ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನಕ್ಕೆ ಕೇಂದ್ರಕ್ಕೆ ಮನವಿ
Team Udayavani, Oct 8, 2021, 6:31 PM IST
ನವದೆಹಲಿ: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಎನ್‍ಎಚ್‍ಎಂ ಅಡಿ ಅನುದಾನ ನೀಡಲು ಕೇಂದ್ರ ಸರಕಾರಕ್ಕೆ ಕೋರಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ, ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಆರೋಗ್ಯ ಸಚಿವರು, ರಾಜ್ಯ ಕೋವಿಡ್ ನಿರ್ವಹಣೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಲಸಿಕೆ ಡೋಸ್ ಸಂಗ್ರಹವಿದೆ. ಮೊದಲ ಡೋಸ್ ನಲ್ಲಿ ಶೇ.82 ಹಾಗೂ ಎರಡೂ ಡೋಸ್ ನಲ್ಲಿ ಒಟ್ಟು ಶೇ.37 ರಷ್ಟು ಪ್ರಗತಿಯಾಗಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ ಎನ್‍ಎಚ್‍ಎಂ ಅಡಿಯಲ್ಲಿ ಹೆಚ್ಚು ಅನುದಾನ ಬೇಕಿದೆ ಎಂದು ಕೋರಲಾಗಿದೆ. ಇದಕ್ಕೆ ಸಕಾರಾತ್ಮಕವಾದ ಸ್ಪಂದನೆ ಸಿಕ್ಕಿದೆ. ಜಿಲ್ಲೆಗಳಲ್ಲಿ ತುರ್ತು ಘಟಕ, ದ್ವಿತೀಯ, ತೃತೀಯ ಹಂತದ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಬಗ್ಗೆಯೂ ಚರ್ಚಿಸಲಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.
ಮಕ್ಕಳಿಗೆ ನೀಡಲಾಗುವ ಲಸಿಕೆಗೆ ನಾವೂ ಕಾಯುತ್ತಿದ್ದೇವೆ. ಇದು ಇನ್ನೂ ಪ್ರಯೋಗದ ಹಂತದಲ್ಲಿದೆ ಎಂದು ತಿಳಿದುಬಂದಿದೆ. ಲಸಿಕೆ ತಯಾರಿಕಾ ಕಂಪನಿಗಳೊಂದಿಗೆ ಚರ್ಚಿಸಿದ ಬಳಿಕ ಕೇಂದ್ರ ಸರಕಾರ ಈ ಬಗ್ಗೆ ಪ್ರಕಟಿಸಲಿದೆ. ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆಗೆ ಮಾರ್ಗಸೂಚಿ ನೀಡಲಾಗಿದೆ. ಕೊರೊನಾ ಪರೀಕ್ಷೆಯನ್ನು ನಿರಂತರವಾಗಿ ಮಾಡುತ್ತಿದ್ದು, ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ನಡೆಯುತ್ತಿದೆ. ಪಾಸಿಟಿವಿಟಿ ದರ 0.4% ಗಿಂತಲೂ ಕಡಿಮೆ ಇದೆ. ಆದ್ದರಿಂದ ಹೆಚ್ಚು ಆತಂಕವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.