“ಅನ್ನಭಾಗ್ಯ”: ರಾಜ್ಯಾದ್ಯಂತ ಕಾಂಗ್ರೆಸ್‌-BJP ಪ್ರತಿಭಟನೆ


Team Udayavani, Jun 21, 2023, 7:18 AM IST

CONGRESS PROTEST

“ಅನ್ನಭಾಗ್ಯ”ಕ್ಕೆ ಅಗತ್ಯವಿರುವ ಅಕ್ಕಿ ಪೂರೈಕೆ ವಿಚಾರದಲ್ಲಿ ಕೇಂದ್ರದ ನಿರಾಕರಣೆ ವಿರುದ್ಧ ಮಂಗಳವಾರ ರಾಜ್ಯಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ, ಕಾಂಗ್ರೆಸ್‌ ಚುನಾವಣಾ ಪೂರ್ವದಲ್ಲಿ ಬೇಷರತ್‌ ಆಗಿ “ಗ್ಯಾರಂಟಿ”ಗಳನ್ನು ನೀಡಿ ಸರ್ಕಾರ ರಚನೆಯಾದ ಬಳಿಕ ಷರತ್ತು ವಿಧಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ
ಬೆಂಗಳೂರು: “ಅನ್ನಭಾಗ್ಯ”ಕ್ಕೆ ಅಗತ್ಯವಿರುವ ಅಕ್ಕಿ ಪೂರೈಕೆ ವಿಚಾರದಲ್ಲಿ ಕೇಂದ್ರದ ನಿರಾಕರಣೆ ವಿರುದ್ಧ ರಾಜ್ಯಾದ್ಯಂತ ಮಂಗಳವಾರ ಬೀದಿಗಿಳಿದ ಕಾಂಗ್ರೆಸ್‌ ಕಾರ್ಯಕರ್ತರು, ಮಳೆಯನ್ನೂ ಲೆಕ್ಕಿಸದೆ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸ್ಪಂದನೆ ಸಿಗದಿದ್ದರೆ, ಹೋರಾಟವನ್ನು ತಾಲೂಕು ಮಟ್ಟದಲ್ಲಿ ಮತ್ತಷ್ಟು ತೀವ್ರವಾಗಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನ ಒಳಗೊಂಡಂತೆ ವಿವಿಧ ಜಿಲ್ಲೆಗಳ ಹೃದಯಭಾಗಗಳಲ್ಲಿ ಜಮಾವಣೆಗೊಂಡ ಕಾಂಗ್ರೆಸ್‌ ಕಾರ್ಯಕರ್ತರು, ಅಕ್ಕಿ ಪೂರೈಕೆಗೆ ನಿರಾಕರಿಸುತ್ತಿರುವ ಕೇಂದ್ರದ ಧೋರಣೆಯನ್ನು ಖಂಡಿಸಿದರು. ಇದೊಂದು ಬಡವರ ವಿರೋಧಿ ಸರ್ಕಾರ ಎಂದು ಟೀಕಿಸಿದರು. ಅಷ್ಟೇ ಅಲ್ಲ, ಕೆಲವೆಡೆ ಪ್ರತಿಭಟನಾ ಸ್ಥಳಗಳಲ್ಲೇ ಅನ್ನ ಮಾಡಿ ಊಟ ಬಡಿಸುವ ಮೂಲಕ ಗಮನಸೆಳೆದರು.

“ಹಸಿವು ಮುಕ್ತ ಕರ್ನಾಟಕ ಮಾಡುವ ಮಹತ್ವದ ತೀರ್ಮಾನ ರಾಜ್ಯ ಸರ್ಕಾರ ಮಾಡಿದೆ. ಇದರ ಭಾಗವಾಗಿಯೇ ಪ್ರತಿ ವ್ಯಕ್ತಿಗೆ ಮಾಸಿಕ 5 ಕೆಜಿ ನೀಡುವ ಅಕ್ಕಿ ಪ್ರಮಾಣವನ್ನು ದುಪ್ಪಟ್ಟು ಅಂದರೆ 10 ಕೆಜಿಗೆ ಹೆಚ್ಚಿಸಲಾಗುತ್ತಿದೆ. ಆದರೆ, ಈ ಉದ್ದೇಶ ಈಡೇರಿಕೆಗೆ ಕೇಂದ್ರ ಅಡ್ಡಗಾಲು ಹಾಕುತ್ತಿದೆ. ಕಾಂಗ್ರೆಸ್‌ ಅನ್ನು ನುಡಿದಂತೆ ನಡೆಯಲು ಬಿಡಬಾರದು ಎಂಬ ಹುನ್ನಾರ ಇದರ ಹಿಂದೆ ಅಡಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್‌, ರಾಮಲಿಂಗಾರೆಡ್ಡಿ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್ತ, ಮಾಜಿ ಸಚಿವೆ ರಾಣಿ ಸತೀಶ್‌ ಮತ್ತಿತರ ನಾಯಕರು, ನೂರಾರು ಅಭಿಮಾನಿಗಳೊಂದಿಗೆ ಭಾಗವಹಿಸಿದ್ದರು.

