ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

Team Udayavani, Mar 23, 2023, 7:33 PM IST

arrest

ಸಂಕೇಶ್ವರ : ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಬಂಧಿತನಿಂದ 169 ಗ್ರಾಂ ಚಿನ್ನಾಭರಣ 100 ಗ್ರಾಂ ಬೆಳ್ಳಿಯ ಆಭರಣ ಹೀಗೆ ಒಟ್ಟು 11,18,500 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಫಕೀರಪ್ಪ ಕಾಂಬಳಿ ಎಂಬುವ ಬಂಧಿತ ಆರೋಪಿಯಾಗಿದ್ದಾನೆ. ಇದರಿಂದ ಶಂಕೇಶ್ವರ ಪೊಲೀಸ್ ಠಾಣೆ ನಾಲ್ಕು ಪ್ರಕರಣಗಳು ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ನಾಲ್ಕು ಪ್ರಕರಣಗಳು ಪತ್ತೆ ಆಗಿವೆ. ಮಾರ್ಚ್‌ 1 ರಂದು ನಿಡಸೋಸಿ ಗ್ರಾಮದ ಬಳಿಯ ಒಂದು ಮನೆಯಲ್ಲಿ ರಾತ್ರಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ವರದಿ ಆಗಿದ್ದು ಅಲ್ಲದೇ ವರ್ಷದ ಆರಂಭದಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರಾತ್ರಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.

ಈ ಬಗ್ಗೆ ತನಿಖೆ ನಡೆಸಲು ಹೇಚ್ಚುವರಿ ಪೊಲೀಸ್ ಅಧೀಕ್ಷಕ ಬೆಳಗಾವಿ ಮತ್ತು ಡಿ.ಎಸ್.ಪಿ ಗೋಕಾಕ ಡಿ.ಎಚ್‍ಮುಲ್ಲಾ, ಅವರ ನೇತೃತ್ವದಲ್ಲಿ ಹುಕ್ಕೇರಿಯ ಸಿಪಿಐ ರಪೀಕ್ ತಹಸಿಲ್ದಾರ್ ಮತ್ತು ಸಿಬ್ಬಂದಿ ಮತ್ತು ಸಂಕೇಶ್ವರ ಪೊಲೀಸ್ ಠಾಣಿಯ ಸಿಪಿಐ ಪ್ರಹ್ಲಾದ ಚೆನ್ನಗೀರಿ ಹಾಗೂ ಸಿಬ್ಬಂದಿ ಒಳಗೊಂಡ ತನಿಖಾ ತಂಡವನ್ನು ರಚನೆ ಮಾಡಿಲಾಗಿತ್ತು.

ಮಾರ್ಚ್‌ 13ರಂದು ಸಂಕೇಶ್ವರ ಠಾಣಿ ಹದ್ದಿಯ ಕಮತನೂರ ಗೇಟ್ ಹತ್ತಿರ ಆರೋಪಿಯನ್ನು ಪತ್ತೆ ಮಾಡಿ ಆತನ ಬಳಿ ಇದ್ದ 169 ಗ್ರಾಂ ಬಂಗಾರದ ಆಭರಣಗಳು ಹಾಗೂ 100 ಗ್ರಾಂ ಬೆಳ್ಳಿಯ ಆಭರಣಗಳು, 14540/- ರೂ. ನಗದು ಹಣ, ಟಾಟಾ ಕಂಪನಿಯ ಮಾಂಜಾ ಕಾರು -KA. 22 P 7662, ಹೀರೊ ಕಂಪನಿಯ ಮ್ಯಾಸ್ಕೊ ಮೋಟರ್‌ ಸೈಕಲ್‌ ನಂಬರ್‌- KA. 19 EJ 7059, 11,18,500 ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಮ್. ಆರ್ ತಹಶಿಲ್ದಾರ, ಪಿ.ಆರ್ ಚನ್ನಗಿರಿ ಪಿ.ಐ, ಹಾಗೂ ಪಿ.ಎಸ್.ಐ ಕೆ.ಬಿ.ಜಕ್ಕನವರ, ಎ.ಎಸ್.ಐ ಯು.ಎಸ್. ಶೆಟ್ಟೆನ್ನವರ, ಹಾಗೂ ಸಿಬ್ಬಂದಿ ಜನರಾದ ಬಿ.ವಿ. ಹುಲಕುಂದ, ಬಿ. ಕೆ. ನಾಗನೂರಿ, ಎಮ್.ಎಮ್.ಕರಗುಪ್ಪಿ, ಬಿ.ಟಿ.ಪಾಟೀಲ, ಎಮ್. ಜಿ ದಾದಾಮಲಿಕ, ಬಿ.ಎಸ್.ಕಪರಟ್ಟಿ, ಎಮ್.ಎಮ್ ಜಂಬಗಿ ಹಾಗೂ ಹುಕ್ಕೇರಿ ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಎ.ಎಸ್.ಸನದಿ, ಗಜಾನನ ಕಾಂಬಳೆ, ಅಜೀತ ನಾಯಿಕ, ಸದ್ದಾಂ ರಾಮದುರ್ಗ, ಇವರು ಪಾಲ್ಗೊಂಡಿರುತ್ತಾರೆ.

ಈ ಕಾರ್ಯಾಚರಣೆ ಮೂಲಕ ಆರೋಪಿನನ್ನು ಬಂಧಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸಂಜೀವ ಪಾಟೀಲ, ಅವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.