ಸಾಲದ ನೋಟಿಸ್ ಕಂಡು ಆತ್ಮಹತ್ಯೆಗೆ ಯತ್ನ ಆರೋಪ: ಸಂಸದ, ಶಾಸಕರಿಂದ ಆರೋಗ್ಯ ವಿಚಾರಣೆ
Team Udayavani, Jul 16, 2023, 5:20 AM IST
ಬಂಟ್ವಾಳ: ಕಾವಳ ಮೂಡೂರು ಗ್ರಾಮದ ಪಂಜಾಡಿ ನಿವಾಸಿ ಗುರುಪ್ರಸಾದ್ ಪ್ರಭು ಅವರು ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಸಹಕಾರಿ ಸಂಘವೊಂದರ ಸಾಲದ ನೋಟಿಸ್ ಕಂಡು ಅಘಾತಗೊಂಡು ಆತ್ಮಹತ್ಯೆಗೈಯಲು ಪ್ರಯತ್ನಿಸಿದರೆಂದು ಆರೋಪಿಸಲಾಗಿದೆ.
ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅವರಿಗೆ ಸಾಲ ಮರುಪಾವತಿಯ ಕುರಿತು ನೋಟಿಸ್ ಬಂದಿದ್ದು, ಆದರೆ ಬ್ಯಾಂಕಿನಲ್ಲಿ ಅವರ ಯಾವುದೇ ಸಾಲ ಇಲ್ಲ. ಈ ಕುರಿತು ಪುಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ಶನಿವಾರ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಕುಟುಂಬದ ಜತೆ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ.
ಈ ವೇಳೆ ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುದರ್ಶನ್ ಬಜ, ಅಜಿತ್ ಶೆಟ್ಟಿ ಮೊದಲಾದವರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.