ಯಾವುದೇ ಧರ್ಮದ ವಿರುದ್ಧವಿಲ್ಲ,ಮತಾಂತರ ಹಾವಳಿ ತಡೆಯುವ ಅಗತ್ಯವಿದೆ: ಗೃಹ ಸಚಿವ
Team Udayavani, Dec 23, 2021, 1:05 PM IST
ಬೆಳಗಾವಿ: ಸದನದಲ್ಲಿ ಮಂಡಿಸಲಾದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, ಯಾವುದೇ ಧರ್ಮದ ವಿರುದ್ಧವಲ್ಲ, ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕಾಪಾಡಿಕೊಳ್ಳಲು ಈ ಕಾಯಿದೆ ಸಹಕಾರಿಯಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ವಿಧಾನ ಸಭೆಗೆ ತಿಳಿಸಿದ್ದಾರೆ.
ಇಂದು ವಿಧಾನ ಸಭೆಯಲ್ಲಿ, ಮಾತನಾಡುತ್ತಾ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಹಕ್ಕು ವಿಧೇಯಕ ವನ್ನು ಮಂಡಿಸಲಾಗಿದ್ದು, ಸಮಾಜದಲ್ಲಿ ಪಿಡುಗಾಗಿ ಪರಿಣಮಿಸಿರುವ ಬಲವಂತದ ಹಾಗೂ ಆಮಿಷದ ಮತಾಂತರ ಹಾವಳಿಯನ್ನು ತಡೆಯುವ ಅಗತ್ಯವಿದೆ ಎಂದರು.
ಸ್ವಇಚ್ಛೆಯಿಂದ ಯಾರಾದರೂ ಮತಾಂತರ ವಾದರೆ ಅದಕ್ಕೆ ಯಾರದ್ದೂ ಅಸಮ್ಮತಿಯಿಲ್ಲ. ಕಾಯ್ದೆಯ ಕುರಿತು, ಯಾರೂ ಭಯ ಪಡಬೇಕಾಗಿಲ್ಲ, ಪ್ರತಿಯೊಂದು ಧರ್ಮದವರ ಅಸ್ಮಿತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕಾಯಿದೆಯನ್ನು ತಂದಿದ್ದೇವೆ.
ಈ ಕಾಯಿದೆ, ವಾಸ್ತವವಾಗಿ ಹಿಂದಿನ ಕಾಂಗ್ರೆಸ್ ಸರಕಾರದ ಕೂಸು, ಅದನ್ನೇ ಇನ್ನಷ್ಟು ಬಲಗೊಳಿಸಿದ್ದೇವೆ ಇದಕ್ಕೆ ಸದನದ ಸದಸ್ಯರು ಒಪ್ಪಿಗೆ ನೀಡಬೇಕು ಎಂದು, ಸಚಿವರು ಮನವಿ ಮಾಡಿ, ಇಂಥಹ ಮಸೂದೆಗಳು, ರಾಷ್ಟ್ರದ ಇತರ ಎಂಟು ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿದೆ, ಎಂದೂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.