ಹುಬ್ಬಳ್ಳಿ ಗಲಭೆ ಸ್ಥಳಕ್ಕೆ, ಠಾಣೆಗೆ ಅಬ್ದುಲ್ ಅಜೀಮ್ ಭೇಟಿ
Team Udayavani, Apr 21, 2022, 11:10 AM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮ್ಮದ್ ನಜೀರ್ ಅವರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ ಗಲಭೆ ಕುರಿತು ಮಾಹಿತಿ ಪಡೆದರು.
ನಂತರ ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು. ದೇಗುಲದ ಟ್ರಸ್ಟಿ ಮತ್ತು ಅರ್ಚಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಮುಂದೆ ಹೀಗಾಗದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.
ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ. ಎನ್.ಆರ್. ಪುರುಷೋತ್ತಮ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.