ಪುಸ್ತಕ ಮೇಳದಲ್ಲಿ ಕಳ್ಳತನಕ್ಕಿಳಿದು ಬಂಧನಕ್ಕೊಳಗಾದ ನಟಿ ರೂಪಾ ದತ್ತಾ!
ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ
Team Udayavani, Mar 13, 2022, 3:49 PM IST
![1-fds](https://www.udayavani.com/wp-content/uploads/2022/03/1-fds-1-620x446.jpg)
![1-fds](https://www.udayavani.com/wp-content/uploads/2022/03/1-fds-1-620x446.jpg)
ಕೋಲ್ಕತಾ: ಇಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಪುಸ್ತಕ ಮೇಳದದಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿದ ಆರೋಪದ ಮೇಲೆ ನಟಿ ರೂಪಾ ದತ್ತಾ ಅವರನ್ನು ಬಂಧಿಸಲಾಗಿದೆ.
ಟಿವಿ ಧಾರವಾಹಿಗಳಲ್ಲಿ ನಟಿಸಿದ್ದ ರೂಪಾ ದತ್ತಾ ಅವರು ಶನಿವಾರ ಪರ್ಸ್ ಅನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ನೋಡಿ ಪೊಲೀಸ್ ಅಧಿಕಾರಿ ಅವರನ್ನು ಬಂಧಿಸಿದ್ದಾರೆ ಎಂದು ಬಿಧಾನ್ ನಗರ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿಸಿದ ಬಳಿಕ ಪ್ರಶ್ನಿಸಲಾಗಿದ್ದು, ಆ ಸಮಯದಲ್ಲಿ ಆಕೆಯ ಉತ್ತರಗಳಲ್ಲಿ ವ್ಯತ್ಯಾಸಗಳು ಕಂಡುಬಂದವು. ತಪಾಸಣೆಯ ವೇಳೆ ಆಕೆಯ ಬ್ಯಾಗ್‌ನಿಂದ ಕೆಲವು ಪರ್ಸ್‌ಗಳು ಮತ್ತು 75,000 ರೂ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಮನ ತಿರುಗಿಸಿ ಕಳ್ಳತನ ಮಾಡಿರುವುದಕ್ಕೆ ಸಂಬಂಧಿಸಿದಂತೆ ಆಕೆಯನ್ನು ಬಂಧಿಸಲಾಗಿದೆ ಮತ್ತು ಇನ್ಯಾರಾದರೂ ಆಕೆಯೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ರೂಪಾ ದತ್ತಾ ಅವರು ಈ ಹಿಂದೆ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ತಪ್ಪಾಗಿ ಆರೋಪಿಸಿ ಸುದ್ದಿಯಾಗಿದ್ದರು. ಖ್ಯಾತ ನಿರ್ದೇಶಕರ ಹೆಸರನ್ನು ಇನ್ನೊಬ್ಬ ವ್ಯಕ್ತಿಯೊಂದಿಗೆ ಹಂಚಿಕೊಂಡ ತಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?](https://www.udayavani.com/wp-content/uploads/2025/02/2-27-150x90.jpg)
![Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?](https://www.udayavani.com/wp-content/uploads/2025/02/2-27-150x90.jpg)
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
![ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?](https://www.udayavani.com/wp-content/uploads/2025/02/1-23-150x90.jpg)
![ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?](https://www.udayavani.com/wp-content/uploads/2025/02/1-23-150x90.jpg)
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
![Ajay Devgn lends his voice to ‘Chhaava’](https://www.udayavani.com/wp-content/uploads/2025/02/ajay-150x84.jpg)
![Ajay Devgn lends his voice to ‘Chhaava’](https://www.udayavani.com/wp-content/uploads/2025/02/ajay-150x84.jpg)
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
![ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ](https://www.udayavani.com/wp-content/uploads/2025/02/ch-150x84.jpg)
![ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ](https://www.udayavani.com/wp-content/uploads/2025/02/ch-150x84.jpg)
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
![Mamata-Kulakarni](https://www.udayavani.com/wp-content/uploads/2025/02/Mamata-Kulakarni-150x90.jpg)
![Mamata-Kulakarni](https://www.udayavani.com/wp-content/uploads/2025/02/Mamata-Kulakarni-150x90.jpg)
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