ಶ್ರಮಿಕರಿಗಾಗಿ ರಾಜ್ಯದಲ್ಲಿ ‘ಶ್ರಮಿಕ್ ಸಂಜೀವಿನಿ’ ಜಾರಿ

ಕಾರ್ಮಿಕ ಇಲಾಖೆಯಿಂದ ಮಹತ್ವಾಕಾಂಕ್ಷಿ ಯೋಜನೆ

Team Udayavani, Dec 27, 2021, 8:17 PM IST

1-sd

ಬೆಂಗಳೂರು: ಪ್ರತಿ ನಿತ್ಯ ತನ್ನ ಬದುಕಿನ ಭಾಗವಾಗಿ ಕೆಲಸದಲ್ಲಿ ತೊಡಗುವ ಕಾರ್ಮಿಕ ವರ್ಗ ಆರೋಗ್ಯದತ್ತ ಚಿತ್ತ ಹರಿಸದ ಪರಿಣಾಮ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದನ್ನು ಅರಿತ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಈ ಸಮಸ್ಯೆಗೆ ಪರಿಹಾರವಾಗಿ ‘ಶ್ರಮಿಕ್ ಸಂಜೀವಿನಿ’ ಯೋಜನೆಯನ್ನು ರೂಪಿಸಿ ಜಾರಿಗೆ ಮುಂದಾಗಿದ್ದಾರೆ.

ಕಳೆದ ಸಾಲಿನ ಆಯವ್ಯಯದಲ್ಲಿ ಅನುಮೋದನೆ ನೀಡಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಭಿತರ ಸ್ವಾಸ್ಥö್ಯಕ್ಕೆ ಒತ್ತು ನೀಡುವ ಶ್ರಮಿಕ್ ಸಂಜೀವಿನಿ ಜಾರಿಗೆ ಅಂತಿಮ ಹಂತದ ಸಿದ್ಧತೆಗಳು ನಡೆಸಿದ್ದು, ಇಲಾಖೆಯು ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಮುಂದಡಿ ಇರಿಸಿದೆ.

ಅತ್ಯಾಧುನಿಕ ಸಂಚಾರಿ ಕ್ಲಿನಿಕ್: ಶ್ರಮಿಕರು ಇರುವರೆಡೆಗೆ ತೆರಳಿ ಅವರ ಆರೋಗ್ಯ ಪರೀಕ್ಷಿಸಿ ಅಗತ್ಯ ಸಲಹೆ ಸೂಚನೆ ನೀಡುವ ಮಹತ್ವಾಕಾಂಕ್ಷೆಯೊAದಿಗೆ ಸಿದ್ಧಗೊಂಡಿರುವ ಈ ಸಂಚಾರಿ ಕ್ಲಿನಿಕ್‌ಗಳು ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಅಣಿಗೊಂಡಿರುವುದು ವಿಶೇಷ.

ಪ್ರತಿ ಸೋಮವಾರದಿಂದ ಶನಿವಾರದವರೆಗೆ ನಿಗಧಿತ ಅವಧಿಯಲ್ಲಿ ನಿಗಧಿತ ಪ್ರದೇಶಗಳಿಗೆ ಭೇಟಿ ನೀಡಿ ತಂಗಲಿರುವ ಈ ಸಂಚಾರಿ ಕ್ಲಿನಿಕ್ ಸೇವೆಯನ್ನು ಆರಂಭದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಾರವಾರ ಜಿಲ್ಲೆಗಳಲ್ಲಿ ಜಾರಿಗೆ ಕಾರ್ಮಿಕ ಇಲಾಖೆ ಸಿದ್ಧತೆಗಳನ್ನು ನಡೆಸಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಸಂಪೂರ್ಣ ಉಚಿತ ಆರೋಗ್ಯ ಸೇವೆಯನ್ನು ನೀಡಲಿದೆ. ಪ್ರತಿ ಸಂಚಾರಿ ಕ್ಲಿನಿಕ್‌ಗಳು ಓರ್ವ ವೈದ್ಯ, ಓರ್ವ ನರ್ಸ್, ಓರ್ವ ಫಾರ್ಮಸಿಸ್ಟ್, ಓರ್ವ ಲ್ಯಾಬ್ ಟೆಕ್ನಿಷಿಯನ್, ಎಎನ್‌ಎಮ್, ಚಾಲಕ ಮತ್ತು ಸಹಾಯಕ ಸಿಬ್ಬಂದಿಯನ್ನು ಹೊಂದಿರಲಿದೆ.

