ಪಶ್ಚಿಮ ಬಂಗಾಲ: ಅಬ್ಬರಿಸಿದ ಅಂಫಾನ್
ಒಡಿಶಾ, ಪಶ್ಚಿಮ ಬಂಗಾಲಕ್ಕೆ ಅಪ್ಪಳಿಸಿದ ಭೀಕರ ಚಂಡಮಾರುತ 12 ಜನ ಸಾವು
Team Udayavani, May 21, 2020, 6:00 AM IST
ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲೇ ಅತ್ಯಂತ ಭೀಕರ ಎಂದೇ ಕುಖ್ಯಾತಿ ಗಳಿಸಿಕೊಂಡಿರುವ “ಸೂಪರ್ ಸೈಕ್ಲೋನ್’ ಅಂಫಾನ್ ಚಂಡಮಾರುತ, ಪಶ್ಚಿಮ ಬಂಗಾಲ, ಒಡಿಶಾ ಮತ್ತು ನೆರೆಯ ಬಾಂಗ್ಲಾದೇಶದಲ್ಲಿ ಭಾರೀ ಹಾನಿಯನ್ನೇ ಸೃಷ್ಟಿಸಿದೆ. ಭಾರತದಲ್ಲೇ 12, ಬಾಂಗ್ಲಾದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಬುಧವಾರ ಮಧ್ಯಾಹ್ನದ ವೇಳೆಗೆ ಪಶ್ಚಿಮ ಬಂಗಾಲದ ದಿಘಾದಲ್ಲಿ ಅಪ್ಪಳಿಸಿದ ಚಂಡಮಾರುತ ಅನಂತರದಲ್ಲಿ, ಇನ್ನಷ್ಟು ವೇಗ ಪಡೆದುಕೊಂಡಿತು. ಸಂಜೆ ವೇಳೆಗೆ 190 ಕಿ.ಮೀ. ವೇಗ ಪಡೆದುಕೊಂಡ ಪರಿಣಾಮ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಪಶ್ಚಿಮ ಬಂಗಾಲ ಮತ್ತು ಒಡಿಶಾದಲ್ಲಿ ಅಪಾರ ಹಾನಿಯಾಗಿದೆ. ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದರೆ, ಇನ್ನು ಕೆಲವೆಡೆ ಮರಗಳು ಬುಡಮೇಲಾಗಿವೆ. ಸಾವಿರಾರು ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. ಅತ್ತ ಬಾಂಗ್ಲಾದೇಶದ ಕರಾವಳಿಯಲ್ಲೂ ಚಂಡಮಾರುತದ ಅಬ್ಬರದಿಂದಾಗಿ ಭಾರೀ ಹಾನಿಯುಂಟಾಗಿದೆ. ಚಂಡಮಾರುತದ ಪರಿಣಾಮ ಅಸ್ಸಾಂ ಮತ್ತು ಮೇಘಾಲಯಗಳಿಗೂ ವ್ಯಾಪಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಶ್ಚಿಮ ಬಂಗಾಲದ ವಿವಿಧೆಡೆ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಲ್ಲಿನ ಸರಕಾರ ಹೇಳಿದೆ. ಹಾಗೆಯೇ ಬಾಂಗ್ಲಾದೇಶದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ವರದಿಯಾಗಿದೆ.
ದಿಢೀರನೇ ವೇಗ ಹೆಚ್ಚಳ
ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಲದ ದಿಘಾದಲ್ಲಿ ಚಂಡಮಾರುತ ಅಪ್ಪಳಿಸಿದಾಗ ವೇಗ ಗಂಟೆಗೆ 160-170 ಕಿ.ಮೀ.ನಷ್ಟಿತ್ತು. ಆದರೆ ಸಂಜೆ 7 ಗಂಟೆ ವೇಳೆಗೆ ಕೋಲ್ಕತಾಕ್ಕೆ ಪ್ರವೇಶಿಸುವ ಹೊತ್ತಿಗೆ ವೇಗ 190 ಕಿ.ಮೀ.ಗೆ ಹೆಚ್ಚಳವಾಗಿದೆ. ಇದರಿಂದಾಗಿ ಕೋಲ್ಕತಾ ಸಹಿತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆಯ ಮುಖ್ಯಸ್ಥ ಎಸ್. ಎನ್. ಪ್ರಧಾನ್, ಎನ್‌ಡಿಆರ್‌ಎಫ್ 20 ತಂಡಗಳು ಒಡಿಶಾದಲ್ಲಿ ರಸ್ತೆಯಲ್ಲಿ ಬಿದ್ದಿರುವ ಮರಗಳನ್ನು ತೆರವು ಮಾಡುವ ಕೆಲಸದಲ್ಲಿ ನಿರತ ವಾಗಿವೆ ಎಂದು ಹೇಳಿದರು. ಹಾಗೆಯೇ ಪಶ್ಚಿಮ ಬಂಗಾಲದಲ್ಲಿ 19 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ ಎಂದು ತಿಳಿಸಿದರು.
