Hindutva Tweet: ನಟ ಚೇತನ್ ಕುಮಾರ್ ವೀಸಾ ರದ್ದು ಮಾಡಿದ ಕೇಂದ್ರ ಸರ್ಕಾರ
ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ(FRRO) ಹೊರಡಿಸಿದ್ದ ಪತ್ರ ಏಪ್ರಿಲ್ 14ರಂದು ಚೇತನ್ ಕೈಸೇರಿತ್ತು
Team Udayavani, Apr 15, 2023, 4:39 PM IST
ಬೆಂಗಳೂರು: ಒಂದಲ್ಲಾ ಒಂದು ವಿಚಾರದಲ್ಲಿ ಹಿಂದೂತ್ವದ ವಿರುದ್ಧ ಮಾತನಾಡಿ ವಿವಾದಕ್ಕೆ ಗುರಿಯಾಗುತ್ತಿರುವ ಸ್ಯಾಂಡಲ್ ವುಡ್ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅವರ ಸಾಗರೋತ್ತರ ವೀಸಾ (Overseas citizen of india)ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಇದನ್ನೂ ಓದಿ:BJP ಓಡಿಸುವುದೇ ನಿಜವಾದ ದೇಶಭಕ್ತಿ; Modi ಸರ್ವಾಧಿಕಾರಿ: ಯೆಚೂರಿ ವಾಗ್ದಾಳಿ
ಹಿಂದುತ್ವದ ಕುರಿತು ಟ್ವೀಟ್ ಮಾಡಿ ಬಂಧನಕ್ಕೊಳಪಟ್ಟು ಬಿಡುಗಡೆಯಾದ ಒಂದು ವಾರದ ಬಳಿಕ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದೆ.
ಸಂವಿಧಾನಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಜಯಂತಿ ದಿನವಾದ ಏಪ್ರಿಲ್ 14ರಂದೇ ಕೇಂದ್ರ ಸರ್ಕಾರ ನನ್ನ ಓಐಸಿ(ಸಾಗರೋತ್ತರ ವೀಸಾ)ಯನ್ನು ರದ್ದುಗೊಳಿಸಿರುವುದಾಗಿ ಚೇತನ್ ಅಹಿಂಸಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ದ ನ್ಯೂಸ್ ಮಿನಿಟ್ ವರದಿ ಪ್ರಕಾರ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ(FRRO) ಹೊರಡಿಸಿದ್ದ ಪತ್ರ ಏಪ್ರಿಲ್ 14ರಂದು ಚೇತನ್ ಕೈಸೇರಿತ್ತು. 15 ದಿನದೊಳಗೆ OIC ಕಾರ್ಡ್ ಅನ್ನು ಮರಳಿಸುವಂತೆ FRRO ಪತ್ರದಲ್ಲಿ ತಿಳಿಸಿತ್ತು.
ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಡ್ಜ್ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಚೇತನ್ ಅಹಿಂಸಾ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಂತರ ಎಫ್ ಆರ್ ಆರ್ ಓ 2022ರ ಜೂನ್ ನಲ್ಲಿ ಶೋಕಾಸ್ ನೋಟಿಸ್ ಅನ್ನು ಜಾರಿ ಮಾಡಿತ್ತು.
ನಿನ್ನೆ ಅಂಬೇಡ್ಕರ್ ಜಯಂತಿಯಂದು ಕೇಂದ್ರ ಗೃಹ ಸಚಿವಾಲಯವು ಭಾರತದಲ್ಲಿ ಉಳಿಯಲು ನನ್ನ ವೀಸಾವನ್ನು ರದ್ದುಗೊಳಿಸಿದೆhttps://t.co/MNDShlF64G pic.twitter.com/Y0ICvIKGPL
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 15, 2023
ನಾನು ಕಳೆದ 18 ವರ್ಷಗಳಿಂದ ದೇಶದಲ್ಲಿ ವಾಸಿಸುತ್ತಿದ್ದೇನೆ. ಹಲವಾರು ಸಾಮಾಜಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದೇನೆ. ವಿವಾಹವಾಗಿದ್ದು, ಹಲವು ಸಿನಿಮಾಗಳಲ್ಲಿ ನಟಿಸಿದ್ದೇನೆ. ಯಾವುದೇ ಕಾರಣಕ್ಕೂ ಭಾರತ ಬಿಟ್ಟು ಅಮೆರಿಕಕ್ಕೆ ವಾಪಸ್ ಹೋಗಲ್ಲ ಎಂದು ಚೇತನ್ ತಿಳಿಸಿರುವುದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.