ಅಕ್ಕಮಹಾದೇವಿ ವಿವಿ: ವೈದೇಹಿ, ಡಾ.ಸುಮಾ, ಕಲ್ಪನಾರಿಗೆ ಗೌರವ ಡಾಕ್ಟರೇಟ್
12ನೇ ಘಟಿಕೋತ್ಸವ, ರಾಜ್ಯಪಾಲರಿಂದ ಪದವಿ ಪ್ರದಾನ
Team Udayavani, Nov 8, 2021, 4:59 PM IST
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ತುಳಸಿಮಾಲಾ.
ವಿಜಯಪುರ : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ನವೆಂಬರ್ 9 ರಂದು ನಡೆಯಲಿದ್ದು, ಮೂವರು ಸಾಧಕಿಯರಿಗೆ ಈ ಬಾರಿ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಲಾಗಿದೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಹಾಗೂ ಇತರೆ ಪದವಿಗಳ ಪ್ರದಾನ ಮಾಡಲಾಗುತ್ತದೆ.
ಸೋಮವಾರ ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಘಟಿಕೋತ್ಸವದ ವಿವರ ನೀಡಿದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ, ಸಾಹಿತ್ಯ ಕ್ಷೇತ್ರದಲ್ಲಿ ವೈದೇಹಿ ಕಾವ್ಯನಾಮದಿಂದ ಖ್ಯಾತಿ ಗಳಿಸಿರುವ ಜಾನಕಿ ಶ್ರೀನಿವಾಸಮೂರ್ತಿ, ಸಂಗೀತ ಕ್ಷೇತ್ರದ ಸಾಧಕಿ ಡಾ.ಸುಮಾ ಸುಧೀಂದ್ರ ಹಗೂ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಯಶಸ್ವಿ ಮಹಿಳಾ ಉದ್ಯಮಿ ಕಲ್ಪನಾ ಸರೋಜ್ ಅವರಿಗೆ ಈ ಬಾರಿಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇನ್ಫೋಸಿಸ್‍ನ ಸುಧಾಮೂರ್ತಿ ಅವರು ಆನ್‍ಲೈನ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದರು.
ಘಟಿಕೋತ್ಸವದ ವೇದಿಕೆಯಲ್ಲಿ ಗೌರವ ಡಾಕ್ಟರೇಟ್, ಚಿನ್ನದ ಪದಕ ವಿಜೇತರಿಗೆ ಹಾಗೂ ಪಿಎಚ್ಡಿ ಪದವಿಧರರಿಗೆ ಮಾತ್ರ ಪದವಿ ಪಡೆಯಲು ನೇರ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡಿದ್ದು, ಉಳಿದ ಎಲ್ಲ ಪದವೀಧರರಿಗೆ ಆನ್‍ಲೈನ್ ಮೂಲಕ ಪದವಿ ಪ್ರದಾನ ಮಾಡಲಾಗುತ್ತದೆ. ವಿವಿಧ ಸ್ನಾಥಕ, ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 76 ವಿದ್ಯಾಥಿನಿಯರಿಗೆ ಚಿನ್ನದ ಪದಕ ಸಹಿತ ಪದವಿ ಪ್ರದಾನ ಮಾಡಲಾಗುತ್ತದೆ. 65 ಚಿನ್ನದ ಪದಕಗಳ ಹೊರತಾಗಿ ಇತರೆ 11 ಚಿನ್ನದ ಪದಕ ಪಡೆಯುವಲ್ಲಿ ಸಮಾನ ಅಂಕ ಪಡೆದವರಿಗೆ ಚಿನ್ನದ ಪದಕದ ಮೌಲ್ಯದ ಹಣವನ್ನು ನಗದು ಬಹುಮಾನವಾಗಿ ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸೋಮವಾರ ಜರುಗಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ನಗದು ಬದಲಾಗಿ 76 ಚಿನ್ನದ ಪದಕ ನೀಡಲು ನಿರ್ಧರಿಸಲಾಗಿದೆ ಎಂದು ವಿವರ ನೀಡಿದರು.
ಘಟಿಕೋತ್ಸವದಲ್ಲಿ 996 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳ ಸ್ನಾತಕೋತ್ರರ, 89 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳ ಡಿಪ್ಲೋಮಾ ಪದವಿ, 10,123 ವಿದ್ಯಾರ್ಥಿನಿಯರಿಗೆ ಸ್ನಾತಕ ಸೇರಿದಂತೆ 11,208 ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಗುತ್ತದೆ. 48 ವಿದ್ಯಾರ್ಥಿನಿಯರಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಗುತ್ತದೆ.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವೆ ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಕೆ.ರಮೇಶ, ಆರ್ಥಿಕ ಅಧಿಕಾರಿ ಎಸ್.ಬಿ.ಕಾಮಶಟ್ಟಿ, ಘಟಿಕೋತ್ಸವ ಸಂಚಾಲಕರಾದ ಡಾ.ಡಿ.ಎಂ.ಮದರಿ, ಪತ್ರಿಕೋದ್ಯಮ ಸಮೂಹ ಮಾಧ್ಯಮ ವಿಭಾಗದ ಮುಖ್ಯಸ್ಥ ಡಾ.ಓಂಕಾರ ಕಾಕಡೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.