ಕೃಷಿ ಭೂಮಿ ಖರೀದಿ ನಿರ್ಬಂಧ ಸಡಿಲ

79 ಎ, ಬಿ ರದ್ದುಪಡಿಸಲು ಸಂಪುಟ ತೀರ್ಮಾನ; ಕುಟುಂಬದ ಜಮೀನು ಮಾಲಕತ್ವ ಮಿತಿ ಏರಿಕೆ

Team Udayavani, Jun 12, 2020, 5:50 AM IST

ಕೃಷಿ ಭೂಮಿ ಖರೀದಿ ನಿರ್ಬಂಧ ಸಡಿಲ

ಬೆಂಗಳೂರು: ಕೃಷಿ ಜಮೀನು ಖರೀದಿಗೆ ಇದ್ದ ಎಲ್ಲ ನಿರ್ಬಂಧಗಳನ್ನು ತೆಗೆದು ಹಾಕಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಕೃಷಿಕರಲ್ಲದವರೂ ಕೃಷಿ ಭೂಮಿ ಖರೀದಿಸಬಹು ದಾಗಿದೆ. ಹಾಗೆಯೇ ಐವರು ಸದಸ್ಯರ ಕುಟುಂಬ 108 ಎಕರೆಯ ವರೆಗಿನ ಮಿತಿಯಲ್ಲಿ ಜಮೀನು ಹೊಂದಬಹುದಾಗಿದೆ. ಜತೆಗೆ ಕೃಷಿ ಭೂಮಿ ಖರೀದಿಗೆ ಕೃಷಿಯೇತರ ಆದಾಯದ ಮಿತಿಯನ್ನೂ ರದ್ದುಗೊಳಿಸಲಾಗಿದೆ.ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು 79 ಎ,ಬಿ,ಸಿ ಮತ್ತು 63 ಕಲಂಗಳನ್ನು ರದ್ದುಪಡಿ ಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಈ ನಿರ್ಧಾರದಿಂದ ಇನ್ನು ಮುಂದೆ ಕೃಷಿ ಜಮೀನು ಖರೀದಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.ಯಾರು, ಎಲ್ಲಿ ಬೇಕಾದರೂ ಕೃಷಿ ಜಮೀನು ಖರೀದಿಸ ಬಹುದು.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ,ಬದಲಾದ ಪರಿಸ್ಥಿತಿಯಲ್ಲಿ ಕೃಷಿಯ ಬಗ್ಗೆ ಐಟಿ- ಬಿಟಿ ವಲಯದವರ ಸಹಿತ ನಗರವಾಸಿಗಳು ಹೆಚ್ಚು ಒಲವು ತೋರಿಸು ತ್ತಿದ್ದಾರೆ. ಹೀಗಾಗಿ ಅವರು ಕೃಷಿ ಜಮೀನು ಖರೀದಿಸುವುದಕ್ಕೆ ಅನುಕೂಲ ಕಲ್ಪಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ನಿಯಮಾವಳಿ ರೂಪಿಸಿ ಅಧಿವೇಶನದಲ್ಲಿ ಮಸೂದೆ ಮಂಡಿಸ ಲಾಗುವುದು ಎಂದರು.
ಉಪವಿಭಾಗಾಧಿಕಾರಿ ಮತ್ತು ಡಿಸಿಗಳ ನ್ಯಾಯಾಲಯಗಳಲ್ಲಿ ಪ್ರಸ್ತುತ 79ಎ ಮತ್ತು ಬಿಗೆ ಸಂಬಂಧಿಸಿ ಇತ್ಯರ್ಥವಾಗದ ಪ್ರಕರಣಗಳು ರದ್ದಾಗಲಿವೆ. ಆದರೆ ಈ ಹಿಂದೆ ಇತ್ಯರ್ಥವಾಗಿ ರುವ, ಸರಕಾರ ವಶಕ್ಕೆ ಪಡೆದು, ಜಮೀನು ವಾಪಸ್‌ ಪಡೆದ ಪ್ರಕರಣಗಳಲ್ಲಿ ಮೇಲ್ಮನವಿಗೆ ಅವಕಾಶವಿಲ್ಲ ಎಂದರು.

