ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯ: ಜಪ್ಪಿನಮೊಗರಿನಲ್ಲಿ 2 ಎಕ್ರೆ ನಿವೇಶನ ವ್ಯವಸ್ಥೆಗೆ ಚಿಂತನೆ


Team Udayavani, Feb 16, 2021, 4:30 AM IST

ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯ: ಜಪ್ಪಿನಮೊಗರಿನಲ್ಲಿ 2 ಎಕ್ರೆ ನಿವೇಶನ ವ್ಯವಸ್ಥೆಗೆ ಚಿಂತನೆ

ಮಹಾನಗರ: ಹೊರರಾಜ್ಯ ಹಾಗೂ ಹೊರಜಿಲ್ಲೆಗಳಿಂದ ಉದ್ಯೋಗ ನಿಮಿತ್ತ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.
ನಗರದ ಜಪ್ಪಿನಮೊಗರು ವ್ಯಾಪ್ತಿಯಲ್ಲಿರುವ ಎರಡು ಎಕ್ರೆ ನಿವೇಶನದಲ್ಲಿ ಈ ಸಂಬಂಧ ವ್ಯವಸ್ಥೆ ಕಲ್ಪಿಸಲು ಉದ್ದೇಶಿ ಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರ ಇದಕ್ಕೆ ನೆರವು ನೀಡುವ ನಿರೀಕ್ಷೆಯಿದೆ.

ಸದ್ಯ ವಲಸೆ ಕಾರ್ಮಿಕರು ನಗರದ ವಿವಿಧ ಭಾಗಗಳಲ್ಲಿ ಬಾಡಿಗೆ ಆಧಾರಿತವಾಗಿ ವಾಸವಾಗಿದ್ದಾರೆ. ಇನ್ನು ಹಲವು ಮಂದಿ ಟೆಂಟ್‌ ಹಾಕಿ ಬೀದಿ ಬದಿಯಲ್ಲಿ/ಕೆಲಸ ಮಾಡುವ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಇನ್ನು ಕೆಲವರಿಗೆ ಬಸ್‌ನಿಲ್ದಾಣ, ರೈಲು ನಿಲ್ದಾಣವೇ ಆಶ್ರಯದಾಣವಾಗಿದೆ. ಇಂತಹ ವಲಸೆ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ನೀಡುವುದು ಸರಕಾರದ ಉದ್ದೇಶವಾಗಿದೆ.
ಕೊರೊನಾ ಕಾರಣ ಲಾಕ್‌ಡೌನ್‌ ಘೋಷಿಸಿದ ಸಂದರ್ಭ ದ.ಕ. ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಬವಣೆ ಬೆಳಕಿಗೆ ಬಂದಿತ್ತು.