ಜನಜೀವನ ತತ್ತರ
ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಲ ಮತ್ತು ಒಡಿಶಾ ರಾಜ್ಯಗಳ ಜನಜೀವನ ತತ್ತರಿಸಿದೆ. ಪಶ್ಚಿಮ ಬಂಗಾಲದ ಕೋಲ್ಕತಾ, ಉತ್ತರ ಮತ್ತು ದಕ್ಷಿಣ 24 ಪರಗಣ, ಈಸ್ಟ್ ಮಿಡ್ನಾಪುರ ಜಿಲ್ಲೆಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಇಲ್ಲಿ ಎಲ್ಲಿ ನೋಡಿದರೂ ಛಾವಣಿ ಹಾರಿಹೋಗಿರುವ ಮನೆಗಳು, ಬುಡಮೇಲಾಗಿರುವ ಮರಗಳು ಮತ್ತು ಮುರಿದುಬಿದ್ದಿರುವ ವಿದ್ಯುತ್ ಕಂಬಗಳೇ ಕಾಣಸಿಗುತ್ತಿವೆ ಎಂದು ಸ್ಥಳೀಯ ಸರಕಾರದ ಮೂಲಗಳು ತಿಳಿಸಿವೆ.
ಅತ್ತ ಒಡಿಶಾದ ಪುರಿ, ಖುರ್ದಾ, ಜಗತ್‌ಸಿಂಗ್‌ಪುರ, ಕಟಕ್, ಕೇಂದ್ರಪಾರ, ಜೈಪುರ, ಗಂಜಾಮ್, ಭದ್ರಕ್ ಮತ್ತು ಬಾಲಸೋರ್‌ನಲ್ಲಿ ಅಪಾರ ಪ್ರಮಾಣದ ಗಾಳಿ, ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ರಾಜ್ಯದಲ್ಲಿ ಬೆಳೆದು ನಿಂತಿರುವ ಬೆಳೆ, ಮೂಲಸೌಕರ್ಯಕ್ಕೆ ಭಾರೀ ನಷ್ಟವಾಗುವ ಸಾಧ್ಯತೆ ಇದೆ ಎಂದು ಒಡಿಶಾ ಸರಕಾರದ ಮೂಲಗಳು ಹೇಳಿವೆ. ಇದಷ್ಟೇ ಅಲ್ಲ, ಚಂಡಮಾರುತ ಬೀಸುತ್ತಿರುವುದರಿಂದ ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳು, ಈಸ್ಟ್ ಮಿಡ್ನಾಪುರ ಜಿಲ್ಲೆಗಳ
ಕರಾವಳಿಯಲ್ಲಿ 5 ಮೀಟರ್‌ಗಳಷ್ಟು ಎತ್ತರಕ್ಕೆ ಸಮುದ್ರದ ಅಲೆಗಳು ಬರಬಹುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಲಕ್ಷಾಂತರ ಮಂದಿ ಸ್ಥಳಾಂತರ
ಪಶ್ಚಿಮ ಬಂಗಾಲದಲ್ಲಿ 5 ಲಕ್ಷ, ಒಡಿಶಾದಲ್ಲಿ 1.6 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸ ಲಾಗಿದೆ. ಪಶ್ವಿಮ ಬಂಗಾಲದಲ್ಲಿ ಮುನ್ನೆಚ್ಚರಿಕೆ ಕ್ರಮ ವಾಗಿ 24 ಪರಗಣ ಜಿಲ್ಲೆಗಳ ಹಲವು ಹಳ್ಳಿಗಳ ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾ ದಲ್ಲಿ 20 ಹಾಗೂ ಪ.ಬಂಗಾಲದಲ್ಲಿ 19 ರಕ್ಷಣಾ ಪಡೆಗಳು ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸುತ್ತಿವೆ. ವಾಯು, ನೌಕಾ ಪಡೆಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಎಲ್ಲೆಲ್ಲೂ ಕತ್ತಲು
ಇಲ್ಲಿನ ಪರಿಸ್ಥಿತಿ ಯುದ್ಧ ಮುಗಿದ ಬಳಿಕದ ರಣಾಂಗಣದಂತಾಗಿದೆ. ಎಲ್ಲಿ ನೋಡಿದರೂ ಮನೆ, ಮರಗಳು ಉರುಳಿ ಬಿದ್ದಿವೆ. ಸಾವಿರಾರು ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಎಲ್ಲೆಲ್ಲೂ ಕತ್ತಲು ಆವರಿಸಿರುವುದರಿಂದ ರಕ್ಷಣಾ ಕಾರ್ಯಕ್ಕೂ ಅಡ್ಡಿಯಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಮುಂಗಾರು ಪ್ರವೇಶ ವಿಳಂಬ
ಚಂಡಮಾರುತದ ಪ್ರಭಾವದಿಂದಾಗಿ ಪಶ್ಚಿಮ ಬಂಗಾಲ ಮತ್ತು ಒಡಿಶಾದಲ್ಲಿ ಗುರುವಾರವೂ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲ, ಅಂಫಾನ್‌ನಿಂದಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸುವುದು ವಿಳಂಬವಾಗಲಿದೆ. ಹವಾಮಾನ ಇಲಾಖೆ ಪ್ರಕಾರ ಜೂ.5ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.
ರೈಲು, ವಿಮಾನ ಸ್ಥಗಿತ
ಅಂಫಾನ್ ಚಂಡಮಾರುತದ ಪ್ರಭಾವದಿಂದ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆ ವಿಮಾನವನ್ನು ಸ್ಥಗಿತಗೊಳಿಸಲಾಗಿದೆ. ಹೌರಾ-ಹೊಸದಿಲ್ಲಿ ಎಸಿ ವಿಶೇಷ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.