ಇಂದು ರಾಜ್ಯಕ್ಕೆ ಆಗಮನ; ಮೈಸೂರು ಭಾಗದತ್ತ ಚಾಣಕ್ಯ ಶಾ ಚಿತ್ತ

ಹಳೇ ಮೈಸೂರು ಭಾಗದಲ್ಲಿ ಬಲವರ್ಧನೆಗೆ ಪ್ರಯತ್ನ

Team Udayavani, Dec 29, 2022, 7:00 AM IST

ಇಂದು ರಾಜ್ಯಕ್ಕೆ ಆಗಮನ; ಮೈಸೂರು ಭಾಗದತ್ತ ಚಾಣಕ್ಯ ಶಾ ಚಿತ್ತ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಭರದ ಸಿದ್ಧತೆ ಕೈಗೊಂಡಿದೆ. ಮುಖ್ಯವಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ರಣತಂತ್ರ ಹೆಣೆಯತೊಡಗಿದೆ. ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಗುರಿ ಹೊಂದಲಾಗಿದೆ.

ಈ ಹಿನ್ನೆಲೆಯಲ್ಲೇ ಮೂರು ದಿನಗಳ ರಾಜ್ಯ ಭೇಟಿಗೆ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್‌ ಶಾ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ಮಂಡ್ಯ, ಬೆಂಗಳೂರು ಹಾಗೂ ಗ್ರಾಮಾಂತರ ಜಿಲ್ಲೆಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಶುಕ್ರವಾರ ಬೆಳಗ್ಗೆ ರಾಜ್ಯ ನಾಯಕರ ಜತೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಮಾಲೋಚಿಸುವರು.

ಮಧ್ಯಾಹ್ನ ಮಂಡ್ಯದಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು, ಸಂಜೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುವ ಸಹಕಾರ ಸಮಾವೇಶ ದಲ್ಲಿ ಭಾಗಿಯಾಗುವರು. ಶನಿವಾರ ಬೆಳಗ್ಗೆ ರಾಜ್ಯ ನಾಯಕರ ಜತೆ ಉಪಹಾರ ಸೇವಿಸಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ಸಮೀಪದ ಆವತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅದೇ ಸಂಜೆ ದಿಲ್ಲಿಗೆ ತೆರಳುವರು.

ಈ ಭೇಟಿ ಮೈಸೂರು ಭಾಗದಲ್ಲಿ ಪಕ್ಷ ಸಂಘ ಟನೆಗೆ ಇಂಬು ನೀಡಲಿದೆ ಎಂಬ ನಿರೀಕ್ಷೆ ರಾಜ್ಯ ಬಿಜೆಪಿಯಲ್ಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ನಾಯಕರಿಗೆ ಷಾ ಅವರು ಯಾವ ರೀತಿಯ ಸಂದೇಶ ರವಾನೆಯಾಗಲಿದೆ ಎಂಬುದೂ ಕುತೂಹಲ ಮೂಡಿಸಿದೆ.

ಶಾ ಭೇಟಿ ಕುರಿತು ಬೆಳಗಾವಿಯಲ್ಲಿ ಮಾತ ನಾಡಿರುವ ಸಚಿವ ಡಾ| ಅಶ್ವತ್ಥ ನಾರಾಯಣ, ಅವರ ಭೇಟಿಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗ ಹಾಗೂ ಸಂಖ್ಯೆ ಹೆಚ್ಚಿಸುವ ಪ್ರಯತ್ನಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

ಮಂಡ್ಯ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಿ ಆ ಭಾಗದ ಜನತೆಯ ಜತೆ ಬಿಜೆಪಿ ಇದೆ ಎಂಬ ಸಂದೇಶ ರವಾನಿಸಲಿದ್ದಾರೆ. ಹಳೆ ಮೈಸೂರು ಭಾಗದವರು ಜೆಡಿಎಸ್‌ ಕಾಂಗ್ರೆಸ್‌ ಅನ್ನು ಬಹಳ ನಂಬಿದ್ದರು. ಅದರಿಂದ ಪ್ರಯೋಜನ ಆಗಿಲ್ಲ. ಪಾಂಡವಪುರ ಮೈಶುಗರ್‌  ಸೇರಿದಂತೆ ಎಲ್ಲ ಅಭಿವೃದ್ಧಿ ಕೂಡ ಬಿಜೆಪಿಯಿಂದಲೇ ಆಗಿದೆ. ಎಲ್ಲ ವರ್ಗದ ಜನರನ್ನು ಪ್ರತಿನಿಧಿಸಿ ಸರ್ವಾಂಗೀಣ ಅಭಿವೃದ್ಧಿಗೆ ನಾವು ಕೆಲಸ ಮಾಡುತ್ತೇವೆ ಎಂದರು.

