Tragedy: ಮನೆಯಲ್ಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ಮಲಯಾಳಂ ನಟಿ
Team Udayavani, Sep 1, 2023, 11:08 AM IST
ತಿರುವನಂತಪುರಂ: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ 31 ವರ್ಷ ವಯಸ್ಸಾಗಿತ್ತು.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.
ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್, ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: Crime: ಕೇಂದ್ರ ಸಚಿವರ ಮನೆಯಲ್ಲಿ ಯುವಕನ ಶವ ಪತ್ತೆ: ಸ್ಥಳದಲ್ಲಿತ್ತು ಸಚಿವರ ಮಗನ ಪಿಸ್ತೂಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.