ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
ಲೋಕಾಯುಕ್ತ ಎಸ್ ಐಟಿ ಎಡಿಜಿಪಿ ಚಂದ್ರಶೇಖರ್ ಗವರ್ನರ್ ಗೆಹ್ಲೋಟ್ ಗೆ ಪತ್ರ ಬರೆದಿದ್ದರು.
Team Udayavani, Nov 5, 2024, 12:35 PM IST
ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಮಂಗಳವಾರ (ನ.05) ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಆರೋಪಿ ಎ1 ಎಂದು ನಮೂದಿಸಿದ್ದು, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ಎ2, ಜೆಡಿಎಸ್ ಮುಖಂಡ ಸುರೇಶ್ ಬಾಬ ಆರೋಪಿ ಎ3 ಎಂದು ಎಫ್ ಐಆರ್ ನಲ್ಲಿ ಬಿಎನ್ ಎಸ್ ಸೆಕ್ಷನ್ 224ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರು ತನ್ನ ವಿರುದ್ಧ ದುರುದ್ದೇಶ ಪೂರ್ವಕವಾಗಿ ಆರೋಪ ಮಾಡಿ, ಬೆದರಿಕೆ ಹಾಕಿರುವುದಾಗಿ ಚಂದ್ರಶೇಖರ್ ಅವರು ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ನಗರದ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ ಐಆರ್ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಪ್ರಕರಣದ ವಿವರ:
ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇರೆಗೆ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ ಐಟಿ ಎಡಿಜಿಪಿ ಚಂದ್ರಶೇಖರ್ ಗವರ್ನರ್ ಗೆಹ್ಲೋಟ್ ಗೆ ಪತ್ರ ಬರೆದಿದ್ದರು.
ಈ ಪತ್ರದ ಮಾಹಿತಿ ಸೋರಿಕೆಯಾದ ನಂತರ ಕುಮಾರಸ್ವಾಮಿ, ಎಡಿಜಿಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು, ನಾನು ಪ್ರಕರಣದಲ್ಲಿ ಜಾಮೀನು ತಗೊಂಡಿದ್ದೇನೆ, ಆದರೆ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂ2 ಹೈಕೋರ್ಟ್ ನಲ್ಲಿ ಅಧಿಕಾರಿ ತಡೆಯಾಜ್ಞೆ ತಗೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದರು.
ಇದಕ್ಕೆ ಎಡಿಜಿಪಿ ಚಂದ್ರಶೇಖರ್, ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ, ಹಂದಿಗಳ ಜತೆ ಜಗಳಕ್ಕೆ ಇಳಿದರೆ ನಾವು ಗಲೀಜಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದು ಪತ್ರದಲ್ಲಿ ಜಾರ್ಜ್ ಬರ್ನಾಡ್ ಶಾ ಅವರ ಹೇಳಿಕೆ ಉಲ್ಲೇಖಿಸಿದ್ದರು. ನಂತರ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.