ಜನರ ಎತ್ತಿಕಟ್ಟುವ ಹುನ್ನಾರ; ಡಿಕೆಶಿ ಆರೋಪ
ಪ್ರತಿಭಟನೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, “ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರ ಕೇಂದ್ರದ ಈ ನಿರ್ಧಾರದ ಹಿಂದೆ ಅಡಗಿದೆ. ಆದರೆ, ಯಾವುದೇ ಕಾರಣಕ್ಕೂ ಇದು ಯಶಸ್ವಿಯಾಗಲು ಅವಕಾಶ ನೀಡುವುದಿಲ್ಲ. ಶತಾಯಗತಾಯ ಅನ್ನಭಾಗ್ಯ ಯೋಜನೆ ಜಾರಿಗೊಳ್ಳಲಿದೆ’ ಎಂದು ಹೇಳಿದರು.

ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜತೆ ಸಂಪರ್ಕ ಮಾಡುತ್ತಿದ್ಧಾರೆ. 5 ಕೆಜಿಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ಧಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡಲಾಗುವುದು ಎಂದರು.

ಸರ್ಕಾರ ಒಂದು ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ ಸುಮ್ಮನಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ಧಾರೆ. ಹಾಗಿದ್ದರೆ, ನಿಮ್ಮ ಪಕ್ಷ (ಕೇಂದ್ರ ಸರ್ಕಾರ) ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ? ರೈತರ ಆದಾಯ ಯಾಕೆ ದ್ವಿಗುಣ ಮಾಡಿಲ್ಲ? ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ? ಈ ಬಗ್ಗೆ ನೀವು ಮೊದಲು ಉತ್ತರ ನೀಡಿ ಎಂದು ತರಾಟೆಗೆ ತೆಗೆದುಕೊಂಡರು.

ಗ್ಯಾರಂಟಿಗಳಿಗೆ ಷರತ್ತು ಖಂಡಿಸಿ ಬಿಜೆಪಿ ವಾಗ್ಧಾಳಿ
ಬೆಂಗಳೂರು: ಕಾಂಗ್ರೆಸ್‌ ಚುನಾವಣಾ ಪೂರ್ವದಲ್ಲಿ ಬೇಷರತ್‌ ಆಗಿ ಗ್ಯಾರಂಟಿಗಳನ್ನು ನೀಡಿ ಸರ್ಕಾರ ರಚನೆಯಾದ ಬಳಿಕ ಷರತ್ತು ವಿಧಿಸುತ್ತಿರುವುದನ್ನು ಖಂಡಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ ಪ್ರಸಂಗ ನಡೆಯಿತು. ಪೊಲೀಸ್‌ ವಶದಿಂದ ಬಿಡುಗಡೆಯಾದ ಬಳಿಕ ಕಾಂಗ್ರೆಸ್‌ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಬಿಜೆಪಿ ನಾಯಕರು ಮಾಧ್ಯಮಗಳ ಮುಂದೆ ಹರಿಹಾಯ್ದರು.

ನಗರದ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವುದಾಗಿ ಸೋಮವಾರವೇ ಬಿಜೆಪಿ ನಾಯಕರು ಪ್ರಕಟಿಸಿದ್ದರು. ಅದರಂತೆ ಮಂಗಳವಾರ ಮಳೆಯ ನಡುವೆಯೇ ಪ್ರತಿಭಟನೆಗೆ ಬಿಜೆಪಿಯ ಹಿರಿಯ ನಾಯಕರಾದ ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌, ರವಿಕುಮಾರ್‌, ಶಾಸಕರಾದ ಮುನಿರಾಜು, ಎಂ.ಕೃಷ್ಣಪ್ಪ, ಛಲವಾದಿ ನಾರಾಯಣಸ್ವಾಮಿ ಮುಂತಾದವರು ನಿಗದಿತ ಸ್ಥಳಕ್ಕೆ ಆಗಮಿಸಿದರು. ಆದರೆ ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂದು ಹೈಗ್ರೌಂಡ್ಸ್‌ ಪೊಲೀಸರು ಇವರನ್ನು ವಶಕ್ಕೆ ಪಡೆದರು.
ಪೊಲೀಸರ ವಿರೋಧದ ನಡುವೆಯೂ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಆರ್‌.ಅಶೋಕ್‌, ಕಾಂಗ್ರೆಸ್‌ ನಾಯಕರೇ ನಿಮಗೆ ಮಾನ ಮಾರ್ಯದೆ ಇದೆಯಾ? ಡೊಂಗಿ ರಾಜಕಾರಣ ಮಾಡುತ್ತೀರಾ? ಅಕ್ಕಿ ಕೊಡುವುದನ್ನು ಮುಂದುವರಿಸಿದರೆ ದುಡ್ಡು ಉಳಿಸಬಹುದು ಎಂಬುದು ಸರ್ಕಾರದ ಉದ್ದೇಶ. ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದು ಗೂಂಡಾ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಧ್ಯೆ ಬೊಮ್ಮಾಯಿ ಅವರನ್ನು ಪೊಲೀಸ್‌ ವಾಹನದಲ್ಲಿ ಕೊಂಡೊಯ್ಯಲು ಮುಂದಾದಾಗ ವಿರೋಧ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ನವರಿಗೆ ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದೀರಿ, ನಮಗೆ ಅವಕಾಶ ಕೊಡುತ್ತಿಲ್ಲ ಎಂದು ಟೀಕಿಸಿದರು. ಬಳಿಕ ಎಲ್ಲರನ್ನು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

