ಅಮಿತ್ ಶಾ ಬೆಲ್ಲದ್ ಭೇಟಿ ಮರ್ಮವೇನು?
Team Udayavani, Apr 2, 2022, 4:03 PM IST
ಬೆಂಗಳೂರು : ಮಾಜಿ ಸಿಎಂ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ವಿರುದ್ಧ ಬಂಡಾಯ ನಾಯಕರ ಗುಂಪಿನಲ್ಲಿ ಮುಂಚೂಣಿಯಲ್ಲಿದ್ದ ಶಾಸಕ ಅರವಿಂದ ಬೆಲ್ಲದ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಧಿಡೀರ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದ ಬೆಲ್ಲದ್ ಬದಲು ಕೊನೆ ಹಂತದಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿತ್ತು. ಇದಾದ ಬಳಿಕ ಪಕ್ಷದ ವಲಯದಲ್ಲಿ ಬಹುತೇಕ ನೇಪಥ್ಯದಲ್ಲಿ ಉಳಿದಿದ್ದ ಬೆಲ್ಲದ್ ಈಗ ಮತ್ತೆ ಚರ್ಚೆಯ ವಲಯಕ್ಕೆ ಬಂದಿದ್ದಾರೆ.
ದಿಲ್ಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಬೆಲ್ಲದ್ , ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲೂ ಶಾ ಜತೆ ಕಾಣಿಸಿಕೊಂಡಿದ್ದಾರೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಬೆಲ್ಲದ್ ಗೆ ಆಯಕಟ್ಟಿನ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬೆಲ್ಲದ್, ಆರು ತಿಂಗಳು ಹಿಂದೆಯೇ ನಾನು ಭೇಟಿಗೆ ಕಾಲಾವಕಾಶ ಕೋರಿದ್ದೆ. ಆದರೆ ಈಗ ಭೇಟಿಗೆ ಅವಕಾಶ ನೀಡಿದ್ದರು. ಉತ್ತರ ಕರ್ನಾಟಕ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.