ನಿ ತವರೂರಾದ ದೇಸಾಯಿ ಕಲ್ಲೂರಿನಲ್ಲಿ ವಾಸವಾಗಿದ್ದೆವು. ಮನೆಯಲ್ಲಿ ಮೇಲಿಂದ ಮೇಲೆ ಸಣ್ಣಪುಟ್ಟ ಜಗಳ ಆಗುತ್ತಿತ್ತು. ಕಳೆದ ಜ. 19ರಂದು ಬೆಳಗ್ಗೆ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮಧ್ಯಾಹ್ನ ಮನೆಗೆ ಬಂದಾಗ ಮಕ್ಕಳು ಇರಲಿಲ್ಲ.
ಗಾಬರಿಯಾಗಿ ಎಲ್ಲೆಡೆ ವಿಚಾರಿಸಿದಾಗ ಗ್ರಾಮದ ಬಾವಿಯ ಬಳಿಯಲ್ಲಿ ಎರಡು ಮಕ್ಕಳನ್ನು ಮಹಿಳೆಯೊಬ್ಬಳು ತಳ್ಳಿ ತಾನೂ ಬಿದ್ದಿದ್ದಾಳೆ ಎಂದು ಎಂದು ತಿಳಿಯಿತು. ಓಡಿ ಹೋಗಿ ನೋಡಿದಾಗ ಮಕ್ಕಳನ್ನು ಬಾವಿಗೆ ತಳ್ಳಿ ತನ್ನ ಪತ್ನಿ ದಡದಲ್ಲಿ ನಿಂತಿದ್ದಳು. ನಾನು ಮೂರ್ಛೆಹೋದೆ. ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ನನ್ನ ಪತ್ನಿ ಮಕ್ಕಳನ್ನು ಹೂತು ಹಾಕಿದ್ದಳು. ಇದಕ್ಕೆ ಸಹಕಾರ ನೀಡಿದವರ ವಿರುದ್ಧವೂ ಕಠಿಣ ಶಿಕ್ಷೆ ನೀಡಬೇಕು ಎಂದು ದೂರಿನಲ್ಲಿ ದಾಖಲಿಸಿದ್ದೇನೆ ಎಂದು ಪತಿ ಭೂತಾಳಿ ತಿಳಿಸಿದ್ದಾನೆ.
ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‌ಐ ರಾಜಶೇಖರ ರಾಠೊಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.