ಕಣದಲ್ಲಿ ತಾರಕಕ್ಕೇರಿದ ವಿಷದ ಮಾತು
Team Udayavani, Apr 29, 2023, 8:02 AM IST
ಪ್ರಧಾನಿ ನರೇಂದ್ರ ಮೋದಿ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ “ವಿಷ ಸರ್ಪ’ದ ಮಾತಿನಿಂದ ಬಿಜೆಪಿಗೆ ಪ್ರಬಲ ಅಸ್ತ್ರವೇ ಸಿಕ್ಕಂತಾಗಿದ್ದು, ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದೆ. ಈ ನಡುವೆ ಸೋನಿಯಾ ಗಾಂಧಿ ಕುರಿತಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲರ “ವಿಷಕನ್ಯೆ” ಹೇಳಿಕೆಯೂ ಕಾಂಗ್ರೆಸ್‌ನಲ್ಲಿ ಆಕ್ರೋಶ ಮೂಡಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ನ ಪ್ರಮುಖ ನಾಯಕರ “ವಿಷದ ಮಾತು” ಚುನಾವಣ ಕಣದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿ ನೀಲಕಂಠ: ಸಿಎಂ
ಕಲಬುರಗಿ: ಪ್ರಧಾನಿ ಮೋದಿ ಅವರನ್ನು ವಿಷ ಸರ್ಪ ಅಂತ ಕಲ್ಯಾಣ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಸರ್ಪ ನೀಲಕಂಠನ ಸಂಕೇತ. ಮೋದಿ ದೇಶದ ಭಯೋತ್ಪಾದನೆ, ಭ್ರಷ್ಟಾಚಾರ, ಬಡತನವನ್ನು ಒಧ್ದೋಡಿಸಿ ಸಶಕ್ತ ಭಾರತ ಕಟ್ಟಲು ಹಲವಾರು ರೀತಿಯ ವಿಷವನ್ನು ನುಂಗಿ ನೀಲಕಂಠ ಆಗಿದ್ದಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸೇಡಂನಲ್ಲಿ ರೋಡ್ ಶೋ ವೇಳೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಗೆ ದಿನಕ್ಕೊಂದು ಬಾರಿ ಮೋದಿ ಹೆಸರು ಹೇಳದಿದ್ದರೆ ನಿದ್ರೆ ಬರದು. ಇದು ಮೋದಿ ಬಗ್ಗೆ ಅವರಿಗಿರುವ ಭೀತಿಗೆ ಸಾಕ್ಷಿಯಾಗಿದೆ. ಮೋದಿ ನೇತೃತ್ವದಲ್ಲಿ ಎಲ್ಲೆಲ್ಲಿ ಚುನಾವಣೆ ಆಗಿದೆಯೋ ಅಲ್ಲೆಲ್ಲ ಕಾಂಗ್ರೆಸ್ ನಿರ್ಮೂಲವಾಗಿದೆ. ಈಗ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಸೋಲುವ ಸ್ಥಿತಿ ಬಂದಿದ್ದು, ರಾಜ್ಯದಲ್ಲಿ ಬಿಜೆಪಿಯ ಸುನಾಮಿ ಎದ್ದಿದೆ ಎಂದರು.
ಪ್ರಧಾನಿ ಮೋದಿಯವರ ಬಗ್ಗೆ “ವಿಷ ಸರ್ಪ’ ಹೇಳಿಕೆ ನೀಡಿ ಕಾಂಗ್ರೆಸ್‌ನ ಸಂಸ್ಕೃತಿ ಎಂಥದ್ದು ಎನ್ನುವುದನ್ನು ಖರ್ಗೆ ಬಹಿರಂಗಪಡಿಸಿದ್ದಾರೆ. ಕಾಂಗ್ರೆಸ್ಸಿಗರ ಮನಸ್ಸಿನಲ್ಲೇ ವಿಷವಿದೆ. ಖರ್ಗೆ ಹೇಳಿಕೆಯನ್ನು ಉಗ್ರವಾಗಿ ಖಂಡಿಸುವೆ. ಅವರ ಮಾತು ನಾಗರಿಕ ಸಮುದಾಯಕ್ಕೆ ಗೌರವ ಕೊಡುವಂಥದ್ದಲ್ಲ. ಪ್ರಧಾನಿಯವರ ಬಗೆಗಿನ ಈ ಹೇಳಿಕೆ ದೇಶವನ್ನು ಅವಮಾನಿಸಿದಂತಾಗಿದೆ.
