![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 3, 2023, 8:11 AM IST
ಶಿವಮೊಗ್ಗ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಜೈಲು ಅ ಧಿಕಾರಿಗಳೇ ದೂರು ದಾಖಲಿಸಿದ್ದಾರೆ.
ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್ ಸೂಪರಿಂಟೆಂಡೆಂಟ್ ದೂರು ನೀಡಿದ್ದಾರೆ.
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಆದಿತ್ಯ ರಾವ್ ಮೇ 31ರಂದು ಮಧ್ಯಾಹ್ನ ಜೈಲಿನ ವೀಡಿಯೋ ಕಾನ್ಫರೆನ್ಸ್ ಕೊಠಡಿ ಬಳಿ ಬಂದಿದ್ದ. ಇವತ್ತು ತನ್ನ ವಿಚಾರಣೆ ಇದೆಯೇ ಎಂದು ಪ್ರಶ್ನಿಸಿದ್ದ. ಅಲ್ಲಿದ್ದ ಸಿಬಂದಿ ದಾಖಲೆಗಳನ್ನು ಪರಿಶೀಲಿಸಿ ಇಲ್ಲ ಎಂದು ತಿಳಿಸಿದ್ದರು. ಸ್ವಲ್ಪ ದೂರ ಹೋಗಿದ್ದ ಆದಿತ್ಯ ಹಿಂದಿರುಗಿ ಬಂದು ವಿ.ಸಿ. ಕೊಠಡಿಯಲ್ಲಿದ್ದ ಟಿವಿಗೆ ಕಲ್ಲಿನಿಂದ ಹೊಡೆದು ಹಾನಿ ಮಾಡಿದ್ದಾನೆ. ಅಷ್ಟರಲ್ಲಿ ಕೊಠಡಿಯಲ್ಲಿದ್ದ ಸಿಬಂದಿ ಆದಿತ್ಯನನ್ನು ಹಿಡಿದಿದ್ದಾರೆ. ಆದರೆ ಅವರಿಂದ ತಪ್ಪಿಸಿಕೊಂಡು ಮತ್ತೂಂದು ಟಿವಿಯನ್ನೂ ಒಡೆದು ಹಾಕಿದ್ದಾನೆ. ಕೂಡಲೆ ಸಿಬಂದಿ ಆದಿತ್ಯನನ್ನು ಜೈಲರ್ ವಶಕ್ಕೆ ಒಪ್ಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ. ಈ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 2022, ಜ.20ರಂದು ಐಇಡಿ ಬಾಂಬ್ ಇರುವ ಬ್ಯಾಗ್ ಪತ್ತೆಯಾಗಿತ್ತು. ಎರಡು ದಿನದ ಬಳಿಕ ಬೆಂಗಳೂರು ಪೊಲೀಸರು ಆದಿತ್ಯ ರಾವ್‌ನನ್ನು ಬಂಧಿಸಿದ್ದರು. ಮಂಗಳೂರಿನಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದಿತ್ಯ ರಾವ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಶಿವಮೊಗ್ಗ ಜೈಲಿನಲ್ಲಿ ಶಿಕ್ಷಾ ಬಂಧಿಯಾಗಿದ್ದಾನೆ. ಆದಿತ್ಯ ರಾವ್ ಈ ಹಿಂದೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಿಗೆ ಹುಸಿ ಬಾಂಬ್ ಕರೆ ಮಾಡಿದ್ದ. ಇದರಿಂದ ಸಾರ್ವಜನಿಕರು, ಪ್ರಯಾಣಿಕರು ತೀವ್ರ ಸಮಸ್ಯೆ ಅನುಭವಿಸಿದ್ದರು. ಈ ಪ್ರಕರಣಗಳಲ್ಲೂ ಆದಿತ್ಯ ರಾವ್ ಜೈಲು ಶಿಕ್ಷೆ ಅನುಭವಿಸಿದ್ದ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.