ಟಿಕೆಟ್ ಹಂಚಿಕೆಗೆ ಪ್ರತ್ಯೇಕ ಕೈ ಸಮಿತಿ! ಹಿಂಬಾಲಕರು, ಬೆಂಬಲಿಗರ ಪಡೆ ಸೃಷ್ಟಿಗೆ ಎಐಸಿಸಿ ಬ್ರೇಕ್
Team Udayavani, Dec 14, 2022, 7:10 AM IST
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಹಂಚಿಕೆ ಪ್ರಕ್ರಿಯೆ ಯಾರೊಬ್ಬರ ಪ್ರಭಾವಕ್ಕೂ ಸಿಲುಕಬಾರದು ಎಂಬ ದೂರದೃಷ್ಟಿಯಿಂದ ಎಐಸಿಸಿಯು ಪ್ರತ್ಯೇಕ ಸಮಿತಿ ರಚಿಸಲು ಮುಂದಾಗಿದೆ.
ಟಿಕೆಟ್ ಹಂಚಿಕೆ ವೇಳೆ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟವರು ತಮ್ಮದೇ ಆದ ಬೆಂಬಲಿಗರ ಪಡೆ ಕಟ್ಟಿಕೊಳ್ಳಲು ಪ್ರಭಾವ ಬೀರಬಾರದು ಎಂಬ ದೃಷ್ಟಿಯಿಂದ ಪ್ರತ್ಯೇಕ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ನಾಯಕತ್ವದ ಗುಂಪುಗಾರಿಕೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ.
ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಟಿಕೆಟ್ ಹಂಚಿಕೆ ನಮಗೆ ದೊಡ್ಡ ಸವಾಲು. ನಾಯಕರು ತಮ್ಮ ತಮ್ಮ ಬೆಂಬಲಿಗರು, ಹಿಂಬಾಲಕರಿಗೆ ಟಿಕೆಟ್ ಕೊಡಿಸಿದರೆ ಕಷ್ಟವಾಗುತ್ತದೆ. ಗೆಲ್ಲುವ ಸಾಮರ್ಥ್ಯ, ಸಾಮಾಜಿಕ ನ್ಯಾಯ, ಸ್ಥಳೀಯ ಜನಪ್ರಿಯತೆಯೇ ಮಾನದಂಡವಾಗಬೇಕು ಎಂದು ಹಲವು ನಾಯಕರು ಪ್ರತಿಪಾದಿಸಿದರು ಎನ್ನಲಾಗಿದೆ.
ಖರ್ಗೆ ಇದಕ್ಕೆ ಸಮ್ಮತಿಸಿದ್ದು, ಸದ್ಯದಲ್ಲೇ ಟಿಕೆಟ್ ಹಂಚಿಕೆ ಬಗ್ಗೆ ನಿರ್ಧಾರ ಮಾಡುವ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಡಿಸೆಂಬರ್ ಅಂತ್ಯಕ್ಕೆ ಸಮಿತಿಯ ಮೊದಲ ಸಭೆ ದಿಲ್ಲಿಯಲ್ಲಿ ನಡೆಯಲಿದೆ. ಈಗಾಗಲೇ ಎರಡು ಬಾರಿ ಪಕ್ಷದ ವತಿಯಿಂದ ಮಾಡಿಸಲಾಗಿರುವ ಸಮೀಕ್ಷೆ ಮಾಹಿತಿಯನ್ನೂ ಆ ಸಮಿತಿಯ ಮುಂದಿಡಲಾಗುತ್ತದೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷರು, ಉಭಯ ಸದನಗಳ ವಿಪಕ್ಷ ನಾಯಕರು, ರಾಜ್ಯ ಉಸ್ತುವಾರಿ, ಕೆಪಿಸಿಸಿ ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರೂ ಸೇರಿ ಪ್ರಮುಖರು ಆ ಸಮಿತಿಯಲ್ಲಿ ಇರಲಿದ್ದಾರೆ ಎಂದು ಹೇಳಲಾಗಿದೆ.
ಜನವರಿಯಲ್ಲಿ ಮೊದಲ ಪಟ್ಟಿ?
ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಒತ್ತಾಯ ಇರು ವ ಹಿನ್ನೆಲೆಯಲ್ಲಿ ಜನವರಿಯಲ್ಲಿ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಮರ್ಥರಿಗೆ ಹುಡುಕಾಟ
ಸಮ್ಮಿಶ್ರ ಸರಕಾರದ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದ ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್, ಚಿಕ್ಕಬಳ್ಳಾಪುರ ಮತ್ತು ಮಹಾಲಕ್ಷ್ಮೀ ಲೇಔಟ್, ಬೊಮ್ಮನಹಳ್ಳಿ, ಮಲ್ಲೇಶ್ವರ, ಬಸವನಗುಡಿ ಸೇರಿ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳು ಸಿಗದಿರುವುದು ಕಾಂಗ್ರೆಸ್‌ಗೆ ತಲೆನೋವಾಗಿದ್ದು, ಅಲ್ಲಿ ಬಿಜೆಪಿ ಆಕಾಂಕ್ಷಿಗಳನ್ನು ಸೆಳೆಯಲು ಪ್ರಯತ್ನಿಸಲು ಸೂಚನೆ ನೀಡಲಾಗಿದೆ. ಕೆಲವರು ಈಗಾಗಲೇ ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
-ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.