ಅರಂತೋಡು : ಪಿಕಪ್ ಡಿಕ್ಕಿ ಹೊಡೆದು ಓರ್ವ ಸಾವು, ಇಬ್ಬರು ಗಂಭೀರ
Team Udayavani, Mar 11, 2021, 12:29 AM IST
ಅರಂತೋಡು : ಅರಂತೋಡು ಸಮೀಪದ ಪೆರಾಜೆಯಲ್ಲಿ ಪಿಕಪ್ ಡಿಕ್ಕಿ ಹೊಡೆದು ದುಗಲಡ್ಕದ ಯುವಕನೋರ್ವ ಮ್ರತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ದುಗಲಡ್ಕದ ಮೂರು ಯುವಕರು ಪೆರಾಜೆಯಲ್ಲಿ ಅಡಿಕೆ ಮರ ಕಡಿಯುವ ಕೆಲಸ ಮಾಡಿ ಮನೆಗೆ ತೆರಳಲು ಇಬ್ಬರು ಬೈಕಿನಲ್ಲಿ ತೆರಳಿದರೆ, ಇನ್ನೋರ್ವ ಬಸ್ಸಿಗಾಗಿ ಕಾಯುತ್ತಿದ್ದ ಈ ಸಂದರ್ಭ ಎದುರಿನಿಂದ ಬಂದ ಪಿಕಪ್ ವಾಹನ ಬೈಕಿಗೆ ಡಿಕ್ಕಿ ಹೊಡೆದು ಬಳಿಕ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬ್ಯಾರಿಕೇಡ್ ಪಕ್ಕದಲ್ಲಿ ನಿಂತು ಬಸ್ಸು ಕಾಯುತ್ತಿದ್ದ ಸಹಪಾಟಿಗೂ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯರು ಸುಳ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯುವ ವೇಳೆ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದ್ದ ಯುವಕನನ್ನು ದುಗಲಡ್ಕ ನಿವಾಸಿ ರಪೀಕ್ ಮರ್ಸಾದ್ ಎನ್ನಲಾಗಿದೆ. ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.