ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧದ ಪ್ರಕರಣ ರದ್ದು
Team Udayavani, Dec 28, 2020, 10:15 PM IST
ಬೆಂಗಳೂರು: ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದ ಆರೋಪದಲ್ಲಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ.
ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಅವರು, ಆರೋಪ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದಾರೆ.
ಏನಿದು ಪ್ರಕರಣ?
2016ರ ಫೆ. 28ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕನ್ನಡದ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ. ಎಲ್ಲಿಯವರೆಗೂ ಇಸ್ಲಾಂ ಇರುತ್ತದೆಯೋ ಅಲ್ಲಿಯವರೆಗೂ ಭಯೋತ್ಪಾದನೆ ನಿಲ್ಲುವುದಿಲ್ಲ. ಇಸ್ಲಾಂ ಜಗತ್ತಿನ ಶಾಂತಿಗೆ ಇಟ್ಟಿರುವ ಬಾಂಬ್’ ಎಂದು ಹೇಳಿರುವ ಆರೋಪ ಎದುರಾಗಿತ್ತು.
ಇದನ್ನೂ ಓದಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ 1,100 ಕೋಟಿ ವೆಚ್ಚ
ಈ ಸಂಬಂಧ ಅನಂತಕುಮಾರ್ ಹೆಗಡೆ ವಿರುದ್ಧ ಮುರಾದ್ ಹುಸೇನ್ ಎಂಬವರು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.