ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ
Team Udayavani, Mar 31, 2023, 6:36 AM IST
ಮಂಗಳೂರು: ಜಿಲ್ಲೆಯ ಎರಡು ಅಣೆಕಟ್ಟುಗಳಿಂದ ಡ್ರೆಜ್ಜಿಂಗ್ ನಡೆಸಿ ಮರಳು ತೆಗೆಯುವುದಕ್ಕೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ತಡೆಯೊಡ್ಡಿದೆ.
ಆದ್ಯಪಾಡಿ ಮತ್ತು ಶಂಭೂರು ಅಣೆಕಟ್ಟೆಗಳ ಹಿನ್ನೀರಿನಿಂದ ಹೂಳೆತ್ತುವ, ಆ ಮೂಲಕ ಸಿಕ್ಕಿದ ಮರಳನ್ನು ಮಾರಾಟ ಮಾಡುವುದಕ್ಕೆ ಈ ಹಿಂದೆ ಕಾರ್ಯಾದೇಶ ನೀಡಲಾಗಿತ್ತು. ಕರ್ನಾಟಕ ರಾಜ್ಯ ಖನಿಜ ನಿ.ಲಿ. ನಿಂದ ದಕ್ಷಿಣ ಕನ್ನಡ ಜಿಲ್ಲಾ ಮರಳು ನಿಗಾ ಸಮಿತಿಗೆ ಕಾರ್ಯಾದೇಶ ಹೊರಡಿಸಲಾಗಿತ್ತು. ಈ ಪ್ರಕ್ರಿಯೆಯೇ 2006ರ ಪರಿಸರ ಪರಿಣಾಮ ಮೌಲ್ಯಮಾಪನ ಅಧಿಸೂಚನೆಯ ಉಲ್ಲಂಘನೆಯಾಗಿದೆ ಎಂದು ನ್ಯಾಯಾಧಿಕರಣ ತಿಳಿಸಿದೆ.
ಫಲ್ಗುಣಿ (ಗುರುಪುರ) ಮತ್ತು ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟಿನ ಹಿನ್ನೀರಿನಿಂದ 14,51,680 ಟನ್ ಮರಳನ್ನು ತೆಗೆಯಲು ಮರಳು ಮೇಲ್ವಿಚಾರಣಾ ಸಮಿತಿಯು ಈ ಹಿಂದೆ ಅನುಮತಿಯನ್ನು ನೀಡಿತ್ತು. ಆದರೆ ಪರಿಸರ ಅನುಮೋದನೆ (ಇಸಿ) ಪಡೆಯುವಲ್ಲಿ ಇಲಾಖೆ ವಿಫಲವಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಎನ್‌ಜಿಟಿ ನಡೆಸಿತ್ತು. ಇಸಿ ಪಡೆದುಕೊಳ್ಳದೆ ಮರಳು ತಗೆಯಲು ಆದೇಶ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಈ ಕುರಿತು ಗಣಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಈ ಎರಡೂ ಅಣೆಕಟ್ಟಿನಿಂದ ಮರಳು ತೆಗೆಯುವುದನ್ನು ಕಳೆದ ಒಂದು ತಿಂಗಳ ಹಿಂದೆಯೇ ನಿಲ್ಲಿಸಲಾಗಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.