– ವಿ. ಸುನಿಲ್‌ಕುಮಾರ್, ಸಚಿವ
ಮೋದಿ ಟೀಕಿಸಿದ ಖರ್ಗೆ ಗೌರವ ಮಣ್ಣುಪಾಲು
ಶಿವಮೊಗ್ಗ: ಖರ್ಗೆಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಒಂದು ತೂಕವಿತ್ತು. ಆದರೆ ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಅವರೇ ತಮ್ಮ ಗೌರವವನ್ನು ಮಣ್ಣುಪಾಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರಾಗಿರುವ ಖರ್ಗೆ ಇಂತಹ ಹೇಳಿಕೆ ನೀಡಿರುವುದು ದುರಂತ. ಖರ್ಗೆ ಅವರು ಪ್ರಧಾನಿ ಮೋದಿ ಬಗ್ಗೆ ಆ ರೀತಿ ಹೇಳಿಕೆ ನೀಡಿದ್ದಾರಾ ಎಂಬ ಅನುಮಾನ ಇನ್ನೂ ಕಾಡುತ್ತಿದೆ. ಇದುವರೆಗೆ ಖರ್ಗೆಯವರನ್ನು ನಾವು ಕೂಡ ತಂದೆ ಸ್ವರೂಪದಲ್ಲಿ ಗೌರವಿಸುತ್ತಿದ್ದೆವು. ಆದರೆ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆಂದು ಭಾವಿಸಿರಲಿಲ್ಲ. ಅವರಿಗೆ ಈ ದುಃಸ್ಥಿತಿ ಯಾಕೆ ಬಂತೆಂಬುದು ನನಗೂ ಅರ್ಥವಾಗುತ್ತಿಲ್ಲ ಎಂದರು.
-ಕೆ. ಎಸ್. ಈಶ್ವರಪ್ಪ
ಬಿಜೆಪಿ ದೇಶದಲ್ಲಿ ಬರೀ ಬೆಂಕಿ ಹಚ್ಚುವ, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಅಂಥವರನ್ನು ಟಾರ್ಗೆಟ್ ಮಾಡಿ ದ್ವೇಷ ಸಾ ಧಿಸುತ್ತಿದ್ದಾರೆ. ಸಮಾಜದ ನೆಮ್ಮದಿ ಹಾಳು ಮಾಡುವ ಬಿಜೆಪಿಯ ಎಲ್ಲ ವಿಷ ಜಂತುಗಳಿಗೆ ಪಾಠ ಕಲಿಸಬೇಕಾಗಿದೆ.
-ಉಮಾಶ್ರೀ, ಮಾಜಿ ಸಚಿವೆ
ಮೋದಿ ಅವರ ಬಗ್ಗೆ ಖರ್ಗೆ ಹೇಳಿಕೆ ಅವರ ಕೀಳು ಮಟ್ಟದ ಅಭಿರುಚಿ ತೋರಿಸುತ್ತದೆ. ಕಾಂಗ್ರೆಸ್ ದೇಶದ ಎಲ್ಲೆಡೆ ಅಸ್ತಿತ್ವ ಕಳೆದುಕೊಂಡಿದ್ದು, ಕರ್ನಾಟಕದಲ್ಲೂ ಕೊನೆಯುಸಿರು ಎಳೆಯುತ್ತಿದೆ. ಇಂತಹ ಪಕ್ಷದಲ್ಲಿ ಇದುವರೆಗೂ ಸಜ್ಜನ ಎಂದೇ ಹೆಸರಾಗಿದ್ದ ಖರ್ಗೆಯವರೂ ಸೋನಿಯಾ ಗಾಂಧಿ ಕುಟುಂಬವನ್ನು ಓಲೈಸಲು ಈ ರೀತಿಯ ಶಬ್ದಗಳನ್ನು ಪ್ರಯೋಗಿಸಿದ್ದಾರೆ.
– ಕ್ಯಾ| ಗಣೇಶ್ ಕಾರ್ಣಿಕ್, ಬಿಜೆಪಿ ರಾಜ್ಯ ವಕ್ತಾರ
ಖರ್ಗೆಯವರು ದೇಶದ ಪ್ರಧಾನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ, ಅವರು 140 ಕೋಟಿ ಭಾರತೀಯರನ್ನು ಅವಮಾನಿಸಿ¨ªಾರೆ. ವಿಶ್ವ ಮನ್ನಣೆ ಪಡೆದ ಪ್ರಧಾನಿಯನ್ನು ವಿಷ ಸರ್ಪಕ್ಕೆ ಹೋಲಿಸಿರುವುದು ರಾಜಕೀಯ ದಿವಾಳಿತನ ಮತ್ತು ಅವರ ವ್ಯಕ್ತಿತ್ವ ತೋರಿಸುತ್ತದೆ. ಚುನಾವಣೆಯಲ್ಲಿ ವೈಯಕ್ತಿಕ ನಿಂದನೆ ಸರಿಯಲ್ಲ.
-ಡಾ| ಕೆ.ಸುಧಾಕರ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.