ಲಭ್ಯ ಸೇವೆಗಳು
ಗುಣಮುಖ ಸೇವೆಗಳು, ಪ್ರಥಮ ಚಿಕಿತ್ಸಾ ಸೇವೆಗಳು, ಪ್ರಯೋಗಾಲಕ ಪರೀಕ್ಷಾ ಸೇವೆಗಳು, ಕೋವಿಡ್ ಪರೀಕ್ಷಾ ಸೇವೆಗಳು, ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮ ಸೇವೆಗಳು, ಅನುಸರಣಾ ಸೇವೆಗಳು, ಕುಟುಂಬ ಯೋಜನಾ ಸೇವೆಗಳು, ಪ್ರಸವ ಪೂರ್ವ ಮತ್ತು ನಂತರದ ಸೇವೆಗಳು, ಚುಚ್ಚು ಮದ್ದು ಸೇವೆಗಳು, ಸಮಾಲೋಚನಾ ಸೇವೆಗಳು, ರಾಷ್ಟ್ರೀ ಯ ಆರೋಗ್ಯ ಕಾರ್ಯಕ್ರಮಗಳು, ಆರೋಗ್ಯ ಶಿಕ್ಷಣ ಮತ್ತು ಪರಿಸರ ನೈರ್ಮಲ್ಯ ಸೇವೆಗಳು ಸೇರಿದಂತೆ ಇತರೆ ನಿರ್ದೇಶಿತ ಆರೋಗ್ಯ ಸೇವೆಗಳು ಸ್ಥಳದಲ್ಲಿಯೇ ದೊರಕಲಿವೆ.

ಲಭ್ಯ ಸೌಲಭ್ಯಗಳು
ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದ ಆರೋಗ್ಯ ಸೇವೆಗಾಗಿ ಜಾರಿ ಆಗಲಿರುವ ಈ ಮೊಬೈಲ್ ಕ್ಲಿನಿಕ್‌ಗಳಲ್ಲಿ ಅತ್ಯಾಧುನಿಕ ಸವಲತ್ತುಗಳನ್ನು ನೀಡಲು ಇಲಾಖೆ ಆದ್ಯತೆ ನೀಡಿದ್ದು, ಆಧುನಿಕ ಸ್ಟೆçಚ್ಚರ್, ಬೆಡ್, ಆಕ್ಷಿಜನ್ ಪರಿಕರಗಳು, ಜೀವನಾವಶ್ಯಕ ಔಷಧಗಳು, ಜಿ.ಪಿ. ಆಪರೇಟಸ್, ಇಸಿಜಿ ಸೌಲಭ್ಯ, ರೆಫ್ರಿಜರೇಟರ್, ಕೋವಿಡ್ ಪರೀಕ್ಷಾ ಸಲಕರಣೆಗಳು, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳು, ಅವಶ್ಯಕ ವೈದ್ಯಕೀಯ ಪರಿಕರಗಳು, ಸಿಬ್ಬಂದಿಗೆ ಅಸನ ವ್ಯವಸ್ಥೆ, ಸೇವಾ ಕೇಂದ್ರಗಳ ಆರಂಭಕ್ಕೆ ಅಗತ್ಯ ಸಲಕರಣೆಗಳನ್ನು ಹೊಂದಿರಲಿದೆ.

ಈ ಸಂಚಾರಿ ಆರೋಗ್ಯ ಕ್ಲಿನಿಕ್‌ಗಳ ಸೇವೆ ಕುರಿತ ಇಲಾಖೆ ಪ್ರಚಾರದ ಮೂಲಕ ಜಾಗೃತಿ ಮೂಡಿಸಲು ಉದ್ದೇಶಿಸಿದ್ದು, ನಾಮಫಲಕಗಳ ಮೂಲಕ ಸೇವಾ ಅವಧಿಯನ್ನು ಪ್ರಚೂರ ಪಡಿಸಲಿದೆ. ಚಿಕಿತ್ಸೆಗೆ ಬರುವ ಪ್ರತಿ ಕಾರ್ಮಿಕನಿಗೆ ಕ್ರಮ ಸಂಖ್ಯೆ ನೀಡಿ ಪ್ರತ್ಯೇಕ ಒಪಿಡಿ ದಾಖಲೆ ನಿರ್ವಹಣೆ, ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಔಷಧೋಪಚಾರಗಳನ್ನು ಒದಗಿಸಲಿದೆ. ಸ್ಥಳದಲ್ಲಿಯೇ ಪರೀಕ್ಷೆಗಳನ್ನು ಕೈಗೊಂಡು ವರದಿ ಮತ್ತು ಚಿಕಿತ್ಸೆ ನೀಡಲು ಅನುವಾಗುವಂತೆ ಪ್ರಯೋಗಾಲಯದ ಉಪಕರಣಗಳನ್ನು ಇರಿಸಲಾಗಿದೆ.

ತುರ್ತು ಚಿಕಿತ್ಸೆ ಮತ್ತು ಅಪಘಾತ ಸಂದರ್ಭದಲ್ಲಿ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗೆ ಇಎಸ್‌ಐ ಅಥವಾ ಉನ್ನತೀಕರಿಸಿದ ಆಸ್ಪತ್ರೆಗಳಿಗೆ ರವಾನಿಸಲು ಈ ಸೇವೆ ಸಹಕಾರಿ ಆಗಿದೆ.