ಎಲ್ಲೆಡೆಯೂ ಆಡಬಲ್ಲರು
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿ, “ಒಳ್ಳೆ ಆಟಗಾರ ಯಾವ ಮೈದಾನ (ಪಿಚ್‌)ವಾದರೂ ಚೆನ್ನಾಗಿ ಆಡುತ್ತಾನೆ. ಅದು ತವರಿನದ್ದಾದರೂ ಸರಿ, ಹೊರಗಿನದ್ದಾದರೂ ಸರಿ. ಅಮಿತ್‌ ಶಾ ದೇಶದ ಯಾವ ಮೈದಾನದಲ್ಲಿ ಯಾದರೂ ಕ್ರಿಕೆಟ್‌ ಆಡುತ್ತಾರೆ’ ಎಂದು ಅಭಿ ಪ್ರಾಯ ಪಟ್ಟರು.
ಇಡೀ ರಾಜ್ಯದ ಜತೆಗೆ ಹಳೇ ಮೈಸೂರು ಭಾಗಕ್ಕೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದೇವೆ. ಇನ್ನಷ್ಟು ಸೀಟು ಗೆಲ್ಲಲು ಪ್ರಯ ತ್ನಿಸುತ್ತೇವೆ. ಆ ಭಾಗದಲ್ಲಿ ಮೆಜಾರಿಟಿ ಬಂದ್ರೆ ಅಧಿಕಾರಕ್ಕೆ ಬರೋದು ಸುಲಭ ಎಂದರು.

ಈಗ ಪರಿಶ್ರಮ ಹಾಕಿದರೆ ಮುಂದೊಂದು ದಿನ ಲಾಭ ಸಿಗುತ್ತದೆ. ಇನ್ನಷ್ಟು ಸೀಟು ಗೆಲ್ಲುವ ಪ್ರಯತ್ನ ಮಾಡುತ್ತೇವೆ. ಪರಿಶ್ರಮ ಹಾಕಿದರೆ ಮುಂದೂಂದು ದಿನ ಲಾಭ ಸಿಗುತ್ತದೆ. ಹಿಂದಿನ ಚುನಾವಣೆಯಲ್ಲಿ ನಮಗೆ ಅನುಭವವಾಗಿದೆ. ಚಿಕ್ಕಮಗಳೂರು ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಈಗ ಪಂಚಾಯಿತಿಯಿಂದ ಸಂಸತ್‌ನವರೆಗೆ ಬಿಜೆಪಿಯಿದೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ದಲ್ಲೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಳೇ ಮೈಸೂರು ಭಾಗದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ದೇವೆಗೌಡರು ಪ್ರಧಾನಿಯಾಗಿಂದಲೂ ಹಾಸನಕ್ಕೆ ವಿಮಾನ ನಿಲ್ದಾಣದ ಕನಸಿತ್ತು. ಆದರೆ, ಅದು ಸಾಧ್ಯವಾಗಲು ಡಬಲ್‌ ಇಂಜಿನ ಸರಕಾರ ಬರಬೇಕಾಯಿತು. ಹಾಸನ, ಮಂಡ್ಯ ಎಲ್ಲ ಕಡೆಯೂ ನಮ್ಮ ರಿಪೋರ್ಟ್‌ ಕಾರ್ಡ್‌ ಇದೆ ಅದನ್ನು ಮುಂದಿಡುತ್ತೇವೆ.

ನಾವು ಹಿಂದುತ್ವ , ಅಭಿವೃದ್ದಿ ಕಾರ್ಯಸೂಚಿಯಿಂದ ಚುನಾವಣೆ ಎದುರಿಸುತ್ತೇವೆ. ಹಿಂದುತ್ವ ಧರ್ಮ (ರಿಲಿಜನ್‌) ಅಲ್ಲ , ಅದನ್ನು ಅಳವಡಿಸಿಕೊಂಡ ಎಲ್ಲರೂ ಹಿಂದುಗಳೇ.
– ಸಿ.ಟಿ.  ರವಿ, ಬಿಜೆಪಿ ನಾಯಕ

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.