ಗೃಹಜ್ಯೋತಿಗೆ ಇಂದಿನಿಂದ ಅರ್ಜಿ: ಸದ್ಯಕ್ಕೆ ದಾಖಲೆ ಕೇಳದ ಸರಕಾರ
ಆಧಾರ್, ಆರ್ಆರ್, ಮೊಬೈಲ್ ಸಂಖ್ಯೆ ನಮೂದಿಸಿ
Team Udayavani, Jun 18, 2023, 7:34 AM IST
ಬೆಂಗಳೂರು: ಐದು ಗ್ಯಾರಂಟಿಗಳ ಪೈಕಿ ಮತ್ತೂಂದು ಮಹತ್ವದ ಯೋಜನೆ “ಗೃಹಜ್ಯೋತಿ”ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ರವಿವಾರ ಚಾಲನೆ ದೊರೆಯಲಿದೆ. ದಿನಕ್ಕೆ ಗರಿಷ್ಠ ಹತ್ತು ಲಕ್ಷ ಜನ ಅರ್ಜಿ ಸಲ್ಲಿಸುವ ಸಾಮರ್ಥ್ಯದೊಂದಿಗೆ ಸೇವಾ ಸಿಂಧು ಪೋರ್ಟಲ್ ಮುಕ್ತಗೊಳಿಸಲಾಗು ತ್ತಿದೆ. ನೋಂದಣಿಯನ್ನು ಅತ್ಯಂತ ಸರಳಗೊಳಿಸಲಾಗಿದ್ದು, ಸದ್ಯಕ್ಕೆ ಕರಾರುಪತ್ರ ಸೇರಿದಂತೆ ಯಾವುದೇ ದಾಖಲೆಗಳನ್ನು ಕೇಳಿಲ್ಲ.
ಈಗಾಗಲೇ ಶಕ್ತಿ ಯೋಜನೆಗೆ ಚಾಲನೆ ದೊರಕಿದ್ದರೂ ಶಕ್ತಿ ಸ್ಮಾರ್ಟ್ ಕಾರ್ಡ್ಗಾಗಿ ನೋಂದಣಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಅದೇ ರೀತಿ ಗೃಹಲಕ್ಷ್ಮೀ ಯೋಜನೆಯ ನೋಂದಣಿಗೂ ತಾಂತ್ರಿಕ ಕಾರಣ ಗಳಿಂದ ಚಾಲನೆ ಸಿಕ್ಕಿಲ್ಲ.
ಯೋಜನೆಯಡಿ ಪ್ರತೀ ಗೃಹ ಬಳಕೆದಾರರಿಗೆ ಮಾಸಿಕ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಪೂರೈಸಲಾಗುತ್ತದೆ. ಸದ್ಯಕ್ಕೆ ಬಾಡಿಗೆದಾರರು ಕರಾರುಪತ್ರ ಮತ್ತಿತರ ದಾಖಲೆಗಳನ್ನು ಒದಗಿಸಬೇಕಾ ಗಿಲ್ಲ. ಆಧಾರ್ ಸಂಖ್ಯೆ, ಬಿಲ್ನಲ್ಲಿ ನೀಡಲಾದ ವಿದ್ಯುತ್ ಖಾತೆ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಬೇಕು. ಇದರೊಂದಿಗೆ ಬಾಡಿಗೆ ದಾರರಲ್ಲಿದ್ದ ಆತಂಕ ಆರಂಭಿಕ ಹಂತ ದಲ್ಲಿ ನಿವಾರಣೆಯಾದಂತಾಗಿದೆ. ನೋಂದಣಿಗೆ ಕ್ಯುಆರ್ ಕೋಡ್ ಕೂಡ ನೀಡಲಾಗಿದ್ದು, ಅದನ್ನು ಸ್ಕ್ಯಾನ್ ಮಾಡಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸೇವಾ ಸಿಂಧುವಿನಲ್ಲಿ ಸುಮಾರು 200ಕ್ಕೂ ಅಧಿಕ ಸೇವೆಗಳನ್ನು ನೀಡಲು ಸಾಧ್ಯವಿದೆ. ಸರಕಾರದ ಬಹುತೇಕ ಯೋಜನೆಗಳನ್ನು ಇದರ ಮೂಲಕ ಒದಗಿಸಲಾಗುತ್ತಿದೆ. ಈಗ ಪ್ರಮುಖ ಗ್ಯಾರಂಟಿಗಳ ಫಲಾನುಭವಿಗಳಿಗೂ ಸೇವಾ ಸಿಂಧು ವೇದಿಕೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.