ಇದೊಂದು ಸುಳ್ಳ- ಮಳ್ಳ ಸರಕಾರ
ಪೊಲೀಸರ ವಶದಿಂದ ಬಿಡುಗಡೆಗೊಂಡ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಅವರಿಗೆ ಧಮ್ಮಿದ್ರೆ, ತಾಕತ್ತಿದ್ರೆ ನೀಡಿದ ಭರವಸೆಯಂತೆ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೊಡಬೇಕು. ಒಂದು ಕುಟುಂಬದಲ್ಲಿ 5 ಜನರಿದ್ದರೆ 50 ಕೆಜಿ ಕೊಡಬೇಕು. ಆದರೆ ಕಾಂಗ್ರೆಸ್‌ ಅಕ್ಕಿ ಕೊಡದೆ ಪ್ರತಿಭಟನೆ ಮಾಡುತ್ತಿದೆ. ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದು ಪ್ರತಿಭಟನೆ ಮಾಡಲೆಂದೇ ಎಂದು ಪ್ರಶ್ನಿಸಿದರು.

ಇದೊಂದು ಸುಳ್ಳ- ಮಳ್ಳ ಸರಕಾರ. ರಾಜ್ಯ ಸರಕಾರ ಕರೆಂಟ್‌ ಶಾಕ್‌ ಕೊಡುತ್ತಿದೆ. ಸರ್ಕಾರ ನೀಡುತ್ತಿರುವ ವಿದ್ಯುತ್‌ ಬಿಲ್ಲನ್ನು ಬಡವರು, ಉದ್ಯಮಿಗಳು ಸೇರಿ ಯಾರಿಗೂ ಕಟ್ಟಲು ಸಾಧ್ಯವಿಲ್ಲ. ಇದರಿಂದ ಮುಂದೆ ಕೈಗಾರಿಕೆಗಳು ಬಂದ್‌ ಆಗಲಿವೆ. ಸರಕಾರ ಮನಸ್ಸು ಮಾಡಿದರೆ ವಿದ್ಯುತ್‌ ದರ ಏರಿಸದೆ ಇರಬಹುದಿತ್ತು. ಶಾಲಾ ಮಕ್ಕಳಿಗೆ ಬಸ್‌ ಸೌಕರ್ಯವಿಲ್ಲದೆ ಪ್ರತಿಭಟನೆ ನಡೆಸುತ್ತಿದ್ದು ಮುಂದೆ ಬಸ್‌ ಸೇವೆಯೂ ನಿಲ್ಲಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಲಾಠಿಯಲ್ಲಿ ಶಕ್ತಿಯೋ, ರಟ್ಟೆಯಲ್ಲಿ ಶಕ್ತಿಯೋ?: ತಮ್ಮನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾದ ಪೊಲೀಸರ ಕ್ರಮವನ್ನು ಆಕ್ಷೇಪಿಸಿದ ಬೊಮ್ಮಾಯಿ, ನಿಮ್ಮ ಪೊಲೀಸ್‌ ರಾಜ್ಯಕ್ಕೆ ಹೆದರುವುದಿಲ್ಲ. ನಿಮ್ಮ ಲಾಠಿಯಲ್ಲಿ ಶಕ್ತಿ ಇದೆಯೋ, ನಮ್ಮ ರಟ್ಟೆಯಲ್ಲಿ ಶಕ್ತಿ ಇದೆಯೋ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನಮ್ಮ ಹೋರಾಟ ವಿಧಾನಸಭೆ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಹೇಳಿದರು.

ಮತಾಂತರ ನಿಷೇಧ ಕಾಯ್ದೆ ಹಿಂತೆಗೆತವನ್ನು ಖಂಡಿಸಿ ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ. ವಿಧಾನ ಸಭೆಯ ಒಳಗೂ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ. ರಾಜ್ಯದ ಜನರನ್ನು ಒಳಗೊಂಡು ಜೈಲ್‌ ಭರೋ ಅಥವಾ ಇನ್ನಿತರ ಉಗ್ರ ಹೋರಾಟ ನಡೆಸುತ್ತೇವೆ ಎಂದು ಪ್ರಕಟಿಸಿದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.