ಹೋಳಿ: ಗಂಗಾವತಿ ಪತ್ರಕರ್ತರ ಫೋಟೋ ಶೇರ್ ಮಾಡಿದ ಅನುಪಮ್ ಖೇರ್
Team Udayavani, Mar 20, 2022, 2:31 PM IST
ಗಂಗಾವತಿ : ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪಾತ್ರಗಳಂತೆ ಹೋಳಿ ಹಬ್ಬದಂದು ಗಂಗಾವತಿಯ ಪತ್ರಕರ್ತರು ಮುಖಕ್ಕೆ ಬಣ್ಣ ಹಚ್ಚಿಕೊಂಡಿದ್ದ ಫೋಟೋಗಳನ್ನ ನಟ ಅನುಪಮ್ ಖೇರ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡುವ ಮೂಲಕ ಮೆಚ್ಚಿಕೊಂಡಿದ್ದಾರೆ .
ಕಾಶ್ಮೀರಿ ಫೈಲ್ಸ್ ಚಿತ್ರ ರಿಲೀಸ್ ಆದ ನಂತರ ದೇಶದಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಈ ಮಧ್ಯೆ ಗಂಗಾವತಿಯಲ್ಲಿ ಶನಿವಾರ ಜರುಗಿದ ಹೋಳಿ ಹಬ್ಬದಂದು ಕೆಲವು ಪತ್ರಕರ್ತರು ನಟ ಅನುಪಮ್ ಖೇರ್ ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಶಿವನ ವೇಷದಲ್ಲಿ ಮುಖಕ್ಕೆ ಬಣ್ಣವನ್ನು ಹಚ್ಚಿಕೊಂಡಂತೆ ಚಿತ್ರವನ್ನ ಬಿಡಿಸಿಕೊಂಡು ಹೋಳಿ ಹಬ್ಬ ಆಚರಣೆ ಮಾಡಿದ್ದರು .ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಫೋಟೋಗಳನ್ನು ಕಾಶ್ಮೀರ್ ಫೈಲ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅನುಪಮ್ ಖೇರ್ ಹಂಚಿಕೊಂಡು ಸಂಭ್ರಮಿಸಿದ್ದಾರೆ.
This is the #TheKasmirFiles effect. People in Gangavati Karnataka were seen playing holi with this colour make up face which Anupam Kher ji had in movie.?@vivekagnihotri @AnupamPKher pic.twitter.com/L9jW0RD7wH
— Adarsh Hegde (@adarshahgd) March 19, 2022
ಹೋಳಿ ಹಬ್ಬ ಭಾವೈಕ್ಯತೆಯ ಹಬ್ಬವಾಗಿದೆ ಈ ಹಬ್ಬದ ಸಂದರ್ಭದಲ್ಲಿ ನನ್ನ ಸಹೋದರ ಭೀಮರಾಯ ದೇವಿಕೇರಿ ಒಬ್ಬ ಹವ್ಯಾಸಿ ಚಿತ್ರಕಲಾ ಕಲಾವಿದನಾಗಿದ್ದು ರಾಷ್ಟ್ರೀಯ ಅಂತಾರಾಷ್ಟ್ರೀಯ ಬಹುಮಾನ ಪಡೆದಿದ್ದಾರೆ .ಪ್ರತಿವರ್ಷ ಹೋಳಿ ಹುಣ್ಣಿಮೆ ಸಂದರ್ಭದಲ್ಲಿ ವಿಶೇಷ ಚಿತ್ರಗಳನ್ನು ಬಿಡಿಸುವ ಮೂಲಕ ಗಮನ ಸೆಳೆದಿದ್ದಾರೆ .ಹೋಳಿ ಹಬ್ಬದ ಸಂದರ್ಭದಲ್ಲಿ ನನಗೆ ಮತ್ತು ಇತರೆ ಪತ್ರಕರ್ತ ಗೆಳೆಯರಿಗೆ ಈ ವರ್ಷ ಮುಖಕ್ಕೆ ಶಿವನಂತೆ ಚಿತ್ರಿಸಿ ಗಮನ ಸೆಳೆದಿದ್ದಾರೆ . ನಗರದ ಕೆಲ ಪತ್ರಕರ್ತರು ಸೇರಿ ಹೋಳಿ ಹಬ್ಬವನ್ನು ಮುಖದ ಮೇಲೆ ಶಿವನಂತೆ ಚಿತ್ರವನ್ನು ಬಿಡಿಸಿಕೊಳ್ಳುವ ಮೂಲಕ ನಗರದಲ್ಲಿ ಬೈಕ್ ನಲ್ಲಿ ಸುತ್ತಾಡುವ ಮೂಲಕ ಹಬ್ಬ ಆಚರಿಸಿದ್ದೇವೆ ಈ ಫೋಟೋಗಳನ್ನ ನನ್ನ ಗೆಳೆಯರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ ಇದನ್ನು ಹಿರಿಯ ನಟ ಅನುಪಮ್ ಖೇರ್ ಅವರು ಗಮನಿಸಿ ತಮ್ಮ ಟ್ವೀಟ್ ಖಾತೆಯಲ್ಲಿ ಹಾಕಿರುವುದು ನನಗೆ ಸಂತೋಷ ತಂದಿದೆ ಎಂದು ಪತ್ರಕರ್ತರಾದ ಶ್ರೀನಿವಾಸ್ ದೇವಿಕೆರೆ ಸಂಭ್ರಮ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.