ಆಕರ್ಷಕವಾಗಿ ರೂಪಿಸಿ ವಿನ್ಯಾಸಗೊಳಿಸಲಾಗರವ ಈ ಆರೋಗ್ಯ ಕ್ಲಿನಿಕ್‌ಗಳಲ್ಲಿ ಸೇವೆಗಳ ಆನ್‌ಲೈನ್ ವರದಿಗಾಗಿ ರಿಯಲ್ ಟೈಮ್ ರಿಪೋರ್ಟಿಂಗ್, ಜಿಪಿಎಸ್ ಟ್ರೇಸಿಂಗ್ ಸಿಸ್ಟಮ್, ರೋಗಿಯ ವಿವರಗಳನ್ನು ಎಂಐಎAನಲ್ಲಿ ಅಪ್ ಲೋಡ್ ಮಾಡಲಾಗದ್ದು, ಇದಕ್ಕಾಗಿ ಬಿಎಸ್-6 ಮಾದರಿಯ ವಾಹನಗಳನ್ನು ಇಲಾಖೆ ಬಳಸಿಕೊಳ್ಳಲಾಗಿದೆ.
ತುರ್ತು ಸಂದರ್ಭಗಳಲ್ಲಿ ಶ್ರಮಿಕ್ ಸಂಜೀವಿನಿ ಸೇವೆಯನ್ನು ಸಹಾಯವಾಣಿ ಸಂಖ್ಯೆಗೆ 155214ಗೆ ಕರೆ ಮಾಡಿ ಪಡೆಯಬಹುದಾಗಿದ್ದು, ಯೋಜನೆಯ ತುರ್ತು ಜಾರಿಗೆ ಅನುವಾಗುವಂತೆ ಕಾರ್ಮಿಕ ವಿಮಾ ಸಂಸ್ಥೆಯ ವೈದ್ಯಕೀಯ ಮತ್ತು ಸಿಬ್ಬಂದಿ ಸೇವೆಯನ್ನು ಪಡೆದುಕೊಳ್ಳಲು ಕಾರ್ಮಿಕ ಇಲಾಖೆ ಸಿದ್ಧತೆ ನಡೆದಿದೆ.

ಶ್ರಮಿಕ್ ಸಂಜೀವಿನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಈ ಯೋಜನೆ ಯಶಸ್ವಿ ಜಾರಿಗೆ ಇಲಾಖೆ ಕಟಿಬದ್ಧವಾಗಿದ್ದು, ದಿನ ನಿತ್ಯದ ಬಿಡುವಿಲ್ಲದ ಕೆಲಸದ ನಡುವೆ ಶ್ರಮಿಕ ವರ್ಗ ಇದ್ದೆಡೆಯೇ ಉಚಿತವಾಗಿ ಉತ್ತಮ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಬೇಕು ಎಂಬುದೇ ಈ ಯೋಜನೆಯ ಹಿಂದಿನ ಮಹದುದ್ದೇಶ.

ಶಿವರಾಂ ಹೆಬ್ಬಾರ್. ಕಾರ್ಮಿಕ ಸಚಿವರು.

ಪ್ರತಿ ಶ್ರಮಿಕ್ ಸಂಜೀವಿನಿಯಲ್ಲಿ ನುರಿತ ವೈದ್ಯರು ಮತ್ತು ತಜ್ಞರು ಇರಲಿದ್ದಾರೆ. ಸ್ಥಳೀಯ ಕಾರ್ಮಿಕ ಇಲಾಖೆ ಅಧಿಕಾರಿಗಳು ಚುಟುವಟಿಕೆಗಳ ಮೇಲೆ ನಿಗಾವಹಿಸಿರುತ್ತಾರೆ ಮತ್ತು ಜಿಪಿಎಸ್ ಮೂಲಕ ಶ್ರಮಿಕ್ ಸಂಜೀವಿನಿಯ ಉಪಸ್ಥಿತಿ ಮತ್ತು ಚಿಕಿತ್ಸೆಗಾಗಿ ಬರುವ ಕಾರ್ಮಿಕರ ಮಾಹಿತಿ ರಿಯಲ್ ಟೈಮ್‌ನಲ್ಲಿ ಅಪ್‌ಲೋಡ್ ಆಗುತ್ತದೆ. ನಮ್ಮ ಸಂಸ್ಥೆಯು 2008ರಿಂದ ಇಂತಹ ಸೇವೆಗಳನ್ನು ಒದಗಿಸುತ್ತಿದೆ.

ವೆಂಕಟೇಶ್ ನಾಯಕ್, ಸ್ಕೋಡ್‌ವೆಸ್ ಸಂಸ್ಥೆ

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.