ಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ: ಲಾರಿ ಪೊಲೀಸ್ ವಶದಲ್ಲಿ
Team Udayavani, Jun 10, 2023, 5:19 AM IST
ಕಾರ್ಕಳ: ಕೆದಿಂಜೆ ಬಳಿ ಅಪಘಾತ ನಡೆಸಿ ಪಾದಚಾರಿಯೋರ್ವರ ಸಾವಿಗೆ ಕಾರಣವಾದ ಲಾರಿ ಹಾಗೂ ಚಾಲಕನನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇ 25ರಂದು ರಾತ್ರಿ ಒಡಿಶಾ ಮೂಲದ ಲಕ್ಷಣ್ ಮುರ್ಮು, ಘನಶ್ಯಾಮ್ ಮುರ್ಮು ಮತ್ತು ಕರಣ್ ಮುರ್ಮು ಅವರು ಕೆದಿಂಜೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಾರ್ಕಳ ಕಡೆಗೆ ವೇಗವಾಗಿ ಸಾಗುತ್ತಿದ್ದ ವಾಹನ ಘನಶ್ಯಾಮ್ ಮತ್ತು ಕರಣ್‌ಗೆ ಢಿಕ್ಕಿ ಹೊಡೆದಿದೆ. ಘನಶ್ಯಾಮ್ ಮತ್ತು ಕರಣ್‌ಗೆ ಗಂಭೀರ ಸ್ವರೂಪದ ಗಾಯವಾಗಿ ಪ್ರಜ್ಞೆ ಕಳೆದುಕೊಂಡಿದ್ದರು.
ಗಾಯಗೊಂಡವರ ಪೈಕಿ ಘನಶ್ಯಾಮ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟರು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಪಘಾತವೆಸಗಿದಾತ ವಾಹನದೊಂದಿಗೆ ಚಾಲಕ ಪರಾರಿಯಾಗಿದ್ದ. ಢಿಕ್ಕಿ ಹೊಡೆದು ಪಲಾಯನಗೈದ ವಾಹನದ ಪತ್ತೆಗಾಗಿ ಕಾರ್ಕಳ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ. ಮತ್ತವರ ತಂಡ ಎಲ್ಲ ತನಿಖೆ ಕೈಗೊಂಡಿದ್ದರು. ಸಿಸಿ ಟಿವಿ ದೃಶ್ಯಾವಳಿ ಪರಿಶೀಲನೆ, ಸಾರ್ವಜನಿಕರ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಾಪುರದ ಬಿ.ಸಿ. ರೋಡ್ ನಿವಾಸಿ ಲಾರಿ ಮಾಲಕ ಮತ್ತು ಚಾಲಕ ಸುರೇಶ್ ಶೆಟ್ಟಿ ಅಪಘಾತವೆಸಗಿ ಬಳಿಕ ಸುಳಿವು ಸಿಗದಂತೆ ನೋಡಿಕೊಂಡಿದ್ದ. ಅಪಘಾತ ಸಂಭವಿಸಿದ ಕೂಡಲೇ ಚಾಲಕ ಸುರೇಶ್ ಲಾರಿಯನ್ನು ಅಡ್ಡದಾರಿಯಲ್ಲಿ ನಿಲ್ಲಿಸಿ ಯಾರಿಗೂ ತನ್ನ ಮೇಲೆ ಅನುಮಾನ ಮೂಡದಂತೆ ನೋಡಿಕೊಂಡಿದ್ದ. ಬಳಿಕ ಕುಂದಾಪುರದ ಗ್ಯಾರೇಜ್ ಒಂದರಲ್ಲಿ ಲಾರಿಯನ್ನು ಸರ್ವಿಸ್‌ಗೆ ಇಟ್ಟಿದ್ದ. ಪೊಲೀಸರು ಆತನನ್ನು ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.