ತುಂಗಭದ್ರೆಗೆ ಇನ್ನೊಂದು ಅಣೆಕಟ್ಟು ಅನಿವಾರ್ಯ: ಮುಖ್ಯಮಂತ್ರಿ ಬೊಮ್ಮಾಯಿ
Team Udayavani, Dec 22, 2022, 6:31 PM IST
ಸುವರ್ಣ ವಿಧಾನಸೌಧ: ತುಂಗಭದ್ರಾ ಜಲಶಾಯಕ್ಕೆ ಸಮಾನಾಂತರ ಅಣೆಕಟ್ಟು ಕಟ್ಟುವ ಅನಿವಾರ್ಯತೆ ಇದ್ದು, ಕೂಡಲೇ ಸರ್ವ ಪಕ್ಷಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ವೈ.ಎಂ.ಸತೀಶ್ ಪ್ರಶ್ನೋತ್ತರ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಅಡಿಯಷ್ಟು ಹೂಳು ತುಂಬಿಕೊಂಡಿದೆ. ಇದನ್ನು ತಡೆಯಲು ಕೈಗೊಂಡ ಕ್ರಮಗಳು ಫಲಿತಾಂಶ ಕೊಡಲಿಲ್ಲ. ಹೀಗಾಗಿ ಕೊಪ್ಪಳ ಜಿಲ್ಲೆ ನವಿಲೆ ಬಳಿ ಸಮಾನಾಂತರ ಜಲಾಶಯ ನಿರ್ಮಿಸಲು ಯೋಜಿಸಲಾಗಿದೆ. ಅದಕ್ಕೆ ವಿಸ್ತ್ರತ ಯೋಜನಾ ವರದಿ ಕೂಡ ಸಿದ್ದಗೊಂಡಿದೆ.ಈಗಾಗಲೇ ಆಂಧ್ರದ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಆಂಧ್ರದ ಇಂಜಿನೀಯರ್ ತಂಡ ಬಂದು ಹೋಗಿದೆ. ಎರಡು ರಾಜ್ಯಗಳಿಗೂ ಅನುಕೂಲವಾಗುವಂತೆ ಕ್ರಮ ವಹಿಸಬೇಕಿದೆ. ಶೀಘ್ರದಲ್ಲಿಯೇ ಸರ್ವಪಕ್ಷಗಳ ಸಭೆಯನ್ನು ಕರೆದು ನಿರ್ಣಯ ಕೈಗೊಂಡು ತುಂಗಭದ್ರಾ ನದಿಯಲ್ಲಿನ ರಾಜ್ಯದ ಪಾಲಿನ ಎಲ್ಲ ನೀರನ್ನು ಬಳಸಿಕೊಂಡು ನಮ್ಮ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಹೆಚ್ಚಿನ ವಿವರಣೆ ನೀಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನವಿಲೆ ಬಳಿ ಈಗಾಗಲೇ ಸಮಾನಾಂತರ ಜಲಾಶಯ ನಿರ್ಮಿಸಲು ಉದ್ದೇಶಿಸಿದ್ದು13000 ಕೊಟಿ ರೂ.ಡಿಪಿಆರ್ ಸಿದ್ದಗೊಂಡಿದೆ. ಬಜೆಟ್ ನಲ್ಲಿ ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.