ಉತ್ಪನ್ನ ಹೆಚ್ಚಳಕ್ಕಾಗಿ ಈ ಕ್ರಮ
ನಿರ್ಬಂಧ ಸಡಿಲಿಕೆಯಿಂದ ರೈತರ ಜಮೀನು ಅನ್ಯರ ಪಾಲಾಗುವುದಿಲ್ಲವೇ? ಇದಕ್ಕೆ ಸಾಕಷ್ಟು ವಿರೋಧವೂ ಇದೆಯಲ್ಲವೇ ಎಂಬ ಪ್ರಶ್ನೆಗೆ, ಪರಿಸ್ಥಿತಿಗೆ ತಕ್ಕಂತೆ ಕೆಲವು ಮಾರ್ಪಾಡು ಅಗತ್ಯ. ಕೃಷಿ ಬಗ್ಗೆ ಆಸಕ್ತಿಯುಳ್ಳವರು ಕೃಷಿ ಜಮೀನು ಖರೀದಿಸಿ ಆಹಾರ ಧಾನ್ಯ, ಹಣ್ಣು – ತರಕಾರಿ ಬೆಳೆಸುವ, ಕೃಷಿ ಉತ್ಪನ್ನದ ಪ್ರಮಾಣ ಹೆಚ್ಚಳವಾಗುವ ಆಶಯದೊಂದಿಗೆ ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎಂದರು.
ಐದು ಸದಸ್ಯರ ಕುಟುಂಬ 108 ಎಕರೆಯ ವರೆಗೂ ಕೃಷಿ ಜಮೀನು ಹೊಂದಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಗ್ರಾ.ಪಂ. ಆಡಳಿತಾಧಿಕಾರಿಗಳ ನೇಮಕಕ್ಕೆ ಸಂಪುಟ ಅಸ್ತು
ರಾಜ್ಯದ ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ  ಗಳನ್ನು ನೇಮಿಸಲು ಸಚಿವ ಸಂಪುಟ ಸಭೆ ಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆರು ತಿಂಗಳಲ್ಲಿ ಚುನಾವಣೆ ನಡೆಸಲು ಪ್ರಕ್ರಿಯೆ ಆರಂಭಿಸಿ ಅಲ್ಲಿಯವರೆಗೆ ಆಡಳಿತಾಧಿಕಾರಿ ನೇಮಿಸಲು ಡಿಸಿಗಳಿಗೆ ನಿರ್ದೇಶನ ನೀಡಲು ನಿರ್ಧರಿಸಲಾಗಿದೆ. ಸಹಕಾರ ಸಂಘಗಳ ಚುನಾವಣೆ ನಡೆಸಲು ಕೂಡ ಸಂಪುಟ ತೀರ್ಮಾನಿಸಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಮುಂಗಡ ವಾಪಸ್‌
ಕೋವಿಡ್ -19 ಸಂದರ್ಭದಲ್ಲಿ ಮದುವೆ ಮತ್ತು ಇತರ ಕಾರ್ಯಕ್ರಮಗಳಿಗೆ ಕಲ್ಯಾಣ ಮಂಟಪ ಗೊತ್ತುಪಡಿಸಿ, ಕಾರ್ಯಕ್ರಮ ನಡೆಸದೆ ಇದ್ದರೆ ಪಾವತಿ ಸಿದ್ದ ಮುಂಗಡ ಹಣಕ್ಕೆ ತೆರಿಗೆ ಕಡಿತ ಮಾಡಿಕೊಂಡು ವಾಪಸ್‌ ನೀಡಬೇಕು ಎಂದು ಸರಕಾರ ನಿರ್ದೇಶನ ನೀಡಿದೆ. ಈ ಸಂಬಂಧ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಲಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.