UK: ಬೋರಿಸ್ ರಾಜೀನಾಮೆ ಬಳಿಕ ಸುನಕ್‌ಗೆ ಹೊಸ ಸವಾಲು
3 ಸಂಸದೀಯ ಕ್ಷೇತ್ರಗಳಿಗೆ ತಕ್ಷಣ ಚುನಾವಣೆ
Team Udayavani, Jun 12, 2023, 7:21 AM IST
ಲಂಡನ್: ಪಾರ್ಟಿಗೇಟ್ ಹಗರಣದ ಕೇಂದ್ರಬಿಂದುವಾಗಿದ್ದ ಯುಕೆ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಪ್ರಧಾನಮಂತ್ರಿ ರಿಷಿ ಸುನಕ್ ಅವರಿಗೆ ಹೊಸ ಸವಾಲು ಎದುರಾಗಿದೆ.
ಬೋರಿಸ್ ಅವರೊಂದಿಗೆ ಇನ್ನಿಬ್ಬರು ಸಂಸದರು ಕೂಡ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಕೂಡಲೇ ಒಟ್ಟು 3 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಬೇಕಿದೆ.
ಈಗಾಗಲೇ ಕನ್ಸರ್ವೇಟಿವ್ ಪಕ್ಷದ ಬಗ್ಗೆ ಬ್ರಿಟನ್ ಜನರಲ್ಲಿ ಅಸಮಾಧಾನ ಎದ್ದಿದೆ. ಹೀಗಿರುವಾಗ ಉಪಚುನಾವಣೆಗಳಲ್ಲಿ ಮೂರೂ ಸೀಟುಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಪ್ರಧಾನಿ ಸುನಕ್‌ಗೆ ಎದುರಾಗಿದೆ. ಈ ಪೈಕಿ ಅಕ್ಸ್‌ಬ್ರಿಡ್ಜ್ ಮತ್ತು ಸೌತ್ ರೂಸ್ಲಿಪ್‌ನಲ್ಲಿ 2019ರಲ್ಲಿ ಅತಿ ಕಡಿಮೆ ಅಂತರದಿಂದ ಕನ್ಸರ್ವೇಟಿವ್ ಪಕ್ಷ ಗೆಲುವು ಸಾಧಿಸಿತ್ತು. ಈ ಬಾರಿಯ ಉಪಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಸೋಲಿಸಿ, ಕನ್ಸರ್ವೇಟಿವ್ ಪಕ್ಷದ ಅಭ್ಯರ್ಥಿಗಳಿಗೆ ಗೆಲುವು ಸಿಗುವಂತೆ ಮಾಡುವ ಮೂಲಕ ತಮ್ಮ ಪ್ರಭಾವವನ್ನು ಸುನಕ್ ತೋರಿಸಬೇಕಾಗುತ್ತದೆ. 2025ರ ಜನವರಿಯಲ್ಲಿ ಯುಕೆಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.