ಜಿಲ್ಲೆಯಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಇದ್ದಾರೆ ಎಂಬ ಮಾಹಿತಿ ಕೂಡ ಜಿಲ್ಲಾಡಳಿತದಲ್ಲಿ ಇಲ್ಲದ ಕಾರಣದಿಂದ ಅವರಿಗೆ ಆಗ ವಸತಿ, ಊಟದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಮಾಡಿಕೊಡುವುದು ಜಿಲ್ಲಾಡಳಿತಕ್ಕೆ ಬಹುದೊಡ್ಡ ತಲೆನೋವಾಗಿತ್ತು.
ನೂತನ ವಸತಿ ಯೋಜನೆಯ ವ್ಯವಸ್ಥೆಯಲ್ಲಿ ಯಾವ ವಲಸೆ ಕಾರ್ಮಿಕರು ಇರಬೇಕು ಎಂಬುದನ್ನು ಜಿಲ್ಲಾಡಳಿತವೇ ಅಂತಿಮಗೊಳಿಸಲಿದೆ. ಹೀಗಾಗಿ, ಕಾ ರ್ಮಿಕರ ಆಯ್ಕೆ ಜಿಲ್ಲಾಡಳಿತದ ಹೊಣೆ. ಖಾಲಿ ನಿವೇಶನದಲ್ಲಿ ವಸತಿಯನ್ನು ಸರಕಾರವೇ ನಿರ್ಮಿಸಿಕೊಡಲಿದೆ. ತಾತ್ಕಾಲಿಕ ನೆಲೆಯಲ್ಲಿ ಕಾರ್ಮಿಕರು ಇದನ್ನು ಬಳಕೆ ಮಾಡಲಿದ್ದಾರೆ. ಅವರಿಂದ ಕನಿಷ್ಠ ಮೊತ್ತವನ್ನು ಪಡೆಯುವ ಬಗ್ಗೆಯೂ ಸದ್ಯ ಮಾತುಕತೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ತೀರ್ಮಾನ ಇನ್ನಷ್ಟೇ ಆಗಬೇಕಿದೆ. ಈ ವ್ಯವಸ್ಥೆಯಲ್ಲಿ ಹೊರಜಿಲ್ಲೆ, ಹೊರ ರಾಜ್ಯದ ಕಾರ್ಮಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಯೋಜನೆ ಗಾಗಿ ಅನುದಾನ ನೀಡುವಂತೆ ದ.ಕ. ಜಿಲ್ಲಾಡಳಿತದಿಂದ ಈಗಾಗಲೇ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ವಸತಿ ವ್ಯವಸ್ಥೆಗೆ ಯೋಜನೆ
ವಲಸೆ ಕಾರ್ಮಿಕರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರ ಯೋಜನೆ ಹಮ್ಮಿಕೊಂಡಿದೆ. ಇದರಂತೆ ಮಂಗಳೂರು ಭಾಗದಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಅಧಿಕವಿರುವ ಕಾರಣದಿಂದ ಅವರಿಗೆ ಪರ್ಯಾಯ ವಸತಿ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು. ಶೀಘ್ರದಲ್ಲಿ ಇದಕ್ಕೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ.
– ಡಿ. ವೇದವ್ಯಾಸ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ

55 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು!
ಲಾಕ್‌ಡೌನ್‌ ಸಮಯದಲ್ಲಿ ರಾಜ್ಯ ಸರಕಾರಕ್ಕೆ ದ.ಕ. ಜಿಲ್ಲಾಡಳಿತವು ನೀಡಿದ ವಲಸೆ ಕಾರ್ಮಿಕರ ವರದಿಯ ಪ್ರಕಾರ ಉತ್ತರಪ್ರದೇಶ, ಬಿಹಾರ, ರಾಜಸ್ಥಾನ, ಝಾರ್ಖಂಡ್‌, ಪಶ್ಚಿಮ ಬಂಗಾಲ ಸಹಿತ ವಿವಿಧ ರಾಜ್ಯಗಳ ಸುಮಾರು 40 ಸಾವಿರಕ್ಕೂ ಅಧಿಕ ಕಾರ್ಮಿಕರು ಮಂಗಳೂರು ಸಹಿತ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಗಲಕೋಟೆ, ಗದಗ, ವಿಜಯಪುರ ಸಹಿತ ರಾಜ್ಯದ 25 ಜಿಲ್ಲೆಗಳ 15 ಸಾವಿರಕ್ಕೂ ಅಧಿಕ ಮಂದಿ ಜಿಲ್ಲೆಯಲ್ಲಿ ಕಾರ್ಮಿಕರಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದರು. ಈ ಪೈಕಿ ಬಹುತೇಕ ಮಂದಿ ಈಗಾಗಲೇ ತಮ್ಮ ರಾಜ್ಯ/ಜಿಲ್ಲೆಗಳಿಗೆ ಹೋದವರು ವಾಪಾಸಾಗಿದ್ದರೆ, ಬಹುತೇಕ ಮಂದಿ ವಾಪಸ್‌ ಇನ್ನೂ ಬರಲಿಲ್ಲ.

– ದಿನೇಶ್‌ ಇರಾ

ಟಾಪ್ ನ್ಯೂಸ್

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

2-kambala

Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ

1-tal

Talapady: ಟೋಲ್‌ ಖಂಡಿಸಿ ಪ್ರತಿಭಟನೆಗೆ ಸಿದ್ಧತೆ

Water Supply

Mangaluru;’ಸ್ವಚ್ಛ ಸುಜಲ’ದತ್ತ ಗ್ರಾಮ ಪಂಚಾಯತ್‌ಗಳು

1-kkl

ಸೂರ್ಯ ಘರ್‌ ಯೋಜನೆಯಿಂದ 30 ಗಿ.ವ್ಯಾ. ಗುರಿ: ಜೋಷಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.